Showing 20 of 4486 posts • Page 180 of 225
ಬಾಲಕಿಯರ ಹಾಸ್ಟೆಲ್ ಒಳಗೆ ಆಗಂತುಕ ನುಗ್ಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ನವೆಂಬರ್ 6 ರಂದು ನಡೆದಿದೆ.
ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಪರ ಮತಯಾಚನೆ ಆರೋಪ ಕೇಳಿಬಂದಿದ್ದು, ಚುನಾವಣಾಧಿಕಾರಿಗಳು ದಾಖಲಿಸಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಡಬ್ಬಲ್ ಬೋಲ್ ಧಾರಣೆ 500 ರೂ. ಗಡಿ ದಾಟಿ ಮುನ್ನುಗ್ಗಿದೆ. ಜೊತೆಗೆ ಸಿಂಗೇಲ್ ಚೋಲ್ ಧಾರಣೆಯೂ ಏರಿಕೆ ಕಂಡಿದೆ.
ಬೆಳೆಯಲಾದ ನಾಟಿ ಬಿತ್ತನೆ ಮಾಡಲಾಗಿದ್ದ ಭತ್ತದ ಕಟಾವು ಕಾರ್ಯ ಮಂಗಳೂರು ಸಹಿತ ಮೂಡುಬಿದಿರೆ, ಮೂಲ್ಕಿ ಹಾಗೂ ಉಳ್ಳಾಲ ತಾಲೂಕಿನಲ್ಲಿ ಆರಂಭವಾಗಿದೆ.
ನವಂಬರ್ ತಿಂಗಳ ಎರಡು ವಾರಗಳ ಕಾಲ ನಡೆಯುವ ಯೋಗ ಶಿಬಿರವು ಮಂಗಳಾದೇವಿ ಸಮೀಪ ರಾಮಕೃಷ್ಣ ಮಠದಲ್ಲಿ ಮಠದ ಅಧ್ಯಕ್ಷರಾದ ಜಿತಕಾಮಾನಂದಜೀ ಮಹಾರಾಜ್ ಉದ್ಘಾಟಿಸಿದರು.
ಆಧುನಿಕ ಶಿಕ್ಷಣದ ಜೊತೆಗೆ ಸನಾತನ ಧರ್ಮದ ಜ್ಞಾನವೂ ಸಿಕ್ಕಿದಾಗ ಶಿಕ್ಷಣ ವ್ಯವಸ್ಥೆಗೆ ನ್ಯಾಯ ಕೊಟ್ಟಂತಾಗುತ್ತದೆ. ರಸಾಯನಶಾಸ್ತ್ರ, ಭೌತಶಾಸ್ತ್ರದಂತಹ ವಿಷಯಗಳ ಜತೆಗೆ ಧರ್ಮ ಶಿಕ್ಷಣವನ್ನೂ ಕೊಟ್ಟಾಗ ನಿಜವಾದ ಶಿಕ್ಷಣ ಸಾಕಾರಗೊಳ್ಳುತ್ತದೆ. ಧರ್ಮದ ಜೊತೆಗೆ ಜಾಗೃತಿಯನ್ನೂ ಮೂಡಿಸುವುದು ಅಗತ್ಯ ಎಂದು ಪುಣೆಯ ದೀಪಕ್ ಫರ್ಟಿಲೈಝರ್ಸ್ ಆಂಡ್ ಕೆಮಿಕಲ್ಸ್ನ ವಿಶ್ರಾಂತ ಜನರಲ್ ಮ್ಯಾನೇಜರ್ ಬಾಲಚಂದ್ರ ನಟ್ಟೋಜ ಹೇಳಿದರು.
9ನೇ ನವೆಂಬರ್ 2024 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಸಿನರ್ಜಿಯಾ 2024ರ ಸಮಾರೋಪ ಸಮಾರಂಭದಲ್ಲಿ 3 ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ನ.13 ರಂದು ಮಂಗಳೂರಿನ ಉರ್ವಾಸ್ಟೋರ್ ನಲ್ಲಿರುವ ತುಳು ಭವನದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.
ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ ಬಂಟ್ಸ್ ಹಾಸ್ಟೆಲ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಮಂಗಳೂರು ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು ಜಾಥಾ 14 ರಂದು ಗುರುವಾರ ಸಂಜೆ ೩ ಗಂಟೆಗೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮನೆಯೊಂದರ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ರಾಜಕೀಯ ಮುಖಂಡರ ಬೆಂಬಲಿಗರಿಂದ ದಾಂಧಲೆ ನಡೆದಿದ್ದು, ಮೇಜಿನ ಗಾಜನ್ನು ಪುಡಿಗೈದ ಘಟನೆ ಸೋಮವಾರ ನಡೆದಿದೆ.
“ಶಕ್ತಿ ಪಿಯು ಕಾಲೇಜು, ವಾಣಿಜ್ಯ ವಿಭಾಗವು 8 ನವೆಂಬರ್ 2024 ರಂದು ಮಧ್ಯಾಹ್ನ 2 ಗಂಟೆಗೆ ಸ್ಟಾಕ್ ಮಾರುಕಟ್ಟೆಯ ಮೂಲಭೂತ ವಿಷಯಗಳ ಕುರಿತು ಸಂವಾದಾತ್ಮಕ ಅಧಿವೇಶನವನ್ನು ಆಯೋಜಿಸಿತ್ತು.
ಕೆಟ್ಟು ಕೆರ ಹಿಡಿದ ರಸ್ತೆ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದೆ.
ಬಾಣಂತಿಯೊಬ್ಬಳು ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಮೃತ ಮಹಿಳೆಯಾಗಿದ್ದಾಳೆ.
ಬಸ್ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಕಾರಿಗೆ ತಾಗಿದೆಯೆಂದು ಯುವಕರ ತಂಡವೊಂದು ಬಸ್ಸನ್ನು ಅಡ್ಡಗಟ್ಟಿ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಯಾಣಿಕರ ಎದುರಲ್ಲಿ ಭೀತಿ ಸೃಷ್ಟಿಸಿದ ಘಟನೆ ವಾಮಂಜೂರಿನಲ್ಲಿ ನಡೆದಿದ್ದು ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿ. (ಎಎಎಚ್ಎಲ್) ನಿರ್ವಹಿಸುವ ಮಂಗಳೂರು ವಿಮಾನ ನಿಲ್ದಾಣವು ನ. 9ರಂದು ಅತೀ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
ಜಿಲ್ಲಾಡಳಿತ ವತಿಯಿಂದ ಆಯೋಜಿಸಲು ಉದ್ದೇಶಿಸಲಾಗಿರುವ ಬಹು ನಿರೀಕ್ಷಿತ ಪಿಲಿಕುಳ “ನೇತ್ರಾವತಿ- ಫಲ್ಗುಣಿ’ ಜೋಡುಕರೆ ಕಂಬಳ ಮೂಡುಶೆಡ್ಡೆ ಪಂಚಾಯತ್ ಚುನಾವಣೆ ಕಾರಣಕ್ಕೆ ಮುಂದೂಡಿಕೆಯಾಗುವ ಬಹುತೇಕ ಸಾಧ್ಯತೆಯಿದೆ.
ಹಗರಣಗಳಿಂದಲೇ ಕುಖ್ಯಾತಿ ಪಡೆದ ರಾಜ್ಯ ಸರಕಾರದ ಆಡಳಿತವನ್ನು ಧಿಕ್ಕರಿಸಿ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.
ಧರ್ಮೋಪದೇಶ ನೀಡುವಾಗ ಹಠಾತ್ತನೆ ಪ್ರಜ್ಞಾಹೀನರಾಗಿ ಆಸ್ಪತ್ರೆಗೆ ದಾಖಲಾದ ಜರ್ಮನ್ ಪ್ರಜೆ ರೆವರೆಂಡ್ ಫಾದರ್ ವೂಲ್ಫ್ಗ್ಯಾಂಗ್ ಲಿಯಾನ್ಹಾರ್ಡ್(65) ಅವರಿಗೆ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಕೆಎಂಸಿ ಆಸ್ಪತ್ರೆಯ ವತಿಯಿಂದ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು.
ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು.
ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಸಂಪಾಜೆ ವತಿಯಿಂದ ಸಂಪಾಜೆ ಯಕ್ಷೋತ್ಸವ ೨೦೨೪ ಹಾಗೂ ಬ್ರಹ್ಮೈಕ್ಯ ಶ್ರೀ ಶ್ರೀ ಕೇಶಾವನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಿತು.