Showing 20 of 4215 posts • Page 209 of 211
ಮಂಗಳೂರು ರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಈ ಕೇಸ್ ಬಗ್ಗೆ ಇಂದು ನಗರದಲ್ಲಿ ಮಾಜಿ ಸಚಿವ ರಮನಾಥ್ ರೈ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರು ನಡು ರಸ್ತೆಯಲ್ಲೇ ನಮಾಜ್ ವಿಚಾರವಾಗಿ ಸರ್ಕಾರದ ವಿರುದ್ಧ ಮಂಗಳೂರು ಶಾಸಕ ಭರತ್ ಶೆಟ್ಟಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನಾಳೆ ರಸ್ತೆ ಮಧ್ಯೆ ಹನುಮಾನ್ ಚಾಲೀಸಾ ಪಠಣ ಮಾಡಿದ್ರೆ ಬಿಡ್ತೀರಾ ?.
ಗ್ಯಾಸ್ ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ನಡು ರಸ್ತೆ ನಮಾಜ್ ಪ್ರಕರಣ ಇದೀಗ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ವಿ.ಎಚ್.ಪಿ ಮುಖಂಡ ಶರಣ್ ಪಂಪ್ವೆಲ್ ಮೇಲೆ ಎಫ್.ಐ.ಆರ್ ದಾಖಲಾಗಿದ್ದು,
ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24 ರಂದು ನಡೆದಿದ್ದ ನಮಾಝ್ ಹಿನ್ನಲೆ ಸುಮೋಟೊ ಪ್ರಕರಣ ದಾಖಲಿಸಿದ್ದಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಗೆ ಕಡ್ಡಾಯ ರಜೆಯ ಶಿಕ್ಷೆ ವಿಧಿಸಿದ್ದು
ನೈರುತ್ಯ ಶಿಕ್ಷಕರ ಕ್ಷೇತ್ರಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅನೇಕ ಶಿಕ್ಷಕರು ಮತ ಹಾಕಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಲಾಗಿದೆ.
ಶಾಮ್ ಇನ್ಸ್ಟಿಟ್ಯೂಟ್ ಅನ್ನು ಶಾಮಲಾ ಶಿಕ್ಷಣ ಟ್ರಸ್ಟ್ ಸ್ಥಾಪಿಸಿದೆ. ಇದರ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಸಂದೇಶ್ ಅವರು ಎಲ್ಲಾ ವರ್ಗದ ಜನರಿಗೆ ವಿಶ್ವ ದರ್ಜೆಯ ಶಿಕ್ಷಣವನ್ನು ಒದಗಿಸುವ ದೃಷ್ಟಿಕೋನವನ್ನು ಹೊಂದಿದ್ದಾರೆ.
ನಿರ್ಮಾಣ ಹಂತದ ಕಿರುಸೇತುವೆಯೊಂದು ಕುಸಿದು ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಸಮೀಪದ ಎಂಜಿರ ಎಂಬಲ್ಲಿ ನಡೆದಿದೆ.
ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬದ ಕುವರಿ ಅಂತಿಮ ಹಣಾಹಣಿಯಲ್ಲಿ ಮೊದಲ ರನ್ನರ್-ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ದಟ್ಟಡವಿಯಲ್ಲಿ ನಾಪತ್ತೆಯಾದ ಎಂಭತ್ತೆರಡರ ಹರೆಯದ ಅಜ್ಜ, ಆರು ದಿನಗಳ ಬಳಿಕ ಕಾಡಿನಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ನಡೆದಿದೆ.
ಪೈಲ್ಸ್ ಚಿಕಿತ್ಸೆಗೆಂದು ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಪರಿಚಯಸ್ಥನೇ ಆಸ್ಪತ್ರೆಯಲ್ಲಿ ಅತ್ಯಾಚಾರ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಲವ್ ಜಿಹಾದ್ ಪ್ರಕರಣಗಳಿಂದ ಹಿಂದೂ ಯುವತಿಯರು, ಮಹಿಳೆಯರನ್ನು ರಕ್ಷಿಸಲು ಶ್ರೀರಾಮ ಸೇನೆ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ಇಂದಿನಿಂದಲೇ ಕಾರ್ಯಾಚರಣೆ ಆರಂಭಿಸಲಿದೆ.
ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ-2024ಗೆ ಆಯ್ಕೆಯಾಗಿದ್ದಾರೆ.
ಪುತ್ತೂರಿನ ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬೆಳಕಿಗೆ ಬಂದಿದೆ.
ಬಿಲ್ಡರ್ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ವಂಚಿಸಿ, ಬ್ಯಾಂಕ್ ಮ್ಯಾನೇಜರ್ ಸಹಿತ ಬ್ರೋಕರ್ , ಸಿವಿಲ್ ಗುತ್ತಿಗೆದಾರ ಹಾಗೂ ಅವರ ಸಹಚರನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಡುರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣ ಸಂಬಂಧ ಸೂಕ್ತ ಕ್ರಮ ಜರುಗಿಸುವಂತೆ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಇಂದು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳಿ ತಪ್ಪುತ್ತಿದೆ. ಅಲ್ಲಲ್ಲಿ ಕೊಲೆ, ಹಲ್ಲೆ, ಕಲ್ಲು ತೂರಾಟದಂತಹ ಪ್ರಕರಣಗಳು ನಡೆಯುತ್ತಿವೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಠಾಣೆ ಎಂಟ್ರಿ ಹಾಗು ಮನೆಯಲ್ಲಿ ನಡೆದ ಹೈಡ್ರಾಮ ಪ್ರಕರಣ ಬಗ್ಗೆ ಎಸ್ಪಿ ರಿಷ್ಯಂತ್ ಅವರು ಸ್ಪಷ್ಟನೆ ನೀಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕವಿತಾ ಟ್ರಸ್ಟ್ ವತಿಯಿಂದ ಇಲ್ಲಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಭಾನುವಾರ (ಮೇ 26) ’ಕವಿಸಂಧಿ’ ಎಂಬ ವಿನೂತನ ಸಾಹಿತ್ಯ ಕಾರ್ಯಕ್ರಮ ನಡೆಯಿತು.
ಕಾರೊಂದು ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಉಂಟಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸಂಭವಿಸಿದೆ.