ಮಂಗಳೂರು: ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್ (ರಿ), ಕ. ರಾ. ರ. ಸಾ. ನಿಗಮ, ಮಂಗಳೂರು ವಿಭಾಗದ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಗಿದೆ.
ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀ ರಾಜೇಶ್ ಶೆಟ್ಟಿ, ಅಧ್ಯಕ್ಷರಾಗಿ ಶ್ರೀ ಅಶೋಕ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ದೀಪಕ್ ನಾನಿಲ್, ಉಪಾಧ್ಯಕ್ಷರಾಗಿ ಶ್ರೀ ಚಂದ್ರಶೇಖರ್, ಕೋಶಾಧಿಕಾರಿಯಾಗಿ ಶ್ರೀ ಅಕಿಲೇಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಶ್ರೀ ರಮಿತ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಟ್ರಸ್ಟ್ನ ಸದಸ್ಯರು ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದು, ಮುಂಬರುವ ದಿನಗಳಲ್ಲಿ ಟ್ರಸ್ಟ್ನ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಇನ್ನಷ್ಟು ಯಶಸ್ವಿಯಾಗಿ ಮುನ್ನಡೆಸುವಂತೆ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಿದ್ದಾರೆ.

