ಮಂಗಳೂರು : ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೆಪ್ಟೆಂಬರ್ 2ರಂದು ಬಟ್ಟೆಗಳು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಸಿಸಿ ಕ್ಯಾಮರಾ ಪರಿಶೀಲಿಸಿದಾಗ, ಅಪರಿಚಿತ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ಬಟ್ಟೆಗಳನ್ನು ಕಳವು ಮಾಡುತ್ತಿರುವುದು ಪತ್ತೆಯಾಗಿತ್ತು.
ಈ ಬಗ್ಗೆ ಸೆಪ್ಟೆಂಬರ್ 5ರಂದು ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು ಸೆಪ್ಟೆಂಬರ್ 7ರಂದು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

