ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡದ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಬಳಿ ನಡೆದಿದೆ.
ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಬಸ್ ಕರೆದುಕೊಂಡು ಹೋಗುತ್ತಿತ್ತು. ತಾಂತ್ರಿಕ ದೋಷದಿಂದ ಇಳಿಜಾರಿನ ರಸ್ತೆಯಲ್ಲಿ ನೇರವಾಗಿ ಕೆಳಗೆ ಬಸ್ ಚಲಿಸಿದೆ.
ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಶಾಲಾ ವಾಹನ ನಿಂತಿದೆ. ಬಸ್ಸಿನಲ್ಲಿ 15ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಇದ್ದರು. ಅದೃಷ್ಟವಶಾತ್ ಅಪಾಯದಿಂದ ಮಕ್ಕಳು ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದೆ.

