ಮಂಗಳೂರು: ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಮಂಗಳೂರು ನಗರ ದಕ್ಷಿಣ ಶಾಸಕರು ಡಿ.ವೇದವ್ಯಾಸ ಕಾಮತ್ ಹೇಳಿದರು.

ಎಸ್.ಡಿಪಿ.ಐ, ಪಿ.ಎಫ್.ಐ ನಂತಹ ಮತಾಂಧ ಶಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರಿಗೆ ಇನ್ನಷ್ಟು ದುಷ್ಕೃತ್ಯಕ್ಕೆ ಬೆಂಬಲಿಸಿದ್ದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದರು. ಕೂಡಲೇ ಪೊಲೀಸ್ ಇಲಾಖೆ ಹಂತಕರ ಹೆಡೆಮುರಿ ಕಾನೂನಿನ ಬಲೆಯೊಳಗೆ ತಂದು ನಿಲ್ಲಿಸಬೇಕು ಎಂದು ಆಗ್ರಹಿಸಿದರು.