Showing 20 of 4469 posts • Page 19 of 224
: ರಾಜ್ಯ ಸರ್ಕಾರ ಅವೈಜ್ಞಾನಿಕ ಕ್ರಮಗಳನ್ನು ಹೇರುವ ಮೂಲಕ ಟ್ಯಾಕ್ಸಿ ಹಾಗೂ ಕ್ಯಾಬ್ ಚಾಲಕರ ಸ್ವಾಭಿಮಾನದ ಬದುಕನ್ನು ಸಂಕಷ್ಟಕ್ಕೀಡು ಮಾಡಿದೆ. ಸುಮಾರು 57 ವರ್ಷಗಳಿಂದ ನಮ್ಮ ಅಸೋಸಿಯೇಶನ್ ಹಲವಾರು ಬೇಡಿಕೆಗಳನ್ನು ಸಂಬಂಧಪಟ್ಟವರಿಗೆ ಅಹವಾಲು ನೀಡಿದ್ರೂ ಪ್ರಯೋಜನವಾಗಿಲ್ಲ.
ಮೀನುಗಾರಿಕೆ ನಿಷೇಧ ಅವಧಿ ಮುಗಿದ ಮೂರನೇ ದಿನವಾದ ಸೋಮವಾರ ಮೀನುಗಾರಿಕ ಚಟುವಟಿಕೆಗಳು ಮತ್ತೆ ಆರಂಭವಾಗಿವೆ.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ನೇಪಾಳ ಘಟಕದ ಅಧ್ಯಕ್ಷರಾಗಿ ಉಡುಪಿ ಜಿಲ್ಲೆಯ ಹಿಲಿಯಾಣ ಗ್ರಾಮದ ಗೊಳಿಯಂಗಡಿ ಮೂಲದ, ಪಶುಪತಿನಾಥ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಎಚ್. ಗಣೇಶ್ ಭಟ್ಟ ಅವರನ್ನು ನೇಮಕ ಮಾಡಲಾಗಿದೆ.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಭಾಗವಾಗಿ ಕತಾರ್, ಒಮಾನ್ ಹಾಗೂ ನೈಜೀರಿಯಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಸೋಮವಾರ ವ್ಯಾಪಕ ಮಳೆಯಾಗಿದ್ದು, ಕೆಲವೆಡೆ ಜನರಿಗೆ ಬಿಸಿಲಿನ ತಾಪದಿಂದ ನಿರಾಳತೆ ನೀಡಿದರೆ, ಇನ್ನೂ ಹಲವೆಡೆ ರಸ್ತೆಗಳು, ಚರಂಡಿಗಳು ಹಾಗೂ ಮೂಲಸೌಕರ್ಯಗಳಿಗೆ ಹಾನಿಯಾಗಿದೆ.
ಭೂಕುಸಿತದ ಕಾರಣದಿಂದ ಕಳೆದ ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ಮಂಗಳೂರು ಮತ್ತು ಬೆಂಗಳೂರು ನಡುವಿನ ರೈಲು ಸಂಚಾರವು ಈಗ ಅಧಿಕೃತವಾಗಿ ಪುನರಾರಂಭಗೊಂಡಿದೆ.
7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 13ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನ ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಆಗಸ್ಟ್ 2 ರಂದು ಬಂಧಿಸಿದ್ದಾರೆ.
ನೆಲ್ಯಾಡಿ ಸಮೀಪದ ರೇಖ್ಯಾ ಗ್ರಾಮದ ನೆಲ್ಯಡ್ಕ–ಇಡ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಮೃತರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ₹5 ಲಕ್ಷ ಮೊತ್ತದ ತುರ್ತು ಪರಿಹಾರ ಚೆಕ್ ಹಸ್ತಾಂತರಿಸಲಾಗಿದೆ.
ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್ ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ ಮೆನ್ ಓರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ತಮ್ಮ ಮನೆಯ ಸಮೀಪದ ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಕರ್ನಾಟಕದಾದ್ಯಂತ ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ವಿಸ್ತರಿಸುವ ತನ್ನ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತಾ ಎಂಸಿಸಿ ಬ್ಯಾಂಕ್ ನ 23ನೇ ಶಾಖೆಯು ಕಟಪಾಡಿಯಲ್ಲಿ ಭಾನುವಾರ, ಆಗಸ್ಟ್ 2, 2026ರಂದು ಉದ್ಘಾಟನೆಗೊಂಡಿತು.
ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ.
ರಾಯಿ ಗ್ರಾಮದ ಪಾಂಚಕೋಡಿ ಎಂಬಲ್ಲಿ ಧಾರಾಕಾರ ಮಳೆಯ ನಡುವೆ ಕಾಲುಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ಹರಡುತ್ತಿರುವ ತೋಡಿಗೆ ಬಿದ್ದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗಾಗಿ ಎನ್ಡಿಆರ್ಎಫ್ (NDRF) ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭಾನುವಾರ ದಿನವಿಡೀ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಬೆಳಗಿನಿಂದ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿ ನದಿ ತಟ ಪ್ರದೇಶಕ್ಕೆ ನೀರು ನುಗ್ಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ರಾತ್ರಿ ಆರಂಭವಾದ ಮಳೆಯ ಆರ್ಭಟ ಶನಿವಾರವೂ ಮುಂದುವರಿದಿದೆ.
ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್ನನ್ನು ತನಿಖೆಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಪ್ರಸ್ತುತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಮ್ಮ ಸಾಂಪ್ರದಾಯಿಕ ಪ್ರವಾಸಿ ವಾಹನಗಳ ಮೇಲೆ ಬಹಳಷ್ಟು ತಾರತಮ್ಯ ಹಾಗೂ ಅವೈಜ್ಞಾನಿಕ ಪಾರ್ಕಿಂಗ್ ದರಗಳನ್ನು ವಸೂಲಿ ಮಾಡುತ್ತಿದ್ದು ದಿನನಿತ್ಯ ನಮ್ಮ ದುಡಿಮೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ.
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಗೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳ ಎಂಬಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದಲ್ಲಿ 20 ವರ್ಷದ ಯುವಕನಿಗೆ ಕ್ರಿಮಿನಲ್ ಬೆದರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (FTSC-2) ಅಪರಾಧಗಳ ಜೊತೆಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.