Showing 20 of 4486 posts • Page 182 of 225
ಸರ್ವಿಸ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಒಂದರಲ್ಲಿ ಕಳ್ಳನೊಬ್ಬ ಕಂಡಕ್ಟರ್ ಪರ್ಸ್ನಿಂದ ಕಲೆಕ್ಷನ್ ಹಣವನ್ನ ಕದ್ದು ಪರಾರಿ ಆಗಿದ್ದಾನೆ.
ಪ್ರವೀಣ್ ಮಂಗಳೂರು, ಮೂಸಾ ಶರೀಫ್ ರವರ ನಾಯಕತ್ವದಲ್ಲಿ ಭೇಟಿ ಬಚಾವೋ ಎಂಬ ಧ್ಯೇಯವಾಕ್ಯದಡಿಯಲ್ಲಿ “ದಕ್ಷಿಣದಿಂದ ಉತ್ತರಕ್ಕೆ” – (ಮಂಗಳೂರಿನಿಂದ ದೆಹಲಿ) ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಶಕ್ತಿ ಪ. ಪೂ. ಕಾಲೇಜಿನ ವಿದ್ಯಾರ್ಥಿ ಲಿಖಿತ್ ಎಸ್. ಸುವರ್ಣ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ ಇವರು ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ದ.ಕ.ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆಯಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈ ಬಂಟರ ಸಂಘದ ಸಹಯೋಗದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ “ವಿಶ್ವ ಬಂಟರ ಸಮಾಗಮ”ಬೃಹತ್ ಕಾರ್ಯಕ್ರಮ ಡಿಸೆಂಬರ್ 7 ರಂದು ನಡೆಯಲಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿನಿ, 9ನೇ ತರಗತಿಯ ನಿಹಾರಿಕಾ ಎಂ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ),
ಮಿಲಾಗ್ರಿಸ್ ಸಮೂಹ ಸಂಸ್ಥೆಗಳ ಘಟಕವಾದ ಮಿಲಾಗ್ರಿಸ್ ನರ್ಸಿಂಗ್ ಕಾಲೇಜಿನ ಮೊದಲ ಬ್ಯಾಚ್ನ ಬಿಎಸ್ಸಿ ನರ್ಸಿಂಗ್ ಕೋರ್ಸ್ ನ ಉದ್ಘಾಟನೆಯು ನವೆಂಬರ್ 4 ಸೋಮವಾರದಂದು ನಡೆಯಿತು.
ಫ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ ಎಡಪಂಥೀಯ ನಾಯಕರ ವಿರುದ್ದ ಎಫ್ಐಆರ್ ದಾಖಲಾಗಿದೆ.
ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ತಪಸ್ಯಾ ಫೌಂಡೇಶನ್ ಅವರ ಬೆಂಬಲದೊಂದಿಗೆ, ಮಹಿಳಾ ಸ್ತನ ಮತ್ತು ಗರ್ಭಾಶಯದ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯೆಯ್ಯಡಿಯ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಹಾಲ್ನಲ್ಲಿ ನವೆಂಬರ್ 6, 2024 ರಂದು ಆಯೋಜಿಸಿತು.
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಿಂದ ಆಚರಿಸಲಾಯಿತು.
ಸಮಾಜದ ಏಳಿಗೆಗಾಗಿ ನಿಸ್ವಾರ್ಥ ಸೇವೆಗೈದ ಬಿ.ಎನ್.,ಮೂರ್ತಿ ಅವರ ಕೆಲಸ ಕಾರ್ಯಗಳು ಶ್ಲಾಘನೀಯ. ಅವರು 2010ರಲ್ಲಿ ಪುತ್ತೂರಿನಲ್ಲಿ ಅಂಬಿಕಾ ಪದವಿ ಪೂರ್ವ ಕಾಲೇಜು ಆರಂಭಿಸುವ ಸಂದರ್ಭದಲ್ಲಿ ಎದುರಾದ ಅಡ್ಡಿ ಆತಂಕಗಳನ್ನು ನಿವಾರಿಸುವಲ್ಲಿ ಬೆನ್ನೆಲುಬಾಗಿ ನಿಂತು ಸಂಸ್ಥೆಯ ಸರ್ವತೋಮುಖ ಏಳಿಗೆಗಾಗಿ ಪರಿಶ್ರಮಿಸಿದವರು.
ಸಾರ್ವಜನಿಕ ಸಂಬಂಧಗಳನ್ನು ಮರುಸಂಪರ್ಕಿಸಿ ಮತ್ತು ಮರು ವ್ಯಾಖ್ಯಾನಿಸುವ ನಿಟ್ಟಿನಲ್ಲಿ ಮಂಗಳೂರು, ಭಾರತ-ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (PRCI) 18 ನೇ ಜಾಗತಿಕ ಸಂವಹನ ಸಮಾವೇಶ 2024, ನವೆಂಬರ್ 8 ರಂದು ಮಂಗಳೂರಿನ ಮೋತಿ ಮಹಲ್ ನಲ್ಲಿ ಹಮ್ಮಿಕೊಂಡಿದೆ.
ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿಕೆ ನೀಡಿದ್ದಾರೆ.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜರುಗುವ ಮೂರನೇ ವರ್ಷದ ಸ್ಟ್ರೀಟ್ ಫುಡ್ ಫಿಯೇಸ್ಟಾ ಇದರ ದಿನಾಂಕ ಮತ್ತು ಸ್ಥಳದ ಘೋಷಣೆ ನಗರದ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಜರುಗಿತು.
ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷ ಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗ ವು ” ಕದ್ರಿ ವಿಷ್ಣು ಪ್ರಶಸ್ತಿ -2024″.ನೀಡಿ ಗೌರವಿಸಲಿದೆ.
ನಗರದಲ್ಲಿ ಸಂಚರಿಸುವ ಸಿಟಿ ಬಸ್ ಬಿಟ್ಟು ಉಳಿದ ಎಲ್ಲಾ ಸಾರಿಗೆ ಬಸ್ ಗಳು ಸಂಚಾರದ ಸಂದರ್ಭ ಬಾಗಿಲು ಮುಚ್ಚಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಆದೇಶ ಇಂದಿನಿಂದಲೇ ಜಾರಿಗೆ ಬರಲಿದೆ.
ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿ ಆಗಿಲ್ಲ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ ೧೭ ಕ್ಕೆ ಕಂಬಳ ನಡೆಯಲಿದೆ ಎಂದು ಸರಕಾರ ಹೈಕೋರ್ಟ್ ಮಾಹಿತಿ ನೀಡಿದೆ.
ಪರಿಸರದಲ್ಲಿ ಮಂಗಳವಾರ ಮುಂಜಾನೆ ಮಬ್ಬು ಕವಿದ ವಾತಾವರಣದಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವುಂಟಾಗಿದೆ.
ಹದಗೆಟ್ಟಿರುವ ನಂತೂರು – ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಇದರ ವತಿಯಿಂದ ಕುಳಾಯಿ ಮಹಿಳಾ ಮಂಡಲದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.
2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.