Showing 8 of 4348 posts • Page 218 of 218
ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
‘ವಸಂತ ಬಂಗೇರ ಅವರು ಸದಾ ಬಡವರ ಪರ, ಸತ್ಯದ ಪರ ಇದ್ದರು. ಬಡವರ ಕೆಲಸ ಮಾಡಿಕೊಡಲು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಿಜೆಪಿಯವರು ಬಜೆಟ್ ಓದುವುದಿಲ್ಲ ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ. ಬಜಪೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ನಾವು ಏನೇನು ಕೆಲಸ ಕಾರ್ಯ ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ ಎಂದರು
ಆಟೋ ರಿಕ್ಷಾ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾ| ಪಾಣೆಮಂಗಳೂರಲ್ಲಿ ನಡೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಮಾರಂಭ 2024” ಜರಗಲಿದೆ ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.
ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಇಂದು (ಮೇ.21) ಬೆಳ್ಳಂಬೆಳಗ್ಗೆ ನಡೆದಿದೆ.
ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ.