Showing 20 of 4469 posts • Page 14 of 224
ದಾಖಲೆಪತ್ರ ಲ್ಯಾಮಿನೇಷನ್ ಮಾಡುವಾಗ ತಾಂತ್ರಿಕ ದೋಷದಿಂದ ಸುಟ್ಟುಹೋದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ಪುತ್ತೂರಿನ ದರ್ಭೆಯಲ್ಲಿ ಆಗಸ್ಟ್ 21ರ ಮಧ್ಯಾಹ್ನ ಸಂಭವಿಸಿದೆ.
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್ ಮಾಡಿದ್ದೇವೆ. ಆದ್ರೆ ನಮ್ಮ ರಾಜ್ಯದಲ್ಲಿ ಕೃತಕ ಪನೀರ್ ಯಾರು ಬಳಸುತ್ತಿಲ್ಲ.
ಪ್ರತಿಪಕ್ಷ ಇವತ್ತು ಜನ ಸಾಮಾನ್ಯರ ಟ್ಯಾಕ್ಸ್ ದುಡ್ಡು ವ್ಯರ್ಥ ಮಾಡ್ತಿದೆ. ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು.
ಒಂಬತ್ತನೇ ಕ್ಲಾಸ್ ಕಲಿಯುತ್ತಿರುವ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಹೆತ್ತವರನ್ನು ಕೊಲ್ಲುತ್ತೇನೆಂದು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 5 ವರ್ಷ ಜೈಲು, ₹35,000 ದಂಡ ವಿಧಿಸಿದ ಕೋರ್ಟ್ ಆದೇಶ ಹೊರಡಿಸಿದೆ.
ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್(15) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಹಾಗೂ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್ಎಸ್ಎಲ್) ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗಿದೆ.
ಕೂಳೂರು ಜಂಕ್ಷನ್ನಿಂದ ಬೈಕಂಪಾಡಿ ಹಾಗೂ ಸುರತ್ಕಲ್ವರೆಗಿನ ರಸ್ತೆ ಅವ್ಯವಸ್ಥೆ ಮತ್ತು ನಿರಂತರ ಟ್ರಾಫಿಕ್ ಜಾಮ್ನಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ರಾಜಕೇಸರಿ ಸೇವಾ ಟ್ರಸ್ಟ್ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಗಡಿಗಳಿಂದ ಹಣ ಸಂಗ್ರಹಿಸಿ ಬೈಕ್ನಲ್ಲಿ ತೆರಳುತ್ತಿದ್ದ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯ ಉದ್ಯೋಗಿಗೆ ತಲವಾರು ತೋರಿಸಿ ₹8.52 ಲಕ್ಷ ನಗದು ಸುಲಿಗೆ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಮುಲ್ಕಾಜೆ ಮಾಡದಲ್ಲಿ ನಡೆದಿದೆ.
ಆಹಾರ ಸುರಕ್ಷತಾ ಇಲಾಖೆಯಿಂದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲಿನ ಆಹಾರ ಪೂರೈಕೆ ಮತ್ತು ಕ್ಯಾಟರಿಂಗ್ ವ್ಯವಸ್ಥೆಯ ಪರಿಶೀಲನೆ ನಡೆಸಲಾಯಿತು.
ಕೂಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅವ್ಯವಸ್ಥೆ ವಿರುದ್ಧ ಸ್ಥಳೀಯ ವಾಹನ ಸವಾರರು ಹಾಗೂ ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೀಮೆಯ ಬೆಳ್ಳಾಯರು ಕೋಲ್ನಾಡು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆಗೆ ಯುವಕನೊಬ್ಬ ಕಳ್ಳತನಕ್ಕೆ ಯತ್ನಿಸಿದ್ದು , ಸಿಸಿ ಕ್ಯಾಮೆರಾ ಸಹಾಯದಿಂದ ಆರೋಪಿ ಕಳ್ಳನನ್ನು ಮುಲ್ಕಿ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಬಂಧಿಸಿದ್ದಾರೆ.
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಅಟೋ (ಇಲೆಕ್ನಿಕ್ ಆಟೋ) ಚಾಲಕರು ಎದುರಿಸುತ್ತಿರುವ ಪರ್ಮಿಟ್ ಮತ್ತು ವಲಯ ವಿಂಗಡಣೆ (ಝನ್ ಲಿಮಿಟೇಶನ್) ಸಮಸ್ಯೆಗಳ ಕುರಿತು ಅಟೋ ಚಾಲಕರ ಸಂಘಟನೆಯು ತೀವ್ರ ಕಳವಳ ವ್ಯಕ್ತಪಡಿಸಿ ಮನವಿ ಸಲ್ಲಿಸಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ಆಯೋಜಿಸಲಾದ 16ನೇ ಆವೃತ್ತಿಯ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ’ ಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಉದ್ಯೋಗದ ಆಫರ್ ದೊರಕಿದೆ. 6183 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ.
