ಮಂಗಳೂರು: ಬ್ಯಾಪ್ಟಿಸ್ಟ್ ಸ್ಪೋರ್ಟ್ಸ್ ಫೌಂಡೇಶನ್ (ರಿ)ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬ್ಯಾಪ್ಟಿಸ್ಟ್ ಬ್ಯಾಡ್ಮಿಂಟನ್ ಅಕಾಡೆಮಿ, ಉರ್ವಸ್ಟೋರ್ ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗಳ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ರಾಜ್ಯೋತ್ಸವ ಕಪ್ 2024 ಉದ್ಘಾಟನಾ ಸಮಾರಂಭ ಅಕ್ಟೋಬರ್‌ 26 ರಂದು ಬೆಳಿಗ್ಗೆ 9.30ಕ್ಕೆ ಮಂಗಳಾ ಕ್ರೀಡಾಂಗಣ ಮಂಗಳೂರಿನಲ್ಲಿ ನಡೆಯಲಿದೆ.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಪ್ರದೀಪ್ ಡಿಸೋಜ ಸಹಾಯಕ ನಿರ್ದೇಶಕರು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು ವಹಿಸಲಿದ್ದು, ಕಾರ್ಯಕ್ರಮವನ್ನು ಸುನಿಲ್ ಬಾಳಿಗಾ ಸಿಎಜಿ ಇಂಡಿಯಾ ಕೇಂದ್ರ ಸರ್ಕಾರ, ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರರು ಉದ್ಘಾಟಿಸಲಿದ್ದಾರೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಮತಿ ಲಿಲ್ಲಿ ಪಾಯ್ಸ್, ಅಧ್ಯಕ್ಷರು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ದ ಕ ಇವರು ವಹಿಸಲಿದ್ದಾರೆ. ಸಂಜೆ 4.00 ಗಂಟೆಗೆ ಬಹುಮಾನ ವಿತರಣೆಯನ್ನು ಶ್ರೀ ಎವರೆಸ್ಟ್ ಪಿಂಟೊ, ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರರು ನಡೆಸಲಿದ್ದಾರೆ.