ದಕ್ಷಿಣ ಕನ್ನಡ: ಬಿಜೆಪಿಯ ಮಾಜಿ ಸಚಿವ, ಹಾಗೂ ಗಂಗಾವತಿ ಶಾಸಕರಾದ ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಅವರ ಧರ್ಮಪತ್ನಿಯಾದ ಶ್ರೀ ಲಕ್ಷ್ಮಿ ಅರುಣಾ ಅವರು ಇಂದು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಪ್ರತಿಷ್ಠಿತ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಸುಬ್ರಮಣ್ಯ ಸ್ವಾಮಿ ದೇವಸ್ಥಾನ, ಬ್ರಹ್ಮಲಿಂಗೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ ಹವನಗಳನ್ನು ಮಾಡಿ ದೇವರಲ್ಲಿ ಪ್ರಾರ್ಥಿಸಿದರು.