ಬೆಳ್ತಂಗಡಿ : ಬೆಳ್ತಂಗಡಿಯ ಪುಂಜಾಲ ಕಟ್ಟೆಯಲ್ಲಿ ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನಿಬ್ಬರು ಗಂಭೀರಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಮೃತದುರ್ದೈವಿಯಾಗಿದ್ದಾರೆ. ವಗ್ಗ ಸಮೀಪದ ‌ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡೊಯ್ಯುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.

ಗಾಯಗೊಂಡವರ ಪೈಕಿ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ಲಭಿಸಿದೆ. ಪಲ್ಟಿಯಾದ ಲಾರಿಯ ಅಡಿಯಲ್ಲಿ ಸಿಲುಕಿದ್ದವರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ.