ಮಂಗಳೂರು : ಚಂದ್ರ ಗ್ರಹಣ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳದ ಬಾಗಿಲು ಬಂದ್ ಮಾಡಲಾಗಿದೆ. ಮಂಜುನಾಥ ಸ್ವಾಮಿಗೆ ಮಹಾಪೂಜೆ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ. ಮಧ್ಯಾಹ್ನ 1.30ರವರೆಗಷ್ಟೇ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಇನ್ನು ಸಂಜೆ 7.30ರವರೆಗೆ ಮಂಜುನಾಥ ಸ್ವಾಮಿ ದರ್ಶನಕ್ಕೆ ಅವಕಾಶವಿಲ್ಲ. ಚಂದ್ರ ಗ್ರಹಣದ ಮೋಕ್ಷದವರೆಗೆ ಸಂಪೂರ್ಣ ದೇವಸ್ಥಾನ ಬಂದ್ ಮಾಡಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ಅನ್ನದಾನ ಸೇವೆಯೂ ಸಂಪೂರ್ಣ ಸ್ಥಗಿತವಾಗಿತ್ತು. ಶುದ್ದೀಕರಣದ ಬಳಿಕ ಮತ್ತೆ 7.30ಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ತೆರೆಯಲಿದೆ.

