ಮಂಗಳೂರು : ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ನೀಡಲಾಗಿದೆ, ಬೈಠಕ್ ನಡೆಸಲಾಗಿದೆ ಎಂಬ ಆರೋಪಗಳ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಂಜುನಾಥ ಭಂಡಾರಿ, ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್‌ನ ಯಾವುದೇ ಚಟುವಟಿಕೆ ನಡೆದಿಲ್ಲ.
ಸರಕಾರದ ಕೈಗಾರಿಕಾ ಸಂಸ್ಥೆಯ ಮೂಲಕ ರಾಜ್ಯದ ಸುಮಾರು 300 ಕಾಲೇಜುಗಳ ವಿದ್ಯಾರ್ಥಿಗಳ ಭಾಗವಹಿಸಿದ್ದ ‘ಸೃಷ್ಟಿ’ ಎಂಬ ಪ್ರಾಜೆಕ್ಟ್ ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿತ್ತು. ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಕಾರ್ಯಕ್ರಮ ಆದಾಗಿದ್ದು, ಸರಕಾರದ ಹಿರಿಯ ಅಧಿಕಾರಿಗಳು, ವಿವಿಧ ಐಟಿ ಕಂಪನಿಗಳವರು ಅದರಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿ ಸಂಘಟನೆಯಾಗಿ ಎಬಿವಿಪಿ ಬೆಂಬಲ ನೀಡಿತ್ತು. ಅದು ವಿದ್ಯಾರ್ಥಿಗಳ ಪ್ರಾಜೆಕ್ಟ್ ಆಧಾರಿತ ಕಾರ್ಯಕ್ರಮ ಎಂಬ ನೆಲೆಯಲ್ಲಿ ಅವಕಾಶ ನೀಡಲಾಗಿತ್ತೇ ಹೊರತು ಅಲ್ಲಿ ಯಾವುದೇ ಆರೆಸ್ಸೆಸ್ ಚಟುವಟಿಕೆ ಅಥವಾ ಬೈಠಕ್ ನಡೆಸಲಾಗಿಲ್ಲ ಎಂದು ಹೇಳಿದರು.

