Showing 20 of 4469 posts • Page 21 of 224
ನಗರದ ಹಂಪನಕಟ್ಟೆಯಲ್ಲಿ ಶೂ ಶಾಪ್ ವೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಇಂದು ಬೆಳ್ಳಗೆ ನಡೆದಿದೆ.
12 ವರ್ಷಗಳ ಹಿಂದೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೀನಕಳಿಯ ಗಣೇಶ್ ಶಿಪ್ಪಿಂಗ್ ಗೋಡೌನ್ ಬಳಿ ಸಾರ್ವಜನಿಕ ಡಾಂಬಾರು ರಸ್ತೆಯಲ್ಲಿ ಮೀನಕಳಿಯ ನಿವಾಸಿ ಗಂಗಾಧರ ಪಾಂಗಾಳ ಎಂಬವರನ್ನು ಪೂರ್ವ ದ್ವೇಷದಿಂದ ಕೊಲೆಗೈದ ಮೂವರು ಸೋದರರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ದಕ್ಷಿಣ ಕನ್ನಡದಲ್ಲಿ ನಡೆದ ಈಶ ಗ್ರಾಮೋತ್ಸವ 2026ರ ಕ್ಲಸ್ಟರ್ ಪಂದ್ಯಾವಳಿಯಲ್ಲಿ ಗ್ರಾಮೀಣ ಕರ್ನಾಟಕದ ಉತ್ಸಾಹಭರಿತ ಕ್ರೀಡಾ ಉತ್ಸವವು ದೀಪಿಕಾ ಹೈಸ್ಕೂಲ್ ಮೈದಾನ, ಬಂಟ್ವಾಳದಲ್ಲಿ ಅನಾವರಣಗೊಂಡಿತು.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಕೃತಕ ಬುದ್ಧಿಮತ್ತೆ ಶಿಕ್ಷಣ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಇಂಟೆಲ್® ಉನ್ನತಿ ಕೃತಕ ಬುದ್ಧಿಮತ್ತೆ (ಎಐ) ಪ್ರಯೋಗಾಲಯವನ್ನು ಉದ್ಘಾಟಿಸಿ, “ಇಂಟೆಲ್ ಉನ್ನತಿ ಎಐ ಉಪಕರಣಗಳು ಮತ್ತು ಫ್ರೇಮ್ವರ್ಕ್ಗಳ ಮೂಲಕ ಯಂತ್ರ ಕಲಿಕೆ ಹಾಗೂ ಆಳವಾದ ಕಲಿಕೆ” ವಿಷಯದ ಐದು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಕ್ಕೆ (ಎಫ್ಡಿಪಿ) ಚಾಲನೆ ನೀಡಿತು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಚೇರಿಯಲ್ಲಿ ಡಿ ಗ್ರೂಪ್ ಮಹಿಳಾ ಉದ್ಯೋಗಿಗೆ ಎಪಿಎಂಸಿ ಕಾರ್ಯದರ್ಶಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ನೇತೃತ್ವದ ಮಹಿಳಾ ತಂಡ ಕಚೇರಿಗೆ ದಿಢೀರ್ ಭೇಟಿ ನೀಡಿ ಕಾರ್ಯದರ್ಶಿ ಸಿ.ಎಚ್. ಮೋಹನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಸೆಂಟ್ರಲ್ ರೈಲು ನಿಲ್ದಾಣದ ಪ್ಲಾಟ್ ಫಾರಂ ೪ ರಲ್ಲಿ ಬಂದ ಮತ್ಸ್ಯಗಂಧ ರೈಲುಗಾಡಿ ಅಂಗವಿಕಲರ ಬೋಗಿಯಲ್ಲಿ ಸುಮಾರು ೪೫ ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬಾಗಲಕೋಟೆಯಲ್ಲಿ ₹5.5 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡ ಪ್ರಕರಣದ ತನಿಖೆ ವೇಳೆ ಮಂಗಳೂರು ಸಿಸಿಬಿ ಪೊಲೀಸರಿಗೆ ಬೇಕಾಗಿರುವ ನಾಲ್ಕನೇ ಆರೋಪಿ ಜಲೀಲ್ @ ಬಾಬಾ (42) ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕಾರ್ಯಕರ್ತರ ಅಭಿಪ್ರಾಯ ಪಡೆದು ನಡೆಯಬೇಕು ಎಂಬ ಆ ವೇಶದಿಂದ ಎಐಸಿಸಿ, ಕೆಪಿಸಿಸಿ ಮತ್ತು ರಾಜ್ಯದಿಂದ ವೀಕ್ಷಕರನ್ನು ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಸಮಾಜಸೇವೆ ಹೆಸರಲ್ಲಿ ಆಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ ಬೆಳಕಿಗೆ ಬಂದ ಬಳಿಕ ಬೆಳ್ತಂಗಡಿಯ ಜಲೀಲ್ ಬಾಬಾ ನಾಪತ್ತೆಯಾಗಿದ್ದಾನೆ.
1971ರ ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡಿದ್ದಲ್ಲದೆ, ನಾಲ್ಕು ದಶಕ ಭಾರತೀಯ ಸೇನೆಗೆ ಸೇವೆ ನೀಡಿದ್ದ ಟಿ-55 ಯುದ್ಧ ಟ್ಯಾಂಕ್ ಅನ್ನು ಮಂಗಳೂರು ನಗರದ ಕದ್ರಿಯ ಯುದ್ಧ ಸ್ಮಾರಕದ ಬಳಿ ಇರಿಸಲಾಗಿದ್ದು, ಇಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಯಿತು.
ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಮಂಗಳೂರು ನಗರದ ಲಾಲ್ ಭಾಗ್ ಬಳಿ ನಡೆದಿದೆ.
ಭಾರತ ದೇಶ ಧಾರ್ಮಿಕ ನಂಬಿಕೆಯ ಆಧಾರದ ಮೇಲೆ ನೆಲೆ ನಿಂತಿದೆ. ಅಯೋಧ್ಯೆ ಪವಿತ್ರ ರಾಮಜನ್ಮಭೂಮಿ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳಿಗೆ ವಿದೇಶಗಳಿಂದ ದುಡ್ಡು ಬರುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರಕಾರದ ವೈಫಲ್ಯದಿಂದಾಗಿ ಇಂದು ದೇಶದೆಲ್ಲೆಡೆ ವಿದ್ಯಾರ್ಥಿಗಳು ರಸ್ತೆಗಿಳಿಯುವ ಪರಿಸ್ಥಿತಿ ಬಂದಿದೆ.
ನೀಟ್ ಪರೀಕ್ಷೆ ಅಕ್ರಮ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸುಧಾರಣೆ ಆಗ್ರಹಿಸಿ ಮಂಗಳೂರಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ನಕಲಿ “ಡಿಜಿಟಲ್ ಬಂಧನ” ಬೆದರಿಕೆ ಹಾಕಿದ ಸೈಬರ್ ವಂಚಕರು 64 ವರ್ಷದ ವೃದ್ಧರೊಬ್ಬರಿಂದ 31 ಲಕ್ಷ ರೂ. ವಂಚಿಸಿದ್ದಾರೆ ಎಂದು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರನ್ನಿಟ್ಟು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಹಿತ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟವು ದೇಶದ ಉದ್ದಗಲಕ್ಕೂ ವ್ಯಾಪಿಸಿದೆ. ಈ ಹೋರಾಟವು 56 ಇಂಚಿನ ಪ್ರಧಾನಿಯ ಎದೆಯಲ್ಲೂ ನಡುಕ ಹುಟ್ಟಿಸಿದೆ ಎಂದು DYFI ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ರವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವು ಆಡಳಿತಾತ್ಮಕ ವರ್ಗಾವಣೆಯ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ಹೊಸ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಮೆರಿಕ ಸಂಯುಕ್ತ ಸಂಸ್ಥಾನ (USA) ಅಧ್ಯಕ್ಷರಾಗಿ ಖ್ಯಾತ ತಂತ್ರಜ್ಞ, ಸಮಾಜಸೇವಕ ಹಾಗೂ ತುಳು ಭಾಷೆ-ಸಂಸ್ಕೃತಿಯ ಅಭಿಮಾನಿ ಶ್ರೀ ಭಾಸ್ಕರ್ ಶೆರಿಗಾರ್ ಅವರನ್ನು ನೇಮಕ ಮಾಡಲಾಗಿದೆ.