Showing 20 of 4463 posts • Page 13 of 224
ಪಡೀಲ್ ಕಣ್ಣೂರು ಬಳಿ ಮಸೀದಿ ಒಂದರ ಹಿಂಬದಿಯಲ್ಲಿ 7 ದನಗಳು ಇರುವ ಬಗ್ಗೆ ಮಾಹಿತಿ ಲಭ್ಯದ ಹಿನ್ನಲೆಯಲ್ಲಿ ಕಂಕನಾಡಿ ಪೊಲೀಸರು ಪರಿಶೀಲಿಸಿ 7 ದನಗಳನ್ನ ವಶಪಡಿಸಿಕೊಂಡು ಮಂಗಳೂರು ಹೊರವಲಯದ ಪಜೀರು ಗೋ ಆಶ್ರಮಕ್ಕೆ ನೀಡಿದ ಘಟನೆ ನಡೆದಿದ್ದು ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಬ್ಬದ ಕಾರ್ಯಕ್ರಮ ಹಾಗೂ ಮೆರವಣಿಗೆ ಆಯೋಜಿಸಲು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು.
ಕಾಯಕವೇ ಕೈಲಾಸವೆಂದು ನಂಬಿರುವ ಪೌರಕಾರ್ಮಿಕ ಸೇಸಪ್ಪ ತಮ್ಮ ಕಾರ್ ಕ್ರೇಜ್ನಿಂದಾಗಿ ಹಗಲಿರುಳು ಶ್ರಮಿಸಿ ತಮ್ಮ ಕನಸಿನ ಫಾರ್ಚೂನರ್ ಅನ್ನು 30 ವರ್ಷಗಳ ಕಠಿಣ ದುಡಿಮೆಯಿಂದ ತಮ್ಮದಾಗಿಸಿಕೊಂಡಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈದ್ ಮಿಲಾದ್ ಸಂಭ್ರಮ ನಡೆಯುತ್ತಿದ್ದು, ಪುತ್ತೂರಿನಲ್ಲಿ ಬಂದ್ ನಡುವೆ ಶಾಂತಿಯುತವಾಗಿ ಮೆರವಣಿಗೆ ಸಾಗಿತು.
ಪುತ್ತೂರಿನ ದರ್ಬೆಯಲ್ಲಿ ವರ್ತಕರ ಮೇಲೆ ಹಲ್ಲೆ ಪ್ರಕರಣದ ಘಟನೆಯನ್ನು ಖಂಡಿಸಿ ಇಂದು ಪುತ್ತೂರು ಬಂದ್ ಮಾಡಲಾಗಿದೆ.
ಸುರತ್ಕಲ್ ಸಮೀಪದ ಮಾದವ ನಗರದ ವೆಟ್ವೆಲ್ ಒಳಗಿರುವ ಎಸ್ಟಿಸಿ ಆವರಣದಲ್ಲಿ ಪೂರ್ವಾನುಮತಿ ಪಡೆಯದೆ ಮರಗಳನ್ನು ಕಡಿದು ಸಾಗಿಸಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ.ಜಿ. ಹೆಗಡೆ ಆಗ್ರಹಿಸಿದ್ದಾರೆ.
ತನ್ನ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿರುವ ಎಂಸಿಸಿ ಬ್ಯಾಂಕ್ 2025–26ನೇ ಸಾಲಿನ ಪಟ್ಟಣ ಸಹಕಾರ ಬ್ಯಾಂಕ್ ವಿಭಾಗದಲ್ಲಿ ಅತ್ಯುತ್ತಮ ಸಾಧನೆಗಾಗಿ ಎಸ್ಸಿಡಿಸಿಸಿ ಬ್ಯಾಂಕಿನ ಪ್ರತಿಷ್ಠಿತ “ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿ 2025–26″ಗೆ ಭಾಜನವಾಗಿದೆ.
ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮೂಲಕ 4,500 ಕೋಟಿಗೂ ಹೆಚ್ಚು ವಂಚನೆ ಪ್ರಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಶಿವಾನಂದ ನೀಲಣ್ಣವರ ನನ್ನು ಸೋಮವಾರ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಅಕ್ರಮ ಗೋ ಸಾಗಾಟ ಪತ್ತೆಯಾಗಿದ್ದು, ಕುಳೂರ್ ರಾಷ್ಟ್ರೀಯ ಹೆದ್ದಾರಿ ಬಳಿ ಪೊಲೀಸರು ತಡೆದಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಕಸಬಾ ಬೆಂಗ್ರೆಯ ಫೆರಿ ಪಾಯಿಂಟ್ ಸಮೀಪ ನದಿಯ ಬಳಿ ಮಕ್ಕಳು ಫುಟ್ಬಾಲ್ ಆಡುತ್ತಿದ್ದ ಸಂದರ್ಭದಲ್ಲಿ ಚೆಂಡು ನದಿಗೆ ಬಿದ್ದಿದೆ.
ದರ್ಬೆ ಗಲಾಟೆ ವಿಚಾರವಾಗಿ ಪುತ್ತೂರಿನಲ್ಲಿ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಬಾಂಗ್ಲಾ ವಲಸಿಗರ ಹಸ್ತಾಂತರಕ್ಕೆ ಸಿದ್ಧತೆ ನಡೆಯಿತು. ಮಂಗಳೂರು ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು.
ಮೀನುಗಾರಿಕಾ ಬೋಟ್ ಮುಳುಗಡೆಯಾಗಿರುವ ಘಟನೆ ಮಂಗಳೂರಿನ ಅಳಿವೆಬಾಗಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೇ ಪ್ರಯಾಣಿಕರ ದಶಕಗಳ ಬಾಕಿ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ತಲುಪಿದೆ. ಪ್ರಸ್ತುತ ದಕ್ಷಿಣ ರೈಲ್ವೆ ವಲಯದ (Southern Railway) ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವಲಯದ (SWR) ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಕುರಿತು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾಹಿತಿ ನೀಡಿದ್ದಾರೆ.
ದಾಖಲೆಪತ್ರ ಲ್ಯಾಮಿನೇಷನ್ ಮಾಡುವಾಗ ತಾಂತ್ರಿಕ ದೋಷದಿಂದ ಸುಟ್ಟುಹೋದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ಪುತ್ತೂರಿನ ದರ್ಭೆಯಲ್ಲಿ ಆಗಸ್ಟ್ 21ರ ಮಧ್ಯಾಹ್ನ ಸಂಭವಿಸಿದೆ.
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್ ಮಾಡಿದ್ದೇವೆ. ಆದ್ರೆ ನಮ್ಮ ರಾಜ್ಯದಲ್ಲಿ ಕೃತಕ ಪನೀರ್ ಯಾರು ಬಳಸುತ್ತಿಲ್ಲ.
ಪ್ರತಿಪಕ್ಷ ಇವತ್ತು ಜನ ಸಾಮಾನ್ಯರ ಟ್ಯಾಕ್ಸ್ ದುಡ್ಡು ವ್ಯರ್ಥ ಮಾಡ್ತಿದೆ. ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು.
ಒಂಬತ್ತನೇ ಕ್ಲಾಸ್ ಕಲಿಯುತ್ತಿರುವ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಹೆತ್ತವರನ್ನು ಕೊಲ್ಲುತ್ತೇನೆಂದು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 5 ವರ್ಷ ಜೈಲು, ₹35,000 ದಂಡ ವಿಧಿಸಿದ ಕೋರ್ಟ್ ಆದೇಶ ಹೊರಡಿಸಿದೆ.
ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್(15) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಹಾಗೂ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್ಎಸ್ಎಲ್) ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗಿದೆ.