ಮಂಗಳೂರು: ಮುಸಲ್ಮಾನರ ಪವಿತ್ರ ಹಬ್ಬ ಈದ್ ಮಿಲಾದ್ ಮುನ್ನಾದಿನ ಕರಾವಳಿಯ ಮಂಗಳೂರಿನ ಎರಡು ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ ಮತ್ತು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳ ಪಟ್ಟಣ ಮತ್ತು ಬಿ.ಸಿ.ರೋಡ್‌ನಲ್ಲಿ ಇಂದು ಸೋಮವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಬದರಿಕೊಪ್ಪಲು ಗ್ರಾಮದಿಂದ ಭಕ್ತರು ಗಣೇಶ ಮೂರ್ತಿ ಮೆರವಣಿಗೆ ಪೂಜಾ ಸ್ಥಳಕ್ಕೆ ತಲುಪಿದಾಗ ಎರಡು ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು, ಇದು ಪರಿಸ್ಥಿತಿ ವಿಕೋಪಕ್ಕೆ ಕಾರಣವಾಯಿತು. ಎರಡು ಗುಂಪುಗಳ ನಡುವಿನ ಘರ್ಷಣೆಯ ನಂತರ, ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಪನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಂಡಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 46 ಜನರನ್ನು ಇದುವರೆಗೆ ಬಂಧಿಸಲಾಗಿದೆ.