Showing 20 of 4486 posts • Page 185 of 225
ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತು ಅ. ೨೯ ಮಂಗಳವಾರ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯೊಂದಿಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಾತುಕತೆ ನಡೆಸಿದರು.
ಕೆ.ಎಸ್.ರಾವ್ ರಸ್ತೆಯ ಜೋಸ್ ಅಲುಕ್ಕಾಸ್ ಬಳಿ ರಸ್ತೆ ಮಧ್ಯದಲ್ಲಿರುವ ಕೇಬಲ್ ಛೇಂಬರ್ ವಾಹನ ಸವಾರರಿಗೆ ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಜಪ್ಪಿನಮೊಗರಿನಿಂದ ಮಹಾಕಾಳಿಪಡುವಾಗಿ ಮಾರ್ಗನ್ಸ್ಗೇಟ್ ವರೆಗಿನ ಚತುಷ್ಪಥ ರಸ್ತೆ ಅಭಿವೃದ್ಧಿಯ ಭಾಗವಾಗಿ ಈ ಕಾಮಗಾರಿ ನಡೆಯುತ್ತಿದೆ.
ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಕೇರಳ ಕಾಸರಗೋಡಿನ ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಭಾರಿ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ 24 ಗಾಯಾಳುಗಳು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಸ್ಕೂಟರನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಅಕ್ಟೋಬರ್ 14, 2024 ರಂದು ಸ್ನೇಹಾಲಯದ ಟ್ರಸ್ಟಿಯಾದ ಸರಿತಾ ಕ್ರಾಸ್ತಾರವರು, ಸ್ನೇಹಾಲಯ ತಂಡದವರ ಸಹಕಾರದೊಂದಿಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಅನಿತಾ(40) ಎಂಬ ಮಾನಸಿಕ ಅಸ್ವಸ್ಥ ಮಹಿಳೆಯನ್ನು ರಕ್ಷಿಸಿದರು.
ಹಾಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈಗೆ ಬಿಜೆಪಿ ಗಾಳ ಹಾಕಿದ್ದು, ಅರುಣ್ ಪುತ್ತಿಲ ಬದಲು ಅಶೋಕ್ ರೈಯನ್ನೇ ಬಿಜೆಪಿಗೆ ಸೆಳೆದು ಅಭ್ಯರ್ಥಿಯಾಗಿಸೋ ಪ್ಲಾನ್ ಹಾಕಿದ್ದಾರೆ.
ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ನಡೆದಿದೆ.
ಉಳ್ಳಾಲ ತಾಲೂಕಿನಲ್ಲಿ 30 ಹಾಸಿಗೆಗಳ ತಾಲೂಕು ಆಯುಷ್ ಆಸ್ಪತ್ರೆ ಸ್ಥಾಪನೆಗೆ ಆಯುಷ್ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.
ಮಾಣಿ ಗ್ರಾಮ ಪಂಚಾಯತ್ತಿನ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ.
ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ನಡೆದಿದ್ದು,
ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ೨೪ ಅಕ್ಟೋಬರ್ ೨೦೨೪ ರಂದು ಲಡಾಖ್ನ ಮನಮೋಹಕ ಪ್ರದೇಶವನ್ನು ಕೇಂದ್ರೀಕರಿಸಿದ ಮತ್ತು ಶೈಕ್ಷಣಿಕ ಕಲಾ ಸಂಯೋಜಿತ ಪ್ರಾಜೆಕ್ಟ್ ಪ್ರದರ್ಶನವನ್ನು ಆಯೋಜಿಸಲಾಯಿತು.
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1 ರಂದು ಶುಕ್ರವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
“ತುಳುನಾಡಿನ ದೈವ ದೇವರುಗಳ ಅನುಗ್ರಹದಿಂದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಬೀದಿಬದಿ ವ್ಯಾಪಾರಿಗಳಿಗೆ ಸ್ಟೇಟ್ ಬ್ಯಾಂಕ್ ಸಮೀಪ ಪ್ರತ್ಯೇಕ ವಲಯ ನಿರ್ಮಾಣ ಮಾಡಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು.
ಸೈಟ್ ತೋರಿಸುವುದಾಗಿ ಹೇಳಿ ಬಿಲ್ಡರ್ ನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರಿನಡಿ ಮಂಗಳೂರಿನ ಬಿಲ್ಡರ್ ರಶೀದ್ ವಿರುದ್ದ ಎಫ್ಐಆರ್ ದಾಖಲಾಗಿದೆ.