Showing 20 of 4486 posts • Page 179 of 225
ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್16 ತನಕ ವಾಸ್ತವ್ಯ ಹೂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು.
ಬಾವುಟಗುಡ್ಡೆ ಯ ಎಬಿ ಶೆಟ್ಟಿ ರಸ್ತೆಯ ಅಲೋಶಿಯಶ್ ಶಿಕ್ಷಣ ಸಂಸ್ಥೆಯ ಎದುರಿನ ಬಸ್ ತಂಗುದಾಣದ ಎದುರು ‘ಬಸ್ ಬೇ ಗೆಂದು ಮೀಸಲಿರಿಸಿದ್ದ ಜಾಗ ಬನಗಳ ನಿಲುಗಡೆಗೆ ಸಿಗಲಿದೆ ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ ಇದೆ.
ಹಿಂಗಾರು ಮಳೆ ಕ್ಷೀಣಿಸಿದ್ದರೂ, ಕಳೆದ ಒಂದು ತಿಂಗಳಲ್ಲಿ ಉತ್ತಮ ಮಳೆಯಾಗಿ ಮೂರು ತಿಂಗಳಲ್ಲಿ ಸುರಿಯಬೇಕಾಗಿದ್ದ ವಾಡಿಕೆ ಮಳೆಯ ಗುರಿ ತಲುಪಿದೆ.
ಬ್ರಿಟೀಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆದ ಭಾರತದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿರುವ ಸಂದರ್ಭದಲ್ಲಿ ಈ ದೇಶದ ಚುಕ್ಕಾಣಿಯನ್ನು ಹಿಡಿದು ಅಭಿವೃದ್ಧಿ ಪಾತದತ್ತ ಕೊಂಡೊಯ್ದ ಉತ್ತಮ ಆಡಳಿಗಾರ ನಮ್ಮ ಹೆಮ್ಮೆಯ ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು.
ವಿದ್ಯಾರ್ಥಿಗಳು, ಯುವಕ-ಯುವತಿಯರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಮುಡಿಪಾಗಿಡಲು ಸಿದ್ಧರಾಗಿರಬೇಕು.
ತಿಂಗಳ ಹಿಂದೆ 200 , 250 ರೂ. ದರವಿದ್ದ ಬಂಗುಡೆ ಮೀನು ಈಗ ಬಹಳಷ್ಟು ಅಗ್ಗ ವಾಗಿದ್ದು, 100-150 ರೂ.ಗಳಲ್ಲಿ ದೊರೆಯುತ್ತಿದೆ.
ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ ನಡೆಯಿತು.
ಪಕ್ಷಿಕೆರೆಯಲ್ಲಿ ನಡೆದ ಕೊಲೆ ಮತ್ತು ಆತ್ಮಹತ್ಯೆಗೆ ಸಂಬಂಧಿಸಿದಂತೆ ಕಾರ್ತಿಕ್ ಭಟ್ಟನ ಮತ್ತೊಂದು ಅವ್ಯವಹಾರ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರಿನ ಖ್ಯಾತ ವಿಮಾನಯಾನ ತರಬೇತಿ ಸಂಸ್ಥೆ ಬರ್ಡ್ ಏವಿಯೇಷನ್ ಅಧಿಕೃತ ಪ್ರಾಂಚೈಸಿ ಸಂಸ್ಥೆಯು ಪುತ್ತೂರಿನ ಎ.ಪಿ.ಎಂ.ಸಿ ರಸ್ತೆಯ ಮಾನೈ ಅರ್ಕ್ ಕಟ್ಟಡದಲ್ಲಿ ಶ್ರೀ ಪ್ರಗತಿ ವಿಸ್ತಾರ ಏವಿಯೇಷನ್ ಆ್ಯಂಡ್ ಮ್ಯಾನೇಜ್ಮೆಂಟ್ ಎಂಬ ಹೆಸರಿನೊಂದಿಗೆ ಮೊದಲ ಬ್ಯಾಚ್ ನವೆಂಬರ್ 13 ರಂದು 42 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡಿತು.
ಮಿಲಾಗ್ರಿಸ್ ಕಾಲೇಜು ಮಂಗಳೂರು ಇದರ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಐಕ್ಯೂ ಎಸಿಯ ಸಹಯೋಗದೊಂದಿಗೆ ಒಂದು ದಿನದ ಟೆಕ್ಟೋನಿಕ್ ಪಿಯುಸಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರ ಮಟ್ಟದ ಐಟಿ ಫೆಸ್ಟ್ ಉದ್ಘಾಟನೆಗೊಂಡಿತು.
ಬೈಕ್ ಮತ್ತು ಕಾರು ನಡುವೆ ಅಪಘಾತ ನಡೆದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ನವೆಂಬರ್ 10, 2024 ರಂದು ಆರೋಗ್ಯ ತಪಾಸಣಾ ಶಿಬಿರವು ಜರಗಿತು.
ದಯಾ ಮರಣ ಕೋರಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿಯ ಜೋಪಡಿ ಧ್ವಂಸಗೊಳಿಸಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ನಡೆದಿದೆ.
ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ ಯು ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ ನವೆಂಬರ್ 11 ರಂದು ಪಿ ಎ ಕ್ಯಾಂಪಸ್ ನಲ್ಲಿ ನೆರವೇರಿತು.
ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ಸಂಕಷ್ಟದಲ್ಲಿ ಅಡಕೆ ಬೆಳೆಗಾರರ ಕೈ ಹಿಡಿಯುತ್ತಾ ಬಂದಿರುವ ಹವಾಮಾನ ಆಧರಿತ ಬೆಳೆ ವಿಮೆ ಯೋಜನೆಯಲ್ಲಿ ಈ ಬಾರಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಅಡಕೆ ಮತ್ತು ಕಾಳುಮೆಣಸು ಬೆಳೆಗಾರರಿಗೆ 69,44,10,840 ರೂ. ಖಾತೆಗೆ ಜಮೆಯಾಗಿದೆ. ಇಡೀ ರಾಜ್ಯದಲ್ಲೇ ದ.ಕ. ಜಿಲ್ಲೆಗೆ ಹೆಚ್ಚಿನ ವಿಮಾ ಮೊತ್ತ ಪಾವತಿಯಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ.