ಮಂಗಳೂರು : ಸರಕಾರಿ ಆಸ್ಪತ್ರೆಗಳ ಖಾಸಗೀಕರಣದ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಆರೋಗ್ಯ ಹಕ್ಕನ್ನು ಕಸಿದುಕೊಳ್ಳುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ, SDPI ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದು ಆರೋಗ್ಯ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಕ್ರಮದ ವಿರುದ್ಧ ಜನರ ಧ್ವನಿಯನ್ನು ನಾಯಕರು ಪ್ರತಿಭಟನೆಯಲ್ಲಿ ವ್ಯಕ್ತಪಡಿಸಲಿದ್ದಾರೆ. ಪ್ರತಿಭಟನಾ ನಿರತರು ಪ್ಲೇ ಕಾರ್ಡ್ ಪ್ರದಶಿಸಿ ಪ್ರಭಟನೆಯಲ್ಲಿ ಉಪಸ್ಥಿತರಿದ್ದರು.