Showing 20 of 4484 posts • Page 178 of 225
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಅರಗ ಜ್ಞಾನೇಂದ್ರ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ಬುದ್ದಿ ಭ್ರಮಣೆ ಆಗಿದೆ. ನಾವೆಲ್ಲಾ ಹುಚ್ಚಾಸ್ಪತ್ರೆಯಲ್ಲಿ ಇರಬೇಕೆಂದು ಹೇಳಿದ್ದಾರೆ.
ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಫೆಸ್ಟ್ ೨೦೨೪ನ್ನು ದೀಪ ಬೆಳಗಿಸುವುದರ ಮೂಲಕ ಕಾಸರಗೋಡು ಜಿಲ್ಲೆಯ ಕುಂಬ್ಲೆ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಶಶಿಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಒಂದು ಮನೆಯನ್ನು ಕಟ್ಟಿದ ಕೂಡಲೇ ಅದು ವಾಸಕ್ಕೆ ಯೋಗ್ಯ ಎಂದು ಕಾಣಬಹುದು.
ರೈತರಿಂದ ನೇರವಾಗಿ ಮುಡಾ ನಗರಾಭಿವೃದ್ಧಿ ಪ್ರಾಧಿಕಾರದ ಜಮೀನು ಪಡೆದಿದ್ದೇ ಆದಲ್ಲಿ ಅವರಿಗೆ 50-50ನಲ್ಲಿ ಸೈಟ್ ಕೊಡಲೇಬೇಕು.
ಕುಮಾರ ಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ಸರಿಯಲ್ಲ ಎಂದರು.
ಲೋಕಯುಕ್ತ ನೋಟಿಸ್ ವಿಚಾರವಾಗಿ ಸಚಿವ ಜಮೀರ್ ಹೇಳಿಕೆ ನೀಡಿದ್ದು, ನೋಟಿಸ್ ಬಂದದ್ದು ನನಗೆ ಗೊತ್ತಿಲ್ಲ
ಸುಬ್ರಹ್ಮಣ್ಯ, ಕಸ್ತೂರಿ ರಂಗನ್ ವಿರೋಧಿಸಿ ನ.15ರ ಗುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದರಿಯನ್ನ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ನಡೆಸಿದ ಆರೋಪ
ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗ ಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ.
ಪೊಲೀಸರ ಕೈಗೆ ಸಿಗದೆ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿರುವ ಸೈಬರ್ ವಂಚಕರೂ ಇದೀಗ ಪೊಲೀಸ್ ಬಲೆಗೆ ಬೀಳಲಾರಂಭಿಸಿದ್ದಾರೆ.
ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ೧೦ನೇ ತರಗತಿಯ ವಿದ್ಯಾರ್ಥಿಗಳಾದ ಅದ್ವೈತ ಕೃಷ್ಣ ಬಿ ಹಾಗೂ ಜಿ ಜ್ವಲನ್ ಜೋಶಿ ಇವರು ಪುತ್ತೂರಿನ ರೇಡಿಯೋ ಪಾಂಚಜನ್ಯ ಸಮುದಾಯ ಬಾನುಲಿ ಕೇಂದ್ರದಲ್ಲಿ ಆಯೋಜಿಸಲಾದ ಚರ್ಚಾಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾದ, ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕ್ ಹಾಗೂ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ.
ಕನಸು ಒಂದು ಸುದೀರ್ಘವಾದ ಪಯಣ. ಕನಸುಗಳಿಲ್ಲದ ಬದುಕು ಅಸಾಧ್ಯ. ಕನಸಿನ ಯಾತ್ರೆಗೆ ಒಂದು ಸ್ಪಷ್ಟವಾದ ದಾರಿ ಇರಬೇಕು.
ಮಂಗಳೂರು ವಿವಿ ವಿರುದ್ದ ವಿದ್ಯಾರ್ಥಿ ಸಮೂಹ ಸಿಡಿದೆದ್ದಿದೆ. ಅಂಕಪಟ್ಟಿಯ ಸಮಸ್ಯೆ, ಅವೈಜ್ಞಾನಿಕ ಕಾಲೇಜುಗಳ ಶುಲ್ಕಗಳ ಹೆಚ್ಚಳ, ಪರೀಕ್ಷಾ ಶುಲ್ಕ ಹೆಚ್ಚಳ ಯುಯುಸಿಎಂಎಸ್ ನಲ್ಲಿರುವ ಗೊಂದಲಗಳು ಮತ್ತು ವಿಶ್ವವಿದ್ಯಾನಿಲಯದಲ್ಲಿರುವ ಹಲವು ಸಮಸ್ಯೆಗಳನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕೊಣಾಜೆ ಮಂಗಳಗಂಗೋತ್ರಿಯ ಆಡಳಿತ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು.
ಎಬಿವಿಪಿ ಸಂಘಟನೆಯು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ಬಿಡುಗಡೆಗೊಳಿಸುವಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆಯ ನೆಪದಲ್ಲಿ ಗೂಂಡಾಗಿರಿ ನಡೆಸಿದ್ದು,
ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ನೇತೃತ್ವದಲ್ಲಿ ದ.ಕ. ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಮುಂಡಾಲ ಸಮುದಾಯದ ಮುಖಂಡರ ಸಭೆಯು ಕುದ್ಮುಲ್ ರಂಗರಾವ್ ಸ್ಮಾರಕ ಭವನ, ಬಿಜೈ, ಕಾಪಿಕಾಡ್ನಲ್ಲಿ ಜರುಗಿತು.
ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಕರ್ತವ್ಯನಿರತರಾಗಿದ್ದ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿ, ಕಚೇರಿ ಸೊತ್ತುಗಳನ್ನು ಧ್ವಂಸ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಂಟ್ವಾಳ ಆಡಳಿತ ಸೌಧದ ಮುಂಭಾಗ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಖಬರಸ್ತಾನಗಳಿಗೆ ಸರ್ಕಾರಿ ಭೂಮಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದಲೇ ಆದೇಶ ನೀಡಲಾಗಿದ್ದು, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾಗೆ ಸಿಎಸ್ ಶಾಲೀನಿ ರಜನೀಶ್ ಆದೇಶ ನೀಡಿದ್ದಾರೆ.
ವಾತ್ಸಲ್ಯ ಛಾಯಾ ಟ್ರಸ್ಟ್ (ರಿ.) ಇದರ ನೆರಳಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದ ಉದ್ಘಾಟನಾ ಸಮಾರಂಭ ತಾ 21/11/2024ರಂದು ಗುರುವಾರ ಮಂಗಳೂರಿನ ಬಳ್ಳಾಲ್ ಭಾಗ್ ನಲ್ಲಿ ನಡೆಯಲಿದೆ.
ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್16 ತನಕ ವಾಸ್ತವ್ಯ ಹೂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು.