ಉಪ್ಪಿನಂಗಡಿ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯಾಳನ್ನು ಬರ್ಬರವಾಗಿ ಹತ್ಯೆ ವಾಡಿದ್ದ ಆರೋಪಿ ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ಬುಧವಾರ ಮಹಜರು ಪ್ರಕ್ರಿಯೆ ನಡೆಸಲಾಯಿತು.

ಜು.15ರಂದು ಉಪ್ಪಿನಂಗಡಿಗೆ ಆಗಮಿಸಿದ್ದ ಆರೋಪಿ ಅಲ್ಲಿ ಕೃಷಿ ಸಲಕರಣೆಗಳ ಮಾರಾಟ ಮಳಿಗೆಗೆ ಭೇಟಿ ನೀಡಿ ಕೃಷಿಕರು ಬಳಸುವ ಉದ್ದನೆಯ ಕತ್ತಿಯನ್ನು ಪರಿಶೀಲಿಸಿ ಅದರ ಬೆಲೆ ಕೇಳಿ ತೆರಳಿದ್ದ.

ಬಳಿಕ ಹೊರಗೆ ಹೋಗಿದ್ದ ಆತ ವಾಪಸ್ ಅದೇ ಅಂಗಡಿಗೆ ಬಂದು ಕತ್ತಿಯನ್ನು ಖರೀದಿಸಿದ್ದ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿವೆ. ಈ ಬಗ್ಗೆ ತನಿಖಾಧಿಕಾರಿಗಳು ಆರೋಪಿ ಚೇತನ್ ಜತೆ ಸ್ಥಳಕ್ಕೆ ಕರೆ ತಂದು ಮಹಜರು ಪ್ರಕ್ರಿಯೆ ನಡೆಸಿದರು.