Showing 20 of 4469 posts • Page 17 of 224
ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರಿಗೆ ಸುಟ್ಟ ಗಾಯಗಳಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಕರ್ನಾಟಕದ ಗ್ರಾಮೀಣ ಪ್ರದೇಶವಾದ ಮೂಡುಬಿದ್ರೆಯ ನಿಡೋಡಿಯಲ್ಲಿ ಹುಟ್ಟಿದ ಒಂದು ಕನಸು ಇಂದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ.
ಹೈಟೆನ್ನನ್ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್ ನಲ್ಲಿ ಸೋಮವಾರ ಸಂಜೆ ವರದಿಯಾಗಿದೆ.
ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಅಲ್ಲೇ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಘಟನೆ ನಡೆದಿದೆ.
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಸಂಭವಿಸಿದೆ.
ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಸಂಸ್ಥೆಯು ತನ್ನ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆಯನ್ನು ಆಗಸ್ಟ್ 10, ಸೋಮವಾರದಂದು ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಿತು.
ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.
ಸುದೀರ್ಘ ಆರೋಗ್ಯಕ್ಕೆ ಪೂರಕ ಚಿಕಿತ್ಸೆ ಹಾಗೂ ವೈದ್ಯಕೀಯ ಸೌಂದರ್ಯ ಚಿಕಿತ್ಸಾ ಸಂಸ್ಥೆಯಾಗಿರುವ ಆರೋಗ್ಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿರುವ ‘ಡೋಲ್ಚೆ ಎಸ್ಥೆಟಿಕಾ‘ ಕರ್ನಾಟಕದ ತನ್ನ ಮೊದಲ ಶಾಖೆಯನ್ನು ಮಂಗಳೂರಿನಲ್ಲಿ ಆರಂಭಿಸಲಿದೆ. ಆ.13ರಂದು ಬೆಳಗ್ಗೆ 10.30ಕ್ಕೆ ಪದವಿನಂಗಡಿಯ ವಿಶ್ವಗೀತಾ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ.
ತೊಕ್ಕೊಟ್ಟು ವಿನಮ್ರ ಬಾರ್ಗೆ ತಲವಾರು ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಾರ್ ಬಂದ್ ಮಾಡುವಂತೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಸಮಾನ ಮನಸ್ಕರ ಒಂದು ಹೊಸ ರಾಜಕೀಯ ಪಕ್ಷ ಕಟ್ಟಲಾಗುತ್ತಿದೆ ಎಂದು ಮಂಗಳೂರಿನಲ್ಲಿ ಚೇತನ್ ಅಹಿಂಸಾ ಹೇಳಿಕೆ ನೀಡಿದರು.
ಬಜ್ಪೆಯಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದೆ ಎಂದು ಆರೋಪಿಸಿ ಬಜ್ಪೆಯ ಪಟ್ಟಣ ಪಂಚಾಯತ್ ಎಲ್ಲಾ 19 ಕೌನ್ಸಿಲರ್ ಗಳು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದರು.
ತೊಕ್ಕೊಟ್ಟು ವಿನಮ್ರ ಬಾರ್ ನಲ್ಲಿ ತಲವಾರು ಹಿಡಿದು ದಾಂಧಲೆ ನಡೆಸಿರುವ ಘಟನೆ ನಡೆದಿದೆ.
ತಾಲೂಕು ಹೊರವಲಯದ ಸುರತ್ಕಲ್ ಚೇಳ್ಯಾರು ಗ್ರಾಮ ಪಂಚಾಯ್ತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸಹಿತ ಇತರ ಬೇಡಿಕೆಯನ್ನ ಹೇಳಲು ಗ್ರಾಮದ ವ್ಯಕ್ತಿಯಾದ ಜಗದೀಶ್ ದೇವಾಡಿಗ 7 ರಿಂದ 8 ಭಾರಿ ಪಂಚಾಯತ್ ಗೆ ಬಂದ್ರೆ ಸ್ಪಂದಿಸದೆ ದರ್ಪ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ .
ಶಬರಿ ಮಳೆ ಅಯ್ಯಪ್ಪ ಸೇವಾ ಸಮಾಜಂ ಮಂಗಳೂರು ಇದ್ರ ವತಿಯಿಂದ, ಸಂಸತ್ ಭವನದ ಮುಂಭಾಗದಲ್ಲಿ ಕೇಸರಿ ಬಟ್ಟೆ ಧರಿಸಿ ಸನಾತನ ಧರ್ಮ ಮತ್ತು ಅಯೋಧ್ಯ ರಾಮಮಂದಿರ ಅವಹೇಳನ
ಬಿ.ಸಿ.ರೋಡ್ ಸರ್ಕಲ್ ಬಳಿ ಗುರುವಾರ ಸಂಜೆ ವೇಳೆ ಮತ್ತೊಂದು ಭೀಕರ ಅಪಘಾತ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ
ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.
ಜುಲೈ 18 ರಂದು ತನ್ನ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 3 ಲಕ್ಷ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ 66ರ ಸರ್ವೀಸ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಗುರುವಾರ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಲಾಯಿತು.
ಆರೋಗ್ಯ ಸಚಿವ ಯು.ಟಿ.ಖಾದರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದರು.
ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್, ಮೈಸೂರು ಕಲ್ಯಾಣಗಿರಿ ನಿವಾಸಿ ಡಾ.ವಹೀದಾ ಸುಲ್ತಾನಾ (70) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅಪರಾಹ್ನ ನಿಧನರಾದರು.