Showing 20 of 4486 posts • Page 186 of 225
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ , ಕಲಾ ಸಂಘದ ಆಶ್ರಯದಲ್ಲಿ “ಮಾನವ ಕಳ್ಳಸಾಗಣೆ” ಎಂಬ ವಿಷಯದ ಕುರಿತಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ಹಾವು ನುಗ್ಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ.
ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ನಡೆದಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ದೂರಿನ ಹಿನ್ನೆಲೆ ಇಡ್ಯಾ ಗ್ರಾಮದ ಶಾರೀಕ್ ಎಂಬಾತನನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಟಾಕಿ ಮಾರಾಟಗಾರರ ಸಂಘ ಮಂಗಳೂರು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಕೇಂದ್ರಗಳನ್ನು ಈ ಬಾರಿ ತೆರೆಯಲಾಗುವುದು ಎಂದು ಮಂಗಳೂರಿನಲ್ಲಿ ಸಂಘದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾಧ್ಯಮ ಸಂಶೋಧನೆ ವಿಧಾನಗಳ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1600 ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬೆಳ್ಮ ಗ್ರಾಮದ ಕಲ್ಲಪಾಡಿ ಎಂಬಲ್ಲಿ ಆಟೋ ರಿಕ್ಷಾ ಮತ್ತು ಪಿಕಪ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ವರ್ಷದ ಶಾಲಾ ಬಾಲಕಿ ಆಯಿಷಾ ವಾಹಿಬಾ ಮೃತಪಟ್ಟಿದ್ದಾಳೆ.
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಲ್ಲಿಕಟ್ಟೆಯ ಪಿಡಬ್ಲ್ಯೂಡಿ ಪರಿಶೀಲನಾ ಬಂಗಲೆ ಆವರಣದಿಂದ ಬೆಲೆಬಾಳುವ ಮರಗಳನ್ನು ಅನಧಿಕೃತವಾಗಿ ತೆರವುಗೊಳಿಸಿದ್ದಕ್ಕಾಗಿ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ಎನ್ಇಸಿಎಫ್) ನೀಡಿದ ದೂರಿನ ನಂತರ ಅರಣ್ಯ ಇಲಾಖೆ ಪಿಡಬ್ಲ್ಯೂಡಿ ಗುತ್ತಿಗೆದಾರನ ವಿರುದ್ಧ ತ್ವರಿತ ಕ್ರಮ ಕೈಗೊಂಡಿದೆ.
ವಿಧಾನ ಪರಿಷತ್ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು ಸಾಧಿಸಿದೆ.
ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ,ಭಕ್ತಿ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು.
ಕರಾವಳಿಯಲ್ಲಿ ನಡೆದ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು, ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ವ್ಯವಸ್ಥೆ ನಡೆಯುತ್ತಿದೆ.
ಕದ್ರಿ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಮನ್ಷಿದಾ ಬಾನು ಅವರು ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ತಮ್ಮ ಸ್ಕೂಟರ್ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ದ.ಕ ಜಿಲ್ಲೆಯ ಕಡಬ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು, ಕಡಬದಲ್ಲಿ ಗಾಳಿ, ಸಿಡಿಲು ಸಹಿತ ಭಾರೀ ಮಳೆಯಾಗಿದೆ.
1999 ರಲ್ಲಿ ಜಿಲ್ಲೆಯ ಪ್ರಪ್ರಥಮ ತುಳುವಾಹಿನಿ ನಮ್ಮಕುಡ್ಲ ಸ್ಥಾಪನೆಯಾಗಿ ತುಳುನಾಡಿನ ಕಲೆ, ಇತಿಹಾಸ, ಸಂಸ್ಕೃತಿ, ಹಾಗೂ ಜನಜೀವನಕ್ಕೆ ಒತ್ತುಕೊಡುವ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಕೇಬಲ್ ಟಿವಿ, ಅಂತರ್ ಜಾಲದ ಮೂಲಕ ಪ್ರಸಾರ ಮಾಡುತ್ತಿದೆ.
ಪುತ್ತಿಲ ಪರಿವಾರ ಹಾಗೂ ವಿಶ್ವ ಹಿಂದೂ ಪರಿಷದ್ ನ ಕಾರ್ಯಕರ್ಯರ ನಡುವೆ ವಿಶ್ವ ಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ವೇಳೆ ಸ್ವಾಮೀಜಿ, ವಿಹಿಂಪ ರಾಷ್ಟೀಯ ನಾಯಕರ ಎದುರಲ್ಲೇ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ- ಮಂಗಳೂರಿಗೆ ವಿಶೇಷ ರೈಲು ಸೇವೆ ಒದಗಿಸಲಾಗಿದೆ. ಆದರೆ ಹಬ್ಬ ಮುಗಿಸಿ ವಾಪಸ್ ಬೆಂಗಳೂರಿಗೆ ರೈಲಿನ ಸೇವೆ ಕಲ್ಪಿಸದೇ ಇರುವುದು ಪ್ರಯಾಣಿಕರಿಗೆ ಅನಾನುಕೂಲವಾಗಿದೆ.
ರೂಟ್ ನಂಬರ್ 13 b ಕುಳೂರು ಕಾವೂರು ಬಸ್ ಚಾಲಕ ನಿರ್ವಾಹಕರು ಹಾಗೂ ಸಮಯ ಪರಿಪಾಲಕರು ವಾಟ್ಸ್ ಅಪ್ ಗ್ರೂಪ್ ಮಾಡಿಕೊಂಡಿದ್ದು ಸಮಾಜ ಮುಖಿ ಕಾರ್ಯದಲ್ಲಿ ತೊಡಗಿದ್ದು ಈ ಬಾರಿ ಹದಗೆಟ್ಟ ರಸ್ತೆಯನ್ನ ಶ್ರಮದಾನ ಮಾಡುವ ಮೂಲಕ ಮತ್ತೆ ಸುದ್ದಿ ಮಾಡಿದ್ದಾರೆ.
ಇ & ಎನ್ ಸಿ ಪಿಎಸ್ ಠಾಣಾ ಅ,ಕ್ರ 37/2019 ಕಲಂ : 8©, 20(b) (ii) (a) NDPS ACT ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಸಲೀಂ @ ಮೊಹಮ್ಮದ್ ಸಲೀಂ ಪ್ರಾಯ 38 ವರ್ಷ ತಂದೆ-ಪಿ ಇಬ್ರಾಹಿಂ ವಾಸ-ಯು ಎಮ್ ಅಬ್ದುಲ್ಲಾ ಮಂಜಿಲ್ ಟಿಸಿ ರಸ್ತೆ ರಾಯಲ್ ಕ್ಯಾಟರಿಂಗ್ ಬಳಿ ಒಳಪೇಟೆ ಉಳ್ಳಾಲ ಮಂಗಳೂರು ಎಂಬಾತನನ್ನು 2019 ರಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತದ ನಂತರ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.