ದಕ್ಷಿಣ ಕನ್ನಡ: ಕರಾವಳಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ದ.ಕ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

