Showing 20 of 4469 posts • Page 22 of 224
ಬಂಟ್ವಾಳ ತಾಲೂಕಿನ ಕಲ್ಲೆಟ್ಟಿಯಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು ದುರ್ಮರಣವನ್ನಪ್ಪಿದ ಕಂದಮ್ಮ ಚಿರನ್ವಿಯ ಮನೆಗೆ ಭೇಟಿ ನೀಡಿ ಪದ್ಮರಾಜ್ ಆರ್. ಪೂಜಾರಿ ಸಾಂತ್ವನ ಹೇಳಿದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಪ್ರಶ್ನಿಸುವ ಹಕ್ಕು ವಿಪಕ್ಷಕ್ಕಿದೆ. ವಿದ್ಯಾರ್ಥಿಗಳ ಬೇಡಿಕೆ ವಿಪಕ್ಷದ ಬೇಡಿಕೆಯೂ ಆಗಿದ್ದು, ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಹಾಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ನೀಟ್ ಅಕ್ರಮ ಪ್ರಶ್ನಿಸಿ ಧ್ವನಿಯೆತ್ತಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಡಳಿತ ಸೌಧದೆದುರು ಪ್ರತಿಭಟನೆ ನಡೆಯಿತು.
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ.
ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಶಂಕಿಸಲಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಅಪಘಾತಗಳಾದಾಗ ಗಾಯಾಳಿಗೆ ತುರ್ತು ಚಿಕಿತ್ಸೆಯನ್ನು ಒದಗಿಸುವ ನಿಟ್ಟಿನಲ್ಲಿ ದೇಶದೆಲ್ಲೆಡೆ ಜಾರಿಗೊಳಿಸಲಾಗಿರುವ “ಪಿಎಂ ರಾಹತ್’ ಯೋಜನೆಯನ್ನು ರಾಜ್ಯದಲ್ಲಿ ವ್ಯವಸ್ಥಿತವಾಗಿ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪೇಟೆಯ ರತನ್ ಗ್ಯಾರೇಜ್ ಸಮೀಪ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೇಣುಗೋಪಾಲ ಕಾಲೋನಿ ನಿವಾಸಿ, ನಿವೃತ್ತ ಶಿಕ್ಷಕ ಜಿ.ಕೆ. ಭಟ್ (ಗೋಪಾಲ ಕೃಷ್ಣ ