Showing 20 of 4469 posts • Page 16 of 224
ಕರಾವಳಿಯಲ್ಲಿ ಮಳೆಗಾಲದ 61 ದಿನಗಳ ಕಾಲಾವಧಿಯ ಆಳಸಮುದ್ರ ಮೀನುಗಾರಿಕಾ ನಿಷೇಧ (ರಜಾ ಅವಧಿ) ಮುಕ್ತಾಯಗೊಂಡ ಬೆನ್ನಲ್ಲೇ, ಮಂಗಳೂರಿನ ಹಳೆ ಬಂದರಿನಲ್ಲಿ (ದಕ್ಕೆ) ಮೀನುಗಾರಿಕಾ ಚಟುವಟಿಕೆಗಳು ಮತ್ತೆ ಕಳೆಗಟ್ಟಿವೆ. ಆಳ ಸಮುದ್ರಕ್ಕೆ ಇಳಿದಿದ್ದ ಟ್ರಾಲ್ಬೋಟ್ಗಳು ಅಪಾರ ಪ್ರಮಾಣದ ವೈವಿಧ್ಯಮಯ ಮೀನುಗಳ ರಾಶಿಯೊಂದಿಗೆ ಬಂದರಿಗೆ ಮರಳುತ್ತಿದ್ದು, ಮೀನು ವ್ಯಾಪಾರಿಗಳು, ಕಾರ್ಮಿಕರು ಹಾಗೂ ಗ್ರಾಹಕರಿಂದ ದಕ್ಕೆ ಪ್ರದೇಶ ಜನಜಂಗುಳಿಯಿಂದ ಗಿಜಿಗುಡುತ್ತಿದೆ.
ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಟೋಲ್ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಎಸ್ಡಿಪಿಐ ವತಿಯಿಂದ ಆ.18ರಂದು ‘ಡಿಸಿ ಕಚೇರಿ ಚಲೋ’ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ತಿಳಿಸಿದ್ದಾರೆ.
1997ರಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜಾಗಿ ಆರಂಭವಾದ ತುಂಬೆ ಗ್ರೂಪ್ ಇದೀಗ ತನ್ನ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಒಂದು ಬೃಹತ್, ವೈವಿಧ್ಯಮಯ ಶೈಕ್ಷಣಿಕ ಆರೋಗ್ಯ ರಕ್ಷಣಾ ಸಮೂಹವಾಗಿ ಬೆಳೆದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಪಣಂಬೂರಿನಲ್ಲಿ ಜೂನ್ 29ರಂದು ನಡೆದ ಜುವೆಲ್ಲರಿ ಉದ್ಯಮಿಯ ದರೋಡೆ ಪ್ರಕರಣದಲ್ಲಿ ತನಿಖೆ ನಡೆಸಿರುವ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.
ನಗರ ಹೊರವಲಯದ ವಳಚ್ಚಿಲ್ ಬಳಿಯ ಹೊಸ ಪೆಟ್ರೋಲ್ ಪಂಪ್ ಎದುರಲ್ಲಿ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಘಟನೆಯಲ್ಲಿ ತೀವ್ರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ರಾಷ್ಟ್ರ ಭಕ್ತರ ವೇದಿಕೆ ಮಂಗಳೂರು ನಗರ ದಕ್ಷಿಣ ಇದರ ನೇತೃತ್ವದಲ್ಲಿ ತಿರಂಗ ಯಾತ್ರೆ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿಯ ರಾಜಾಜಿ ಪಾರ್ಕ್ನಿಂದ ಗೋವಿಂದ ಪೈ ನವಭಾರತ್ ಸರ್ಕಲ್ವರೆಗೆ ಬುಧವಾರ ನಡೆಯಿತು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಯು ಟಿ ಖಾದರ್ ಮೊದಲ ದಿನವೇ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರವು ನಿರಂತರವಾಗಿ ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ತೊಡಗಿದೆ.
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳಕಾಲ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.
ನಗರದಲ್ಲಿ ಎಸ್ಡಿಪಿಐ (SDPI) ಪಕ್ಷದ ಯುವ ಘಟಕವಾದ ‘ಯಂಗ್ ಡೆಮೋಕ್ರೆಟ್ಸ್’ ಸಂಘಟನೆಯ ಫ್ಲೆಕ್ಸ್ ಮತ್ತು ಬಾವುಟಗಳನ್ನು ಮಹಾನಗರ ಪಾಲಿಕೆ ಹಾಗೂ ಪೊಲೀಸರು ತೆರವುಗೊಳಿಸಿರುವುದನ್ನು ಖಂಡಿಸಿ, ಪಕ್ಷದ ನಾಯಕರು ರಸ್ತೆಯಲ್ಲಿ ಧರಣಿ ನಡೆಸಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್ ಸೇವೆಯ ಸಮಸ್ಯೆ ನಿವಾರಿಸಲು ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ತುಳುನಾಡಿನ ಮಣ್ಣಿನ ಸೊಗಡು, ಸಂಪ್ರದಾಯದ ಕಂಪು, ಆರೋಗ್ಯದ ನಂಬಿಕೆಇವೆಲ್ಲವನ್ನೂ ತನ್ನೊಳಗೆ ಕಟ್ಟಿಕೊಂಡಿರುವ ವಿಶಿಷ್ಟ ದಿನವೇ ಆಟಿ ಅಮಾವಾಸ್ಯೆ.
ಸರಗಳ್ಳತನ ಪ್ರಕರಣವೊಂದರಲ್ಲಿ ಪೊಲೀಸರ ವಶದಲ್ಲಿದ್ದಾಗ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ವಿಜಯಪುರದಲ್ಲಿ ಬಂಧಿಸಿದ್ದಾರೆ.
ಸುರತ್ಕಲ್ ಸಮೀಪದ ಮಧ್ಯ ಕೊಡಿಪಾಡಿಯಲ್ಲಿರುವ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸೋಮವಾರ (ಆ.10) ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಬಿಪಿಎಲ್ ಆದಾಯ ಮಿತಿಯನ್ನು ರೂ. 3 ಲಕ್ಷಕ್ಕೆ ಏರಿಸಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಸಾಮಾಜಿಕ ಭದ್ರತಾ ಯೋಜನೆಗಳ ಏಕೀಕೃತ ಅರ್ಹತಾ ಮಾನದಂಡವನ್ನಾಗಿಸುವಂತೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸರಕಾರವನ್ನು ಆಗ್ರಹಿಸಿದ್ದಾರೆ.
ಮಂಗಳೂರು ರೈಲು ನಿಲ್ದಾಣದಲ್ಲಿ, ಮಡಗಾಂವ್-ಮಂಗಳೂರು ಮೆಮು ಎಕ್ಸ್ಪ್ರೆಸ್ ರೈಲನ್ನು ಹತ್ತುವ ವೇಳೆ ಸಮತೋಲನ ತಪ್ಪಿ ಚಲಿಸುತ್ತಿದ್ದ ರೈಲಿನ ಅಡಿಗೆ ಬೀಳಲಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಪಾಯಿಂಟ್ಸ್ಮನ್ ಸಂದೀಪ್ ನಾಯಕ್ ಅವರು ರಕ್ಷಿಸಿದರು.
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡದ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಬಳಿ ನಡೆದಿದೆ.