ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್ ಪ್ರಶಸ್ತಿ ಪ್ರದಾನಿಸಿದರು.