ಮಂಗಳೂರು: ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ನಡೆದು 11ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಮಹಿಳೆಯರು, ಮಕ್ಕಳು ಅಸ್ವಸ್ಥರಾಗಿದ್ದು,  ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ  ‘ಅಶೋಕ ಜನಮನ -2025 ನಡೆಯಿತು.ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಯಿತು.

ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾಗಿದ್ದರು. ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಜನ ಅಸ್ವಸ್ಥರಾಗಿದ್ದಾರೆ. ಕುಡಿಯಲು ನೀರು ಸಿಗದೆ ಜನರು ಪರದಾಡಿದ್ದಾರೆ.  ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಜನ  ಬಂದಿದ್ದರು.

ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗುತ್ತು.  ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಶಾಸಕ ಅಶೋಕ್  ರೈ ಮಾಲಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಕಾರ್ಯಕ್ರಮವಾಗಿತ್ತು. ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಅಶೋಕ ಜನಮನ ಕಾರ್ಯಕ್ರಮವಾಗಿದ್ದು, ಸಿ.ಎಂ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.