ಲೋಕಲ್ಯಾಣ, ಧರ್ಮ ಸಂವರ್ಧನೆ ಹಾಗೂ ಸರ್ವಜನ ಕ್ಷೇಮದ ಸಂಕಲ್ಪದೊಂದಿಗೆ ಜಗದಾಚಾರ್ಯ ಸ್ವಾಮಿ ಅಖಿಲೇಶ್ ಜೀ ಮಹಾರಾಜ್ ಸೇವಾ ಸಂಸ್ಥಾನ ಮತ್ತು ದಿ ನ್ಯಾಫ್ರನ್ ಫ್ರಂಟ್ ಇದರ ಸಹಯೋಗದೊಂದಿಗೆ ಆಗಸ್ಟ್ 24ರಿಂದ 28ರವರೆಗೆ ಮಂಗಳೂರಿನ ಶ್ರೀ ಯೋಗೇಶ್ವರ ಕದ್ರಿ ಮಠದಲ್ಲಿ ಶ್ರೀಮದ್ ಲಕ್ಷ್ಮೀ ನಾರಾಯಣ ಮಹಾಯಾಗ ಆಯೋಜಿಸಲಾಗಿದೆ ಎಂದು ಜಗದಾಚಾರ್ಯ ಸ್ವಾಮಿ ಅಖಿಲೇಶ್ ಜೀ ಮಹಾರಾಜ್ ಸೇವಾ ಸಂಸ್ಥಾನದ ಕಾರ್ಯಾಧ್ಯಕ್ಷ ದಿನಕರ ಶೆಟ್ಟಿ ಹೇಳಿದರು.
ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಮರು ಜೋಡಿಸಲು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ಈಜಿ ದಾಟಿ ಮರು ಜೋಡಿಸುವ ಮೂಲಕ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ಸಾಹಸಮಯ ಕರ್ತವ್ಯ ಪ್ರದರ್ಶಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಧೂಮಡ್ಕ ಎಂಬಲ್ಲಿ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ ರಜೆ ಘೋಷಿಸುವಂತೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಗರದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ನಗರ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ MDMA ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಕಡಲ ಸಾರಿಗೆ ಸೇವೆಗಳನ್ನು ಆಯ್ಕೆ ಮಾಡುವುದು
ಯೆನೆಪೊಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಯೆನೆಪೊಯ ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್ಸಿ., ಪಿ.ಬಿ.ಬಿ.ಎಸ್ಸಿ. ಹಾಗೂಎಂ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪಯಣಕ್ಕೆ ಸ್ವಾಗತಿಸುವ ‘ದೀಕ್ಷಾರಂಭ’ ಕಾರ್ಯಕ್ರಮವನ್ನುಆಗಸ್ಟ್ 19ರಂದು ಆಯೋಜಿಸಲಾಯಿತು.
ಪ್ರತಿ ಹುಟ್ಟಿನ ಹಿಂದಿರುವ ರಹಸ್ಯವನ್ನು ತಿಳಿಯಲು ಆತ್ಮ ಜ್ಞಾನಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರ ‘ಆತ್ಮ-ಪರಮಾತ್ಮʼ ಜೀವನದ ಸತ್ಯ ದರ್ಶನ.. ಒಳ ಚಿಂತನ ಶಿಬಿರವು ಅ. 23 ರಂದು ಆದಿತ್ಯವಾರ ಬೆಳಗ್ಗೆ 9.30 ಕ್ಕೆ ಶ್ರೀ ಗೋಪಾಲಕೃಷ್ಣ ಅಸಣ್ಣ ಸಭಾಭವನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಡೆಯಲಿದೆ.
ನವೀನ್ ಸೂರಿಂಜೆ ಕಟೀಲು ಮೇಳದ ಆಪಾದನೆಗೆ ಕಟೀಲು ದೇವಸ್ಥಾನದ ಪ್ರದಾನ ಅರ್ಚಕರಲ್ಲಿ ಹರಿ ನಾರಾಯಣ ಅಸ್ರಣ್ಣ ಪ್ರತಿಕ್ರಿಯೆ ನೀಡಿದ್ದಾರೆ