ಮಂಗಳೂರು : ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗಕ್ಕೆ ಸಾವಿರಾರು ಕೋಟಿ ರು. ಅನುದಾನ ಘೋಷಿಸಿರುವುದು ಬರಿ ಕಣ್ಣೊರೆಸುವ ತಂತ್ರ. ರಾಜ್ಯದ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ನೈಜವಾಗಿ ಅನುದಾನ ನೀಡಲಾಗದೆ ಜನತೆಗೆ ಕಾಂಗ್ರೆಸ್ ಸರ್ಕಾರ ‘ಅಂಗೈಯಲ್ಲಿ ಆಕಾಶ’ ತೋರಿಸುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ಸಭೆಗೂ ಮುನ್ನವೇ ಆರ್ಥಿಕ ಇಲಾಖೆಯು ಮುಖ್ಯಮಂತ್ರಿಗೆ ಪತ್ರ ಬರೆದು ರಾಜ್ಯದಲ್ಲಿ ತೀವ್ರ ಆರ್ಥಿಕ ಅಭಾವವಿದ್ದು, ಹೊಸ ಘೋಷಣೆಗಳನ್ನು ಮಾಡಬೇಡಿ ಎಂದು ಸ್ಪಷ್ಟವಾಗಿ ಉಲ್ಲೇಖಿಸಿತ್ತು. ಹೀಗಿದ್ದರೂ ಸಂಪುಟ ಸಭೆಯಲ್ಲಿ ಕರಾವಳಿಗೆ ₹32,000 ಕೋಟಿಗೂ ಹೆಚ್ಚು ಅನುದಾನ ಘೋಷಿಸಿರುವುದು ಕೇವಲ ಪ್ರಚಾರಕ್ಕಾಗಿ ಎಂಬುದು ಸಾಬೀತಾಗಿದೆ ಎಂದು ಆರೋಪಿಸಿದರು.

View this post on Instagram

A post shared by News Karnataka (@newskarnataka)