ಮಂಗಳೂರು: ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಜನವರಿ 7ನೇ ತಾರೀಕಿನಿಂದ  ಸಂಜೆ 5.00  ರಿಂದ 6.30  ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ. 

ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರು  ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು. 

ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ 2414412  ಸಂಪರ್ಕಿಸಿ.