ಮಂಗಳೂರು: : ವಾಮಂಜೂರಿನ ಮಂಗಳ ಜ್ಯೋತಿ ಪ್ರದೇಶದ ಕೊರಗ ಸಮುದಾಯದ 33 ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ನಿವೇಶನವನ್ನು ಶೀಘ್ರವಾಗಿ ವಿತರಿಸುವಂತೆ ಆಗ್ರಹಿಸಿ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ವತಿಯಿಂದ ಸೋಮವಾರ (ಅಕ್ಟೋಬರ್ 12, 2026) ಪಾದಯಾತ್ರೆ ಹಾಗೂ ಅರೆಬೆತ್ತಲೆ ಮೆರವಣಿಗೆ ನಡೆಯಿತು.

ವಾಮಂಜೂರಿನ ಮಂಗಳ ಜ್ಯೋತಿಯಿಂದ ಆರಂಭಗೊಂಡ ಪಾದಯಾತ್ರೆಯು ಕುಲಶೇಖರ, ನಂತೂರು, ಪಂಪ್‌ವೆಲ್ ಮಾರ್ಗವಾಗಿ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯವರೆಗೆ ಸಾಗಿತು.

ಕೊರಗ ಸಮುದಾಯದ 33 ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ನಿವೇಶನವನ್ನು ವಿಳಂಬವಿಲ್ಲದೆ ವಿತರಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿತ್ತು. ಪಾದಯಾತ್ರೆಯ ಬಳಿಕ ಪಡೀಲ್‌ನಲ್ಲಿ ಬಹಿರಂಗ ಸಭೆ ನಡೆಯಿತು. ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ಶೀಘ್ರ ನ್ಯಾಯ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಲಾಯಿತು.