Showing 20 of 4486 posts • Page 189 of 225
ಪದುವಾ ಜಂಕ್ಷನ್ ಬಳಿ ನೆಟ್ಟು ಸಂರಕ್ಷಿಸಲಾಗುತ್ತಿದ್ದ ಮಿಯಾವಾಕಿ ಅರಣ್ಯವನ್ನು ಕಡಿಯದಂತೆ ಹೈಕೋರ್ಟ್ ಆದೇಶಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ ಉಂಟಾಗಿದೆ.
ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.
ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು, ಭಾನುವಾರ ರಾತ್ರಿ ಕಳ್ಳನೊಬ್ಬನ ಚಟುವಟಿಕೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ದಸರಾ ಶೋಭಾಯಾತ್ರೆ ವೇಳೆ ವಿದ್ಯಾರ್ಥಿಗಳ ಹೊಡೆದಾಟ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಳಲಿಯ (ಅಡ್ಡೂರು) ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆಯಲ್ಲಿ ಘನವಾಹನ ಸಂಚಾರದ ಕುರಿತಂತೆ ಎರಡು ತಿಂಗಳುಕಳೆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಮತ್ತು ಪರ್ಯಾಯ ರಸ್ತೆಯ ವ್ಯವಸ್ಥೆಗೆ ಮುಂದಾಗದೆ ನಿರ್ಲಕ್ಷ್ಯತನ ತೋರಿದ ಜಿಲ್ಲಾಡಳಿತದ ವಿರುದ್ದ ಜನಾಕ್ರೋಶ ವ್ಯಕ್ತವಾದ ಬೆನ್ನಲೇ ಎಚ್ಚೆತ್ತ ಜಿಲ್ಲಾಡಳಿತ ಬಂಟ್ವಾಳ ತಹಶೀಲ್ದಾರರ ನೇತೃತ್ವದ ಅಧಿಕಾರಿಗಳ ದಂಡು ಸೋಮವಾರ ಪೊಳಲಿಗೆ ರವಾನಿಸಿ ಗ್ರಾಮಸ್ಥರ ಮನವೊಲಿಸಿದ್ದು,ಕೊನೆಗೂ ಮಂಗಳವಾರ ( ಅ.15) ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ಹಿಂತೆಗೆಸುವಲ್ಲಿ ಯಶಸ್ವಿಯಾಗಿದೆ.
ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಭುತ್ವ ದೇಶದ ಜನಗಳು ಜಾಗೃತ ಪ್ರಜೆಗಳಾಗಬೇಕು. ಒಂದು ವೇಳೆ ಜಾಗೃತ ಪ್ರಜೆಗಳಾಗದೇ, ಜನರಾಗಿಯೇ ಉಳಿದುಕೊಂಡರೆ ಎಷ್ಟೇ ವರ್ಷ ಕಳೆದರೂ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಅಭಿಪ್ರಾಯಿಸಿದರು.
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ನ ಉಪಚುನಾವಣೆಯ ಜನಪ್ರತಿನಿಧಿಗಳ ಸಮಾವೇಶ ಇಂದು ಬಂಟ್ವಾಳ ದ ಸ್ಪರ್ಶ ಸಭಾಂಗಣದಲ್ಲಿ ನಡೆಯಿತು.
ಪೊಳಲಿ -ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದಂತೆ ನಿರ್ಬಂಧ ಹೇರಳಲಾಗಿತ್ತು.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯನಿರ್ವಹಿಸಲು, ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನೋಡಿಕೊಳ್ಳಲು
ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ
ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಇಂದು ಅಸೈಗೋಳಿ ಬಂಟರ ಭವನದಲ್ಲಿ ನಡೆಯಿತು. ಸಂಸದರಾದ ಬ್ರಿಜೇಶ್ ಚೌಟ
ವಿಟ್ಲ- ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ
ಮಂಗಳೂರಿನ ಕೊಡಿಯಾಲ್ ಬೈಲ್ ಪ್ರತಿಷ್ಠಿತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಇಬ್ಬರು ಯುವಕರು ಮುಖಂಡನ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಬಂಟ್ವಾಳ ತಾಲೂಕಿನ ವಿಟ್ಲದ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯದಲ್ಲಿ ಸ್ತ್ರಿಸಂಘಟನೆ, ಸ್ತ್ರೀ ಹಾಗೂ ಕುಟುಂಬ ಆಯೋಗದ ವತಿಯಿಂದ ವಿವಾಹಿತರ ದಿನವನ್ನು ಆಚರಿಸಿದರು.
ಮಾಜಿ ಶಾಸಕ ಮೊಯಿದ್ದಿನ್ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ(ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರಿನ ಯಮಸ್ವರೂಪಿ ಬಸ್ ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದದಲ್ಲಿ ಖಾಸಗಿ ಬಸ್ಸೊಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.