Showing 20 of 4486 posts • Page 183 of 225
7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಅಂಗವಾಗಿ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಮಾಹಿತಿ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಚಿನ್ನಾಭರಣ ಕಳವು, ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆ, ಸುಳಿವು ಕೊಟ್ಟ ನಾಯಿ, ಕೈಯಲ್ಲಿ ಮಾರಕಾಸ್ತ್ರ ನೋಡಿ ಅರ್ಚಕರು ಭಯಪಟ್ಟಿದ್ದಾರೆ.
ಜಪ್ಪಿನಮೊಗರು ಕ್ರಾಸ್ (ರಾ.ಹೆ.66) ಸಮೀಪ ಮಹಾಕಾಳಿ ಪಡ್ಡುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಕೆಳ ಸೇತುವೆಗಳ (ಆರ್ಯುಬಿ) ಕಾಮಗಾರಿ 2025ಜನವರಿಯಲ್ಲಿ ಪೂರ್ಣಗೊಳ್ಳಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಜರಗಿದ ರೈಲ್ವೆ ಅಭಿವೃದ್ಧಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ದಕ್ಷಿಣ ರೈಲ್ವೆ ಅಧಿ ಕಾರಿಗಳು ಈ ಕುರಿತು ಮಾಹಿತಿ ನೀಡಿದರು.
ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ.
ಳೆದ 35 ವರ್ಷಗಳಿಂದ ಐಟಿ- ಬಿಟಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ ಮುಡಿಪು ಕುರ್ನಾಡ್ ನಿವಾಸಿ ಚಂದ್ರ ಶೇಖರ್ ನಾಯಕ್ ಅವರಿಗೆ ಕರ್ನಾಟಕ ಸರ್ಕಾರ ಕೊಡಮಾಡುವ ಹೊರದೇಶ – ಹೊರನಾಡು ವಿಭಾಗದಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ನಾನು ಕಳೆದ 40 ವರ್ಷಗಳಿಂದ ಕುಡಿಯುವ ನೀರಿನ ಸಂಪರ್ಕಕ್ಕೆ ಆರ್ಯಾಪು ಗ್ರಾಪಂಗೆ ಮನವಿ ಮಾಡುತ್ತಿದ್ದರೂ ಕುಡಿಯುವ ನೀರಿನ ಸಂಪರ್ಕ ಕೊಟ್ಟಿಲ್ಲ ಎಂದು ಗ್ರಾಮದ ಪುಂಡಿಕಾಯಿ ನಿವಾಸಿ ಅಪ್ಪಿ ಎಂಬವರು ಶಾಸಕರಿಗೆ ದೂರು ನೀಡಿದ್ದಾರೆ.
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತುಮ್ಯಾನೇಜ್ಮೆಂಟ್, ಮಂಗಳೂರು, ಸಿನೆರ್ಜಿಯಾ 2024 ಅನ್ನು ಹೆಮ್ಮೆಯಿಂದ ಪ್ರಸ್ತುತಪಡಿಸುತ್ತದೆ.
ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಶುಕ್ರವಾರ ಸಂಜೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 10 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು-ಸುಳ್ಯದ ಗಡಿಪ್ರದೇಶವೊಂದರಲ್ಲಿ ಮಹಿಳೆಯೊಬ್ಬರು ಬೃಹತ್ ಗಾತ್ರದ ಹೆಬ್ಬಾವೊಂದನ್ನು ಹಿಡಿದ ವೀಡಿಯೋ ಇದೀಗ ಭಾರೀ ವೈರಲ್ ಆಗಿದೆ.
ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಅಕ್ರಮ ವಿರೋಧಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ಪುತ್ತೂರು ಬಿಜೆಪಿ ಮಂಡಲ ಪ್ರತಿಭಟನೆ ನಡೆಸಿದರು.
ರಾಜ್ಯ ಸರಕಾರದ ನಡೆಯ ವಿರುದ್ಧ ಮಂಗಳೂರಿನಲ್ಲಿ ಮಿನಿ ವಿಧಾನ ಸೌಧದ ಮುಂಭಾಗ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ.
ಸದ್ಯ ಎಲ್ಲಾ ಕಡೆ ವಕ್ಫ್ ಎಂಬ ಶಬ್ದವೇ ರಿಂಗಣಿಸುತ್ತಿದೆ. ರೈತರ, ಮಠ, ಮಂದಿರಗಳ ಭೂಮಿಯ ದಾಖಲೆಯನ್ನು ಪರಿಶೀಲಿಸುವಾಗ ಅನೇಕ ಕಡೆ ಆ ಭೂಮಿ ಈಗ ವಕ್ಫ್ ಆಸ್ತಿಯಾಗಿ ಬದಲಾಗಿರುವುದು ರೈತರಿಗೆ, ಆಸ್ತಿಕರಿಗೆ ದೊಡ್ಡ ಆಘಾತವನ್ನು ನೀಡಿದೆ.
ವಿಶ್ವ ಕೊಂಕಣಿ ಕೇಂದ್ರದಲ್ಲಿ ನವೆಂಬರ್ 2024 ರ ತಾರೀಕು 5 ಮತ್ತು 6, ಈ ಎರಡೂ ದಿನಗಳಲ್ಲಿ ವಿಶ್ವ ಕೊಂಕಣಿ ಸಮಾರೋಹ ಹಾಗೂ ವಿಶ್ವ ಕೊಂಕಣಿ ವಾರ್ಷಿಕ ಪುರಸ್ಕಾರ ಪ್ರದಾನ ಸಮಾರಂಭ ಜರುಗಲಿರುವುದು.
ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ.
ಮುಂದೊಂದು ದಿನ ಹಿಂದೂಗಳು ಸುನ್ನತ್ ಮಾಡಿಕೊಳ್ಳುವ ಸಂದರ್ಭ ಬರಬಹುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ವಿಚಾರ ಇದೀಗ ಮಂಗಳೂರಿನಲ್ಲಿ ಸದ್ದು ಮಾಡ್ತಿದೆ.
ಪತ್ರಕರ್ತರ ಜೊತೆ ದೀಪಾವಳಿ ಸ್ನೇಹಮಿಲನ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡಿದ್ದರು.
ವಕ್ಫ್ ವಿವಾದದ ವಿರುದ್ಧ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟದ ನಡುವೆ ಯಾವುದೇ ಕ್ಷಣದಲ್ಲಿ ಮುರಿದು ಬೀಳಬಹುದಾಗಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬೋಳೂರು ವಾರ್ಡಿನ ಪರಪ್ಪು ಕಾಲೋನಿಯ ಪರಿಶಿಷ್ಟ ಸಮುದಾಯದ ದಿವಂಗತ ರವಿಯವರ ಕುಟುಂಬದವರಿಗಾಗಿ ಶಾಸಕ ಶ್ರೀ ಡಿ.ವೇದವ್ಯಾಸ ಕಾಮತ್ ಹಾಗೂ ಸ್ಥಳೀಯ ಪಾಲಿಕೆ ಸದಸ್ಯ ಶ್ರೀ ಜಗದೀಶ್ ಶೆಟ್ಟಿ ರವರ ನೇತೃತ್ವದಲ್ಲಿ ನಿರ್ಮಿಸಲಾದ ಸುಸಜ್ಜಿತ “ಶ್ರದ್ಧಾ” ಮನೆಯನ್ನು ಹಸ್ತಾಂತರಿಸುವ ಕಾರ್ಯಕ್ರಮವು ನಡೆಯಿತು.
ಮಂಗಳೂರು ಏರ್ಪೋರ್ಟ್ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಇವರ ಅಳೂ ಎಲ್ಲಾ ಬರೋದೇ ಎಲೆಕ್ಷನ್ ಟೈಮ್ ನಲ್ಲಿ, ಮಿಸ್ಟರ್ ಕುಮಾರಸ್ವಾಮಿ, ಒಂದು ರಾಷ್ಟ್ರಧ್ವಜ ಹಾರಿಸೋಕೆ ನಿಮ್ಮ ಅವಧಿಯಲ್ಲಿ ರಾಮನಗರಕ್ಕೆ ಹೋಗಿಲ್ಲ,