Showing 20 of 4103 posts • Page 188 of 206
ನಾಳೆ ದ.ಕ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸಂಗಮ ಕ್ಷೇತ್ರ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಾಲ್ಕು ವರ್ಷದ ಬಳಿಕ ನೇತ್ರಾವತಿ-ಕುಮಾರಾಧಾರ ನದಿ ಸಂಗಮವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಬ್ಬರ ಮಳೆ ಜೋರಾಗಿದೆ. ಕುಮಾರಧಾರ-ನೇತ್ರಾವತಿ ನದಿ ಮೈದುಂಬಿ ಹರಿಯುತ್ತಿದೆ. ಜೀವನದಿಗಳ ಸಂಗಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಇಲ್ಲಿನ ಎಪಿಎಂಸಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಭಾರೀ ಮಳೆ ಸುರಿಯುತ್ತಿದ್ದು, ತಾಲೂಕಿನ ಪ್ರಮುಖ ರಸ್ತೆಯಾಗಿರುವ ಎಪಿಎಂಸಿ ರಸ್ತೆ ನೀರಿನಿಂದ ತುಂಬಿ ಹೋಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಮೈದುಂಬಿ ಹರಿಯುತ್ತಿವೆ.
ಇಂದು (ಜುಲೈ 30) ಬೆಳಿಗ್ಗೆ ನಂತೂರು ಪದವು ರಸ್ತೆಯಲ್ಲಿ ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಸವಾರನನ್ನು ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ.
ಮಂಗಳೂರಿನಲ್ಲಿ ಬೆಳಗ್ಗಿನ ಜಾವ ಸುರಿದ ಭಾರಿ ಗಾಳಿ ಮಳೆ ಅವಾಂತರ ಸೃಷ್ಟಿಸಿದ್ದು ಅನೇಕ ಕಡೆ ಸಮಸ್ಯೆಗಳನ್ನೇ ಸೃಷ್ಟಿಸಿದೆ. ಕೊಟ್ಟಾರ ರಾಷ್ಟ್ರೀಯ ಹೆದ್ದಾರಿ ಪಕ್ಕದ Auto world tower ಕಟ್ಟಡದ ಮೇಲ್ಚಾವಣಿ ಹಾರಿ ಹೋಗಿದೆ
ಮೇಯರ್ ಸುಧೀರ್ ಶೆಟ್ಟಿಯವರ ಸರ್ವಾಧಿಕಾರಿ ತೀರ್ಮಾನವನ್ನು ಪಾಲಿಕೆ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಬಿಕೆ ಇಮ್ತಿಯಾಜ್ ಆರೋಪಿಸಿದ್ದಾರೆ.
ಕರ್ನಾಟಕ ಅಲೈಡ್ & ಹೆಲ್ತ್ಕೇರ್ ಕೌನ್ಸಿಲ್ನ ಅಧ್ಯಕ್ಷರಾಗಿ ನೇಮಕಗೊಂಡ ಪ್ರೊ. ಡಾ. ಇಫ್ತಿಕಾರ್ ಅಲಿ ಅಹ್ಮದ್ ಅವರನ್ನು ಗೌರವಿಸಲು ಯೆನೆಪೋಯ ಅಲೈಡ್ ಮತ್ತು ಹೆಲ್ತ್ಕೇರ್ ಪ್ರೊಫೆಷನ್ಸ್, ಭವ್ಯವಾದ ಸನ್ಮಾನ ಸಮಾರಂಭವನ್ನು ಆಯೋಜಿಸಿತ್ತು.
ವಿನಾಶದ ಅಂಚಿನಲ್ಲಿರುವ ಅತೀ ಸೂಕ್ಷ ಬುಡಕಟ್ಟು ಸಮುದಾಯವೆಂದು ಸರಕಾರವೇ ಗುರುತಿಸಿರುವ ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾದ ಕೊರಗ ಸಮುದಾಯದ ಬಗ್ಗೆ ಸರಕಾರಿ ಆಡಳಿತದ ಮೋದಸಳೆ ಕಣ್ಣೀರು ಕೊನೆಯಾಗಬೇಕು.
ಮಹಾನಗರ ವ್ಯಾಪ್ತಿಯಲ್ಲಿ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿಯನ್ನು ಸಿಐಟಿಯು ದ.ಕ.ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ.
ಘಟ ಪ್ರದೇಶದಲ್ಲಿ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ 7.9 ಮೀ. ಗೆ ತಲುಪಿದೆ.
ತಾಲೂಕಿನೆಲ್ಲೆಡೆ ಕಳೆದ ರಾತ್ರಿಯಿಂದ ನಿರಂತೆ ಮಳೆಯಾಗುತ್ತಿರುವ ಪರಿಣಾಮ ನೇತ್ರಾವತಿ, ಮೃತ್ಯುಂಜಯ ನದಿಗಳು ಉಕ್ಕಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಮರ ಉರುಳಿದ್ದರಿಂದ ಸಂಚಾರಕ್ಕೆ ತಡೆಯಾಗಿದೆ.
ಮಂಗಳೂರಿನ ಶಕ್ತಿ ನಗರದ ಶಕ್ತಿಪೂರ್ವ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಹುಲಿಯ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತು.
ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.
ಗೋಖಲೆ ಸಮಾಜದ ಅಮಾಯಕ ಹುಡುಗಿ ಅನರ್ಘ್ಯ ಸಾವಿಗೆ ಕಾರಣರಾದ ಮತ್ತು ಗುರುಪ್ರಸಾದ್ ಗೋಖಲೆ ಯವರಿಗೆ ತೀವ್ರವಾದ ಏಟು ಆಗಲು ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಂಡು ನ್ಯಾಯ ಒದಗಿಸಿ ಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು.
ಕಲಾಪದ ವೇಳೆ ತುಳು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸನ್ಮಾನಿಸಿತು.
ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ನಿನ್ನೆ ರಾತ್ರಿ ಬನ್ನೂರಿನಲ್ಲಿ ತಾಯಿ ಮಗನಿಗೆ ಗಲಾಟೆ ನಡೆಯುತ್ತಿತ್ತು.
ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೊಲೆರೊ ವಾಹನ ಚಲಾಯಿಸಿ ಬೈಕ್ಗೆ ಡಿಕ್ಕಿ ಹೊಡೆದಿದ್ದು, 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೀಟು ಬಳಿ ನಡೆದಿದೆ.
ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಯುವ ಮೋರ್ಚಾ ವತಿಯಿಂದ ವೀರ ಮರಣ ಹೊಂದಿದ ಹುತಾತ್ಮ ಯೋಧರಿಗೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಲಾಯ್ತು.