Showing 20 of 4486 posts • Page 187 of 225
ಸ್ಪರ್ಧೋತ್ಸವದ ಅಂಗವಾಗಿ 22-10-2024 ರ ಬೆಳಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ “ಸ್ಪರ್ಧೋತ್ಸವಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕಾರಿ.
ಕರಾವಳಿಯಲ್ಲಿ ಡ್ರಗ್ಸ್ ಮಾಫಿಯಾ ಹಾವಳಿ ಹೆಚ್ಚಾಗುತ್ತಿದೆ, ಈ ಕುರಿತು ಈಗಾಗಲೇ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ. ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಬಂಡಾರಿ ಹೇಳಿಕೆ ನೀಡಿದ್ದಾರೆ.
ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಆತನಿಗೆ ಕಠಿಣ ಶಿಕ್ಷೆ ನೀಡುವಂತೆ,
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಪ್ರಮುಖ ಉಪಕ್ರಮವಾದ ಏಕಲವ್ಯ ಮಾದರಿ ವಸತಿ ಶಾಲೆ (ಇಎಂಆರ್ಎಸ್) ಹೊಂದಿರುವ ಜಿಲ್ಲೆಗಳ ಪಟ್ಟಿಗೆ ಮಂಗಳೂರು ಸೇರಲು ಸಜ್ಜಾಗಿದೆ.
ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟವು ಸರಸ್ವತಿ ಶಿಶುಮಂದಿರ, ಮುಖರ್ಜಿನಗರ, ದೇವಸ್, ಮಧ್ಯಪ್ರದೇಶ ಇಲ್ಲಿ ನಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ಭಾಗವಹಿಸಿ ತೃತೀಯ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ವತಿಯಿಂದ “ಸಾಹಿತ್ಯದಲ್ಲಿ ಭಾರತೀಯ ಮಹಿಳೆ” ವಿಷಯದ ಬಗ್ಗೆ ರಾಜ್ಯ ಮಟ್ಟದ ಮಹಿಳಾ ಗೋಷ್ಠಿ ಅ.27ರಂದು ಬೆಳಗ್ಗೆ 9.30ಕ್ಕೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಬಳಿಯ ಸೂರ್ಯಕಮಲ್ ಸಭಾಂಗಣದಲ್ಲಿ ನಡೆಯಲಿದೆ.
ಬ್ಯಾಪ್ಟಿಸ್ಟ್ ಸ್ಪೋರ್ಟ್ಸ್ ಫೌಂಡೇಶನ್ (ರಿ)ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬ್ಯಾಪ್ಟಿಸ್ಟ್ ಬ್ಯಾಡ್ಮಿಂಟನ್ ಅಕಾಡೆಮಿ, ಉರ್ವಸ್ಟೋರ್ ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗಳ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ರಾಜ್ಯೋತ್ಸವ ಕಪ್ 2024 ಉದ್ಘಾಟನಾ ಸಮಾರಂಭ ಅಕ್ಟೋಬರ್ 26 ರಂದು ಬೆಳಿಗ್ಗೆ 9.30ಕ್ಕೆ ಮಂಗಳಾ ಕ್ರೀಡಾಂಗಣ ಮಂಗಳೂರಿನಲ್ಲಿ ನಡೆಯಲಿದೆ.
ಜಿಲ್ಲಾ ಸ್ಥಳೀಯಾಡಳಿತ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆ ಮತದಾನ ಶಾಂತಿಯುತವಾಗಿ ಮುಗಿದಿದ್ದು, ಶೇ.97.91 ರಷ್ಟು ಮತದಾನವಾಗಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ಚಾವಡಿ ರಘುನಾಥ್ ರೈ ಮೇಲೆ ಇಬ್ಬರು ಯುವಕರು ಏಕಾಏಕಿ ಚೂರಿಯಿಂದ ತಲೆಗೆ ಇರಿದು ಹಲ್ಲೆ ಮಾಡಿ ಜೀವಬೆದರಿಕೆ ಒಡ್ಡಿರುವ ಘಟನೆ ತಿಂಗಲಾಡಿ ಬಳಿ ನಡೆದಿದೆ.
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧೀಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಮತದಾನ ಬಿರುಸಿನಿಂದ ಆರಂಭಗೊಂಡಿದೆ.
ಮಂಗಳೂರು-ಕೇರಳ ನಡುವಿನ ರೈಲು ಹಳಿ ತಪ್ಪಿಸುವ ಯತ್ನ ನಡೆದಿದೆ. ಮಂಗಳೂರಿನ ಉಳ್ಳಾಲ ತಾಲೂಕಿನ ತೊಕ್ಕೊಟ್ಟುವಿಲ್ಲಿ ಭಾರೀ ಆತಂಕ ಹುಟ್ಟಿಸಿದ್ದು, ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಜಲ್ಲಿಕಲ್ಲುಗಳನ್ನಿಟ್ಟು ಆಗಂತುಕರಿಬ್ಬರು ಪರಾರಿಯಾಗಿದ್ದಾರೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ಮಧ್ಯ ಪ್ರದೇಶದ ಮನ್ಸೂರ್ ಸರಸ್ವತಿ ಸೈನಿಕ ಶಾಲೆಯಲ್ಲಿ ನಡೆದ ವಿದ್ಯಾಭಾರತಿ 19 ವರ್ಷ ವಯೋಮಾನದ ಒಳಗಿನವರ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಗೈದಿರುತ್ತಾರೆ.
ನಗರದ ನಂತೂರು ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕೋಡಿಕಲ್ ನಿವಾಸಿ ಕ್ರಿಸ್ಟಿ ಕ್ರಾಸ್ತಾ ಎಂದು ಗುರುತಿಸಲಾಗಿದೆ.
ಮನೆಯೊಳಗೆ ಏಕಾ ಏಕಿ ಚಿರತೆಯೊಂದು ನುಗ್ಗಿದ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ.
ವೆಚ್ಚವನ್ನು ಕಡಿತಗೊಳಿಸುವ ಪ್ರಯತ್ನದಲ್ಲಿ, ರಾಜ್ಯ ಸರ್ಕಾರವು ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕಾರ್ಡ್ಗಳ ಸಮಗ್ರ ಪರಿಶೀಲನೆಯನ್ನು ಪ್ರಾರಂಭಿಸಿದೆ.
ಅಕ್ಟೋಬರ್ 21 ರಂದು ನಡೆಯಲಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿವೆ.
ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ ಸೋಜರವರ ನೇತೃತ್ವದಲ್ಲಿ ಕಳೆದ 9 ವರ್ಷಗಳಿಂದ ಸರ್ವ ಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ, ಕ್ರಿಸ್ ಮಸ್ ರಂಜಾನ್ ಹಬ್ಬಗಳನ್ನು ಸರ್ವ ಧರ್ಮಿಯರು ಸೇರಿಕೊಂಡು ಬಹಳ ವಿಜೃಂಜಣೆಯಿಂದ ಆಚರಿಸಲಾಗುತ್ತಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಾರ್ಷಿಕ ಪೂರ್ಣ ಪ್ರಮಾಣದ ಏರೋಡ್ರೋಮ್ ತುರ್ತು ವ್ಯಾಯಾಮವನ್ನು (ಎಫ್ಎಸ್ಎಇಇ) ಯಶಸ್ವಿಯಾಗಿ ನಡೆಸಿತು.
ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ನಿನ್ನೆ ಮಧ್ಯಾಹ್ನ ಬಂಧಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರಿಗೆ ಇಂದು ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.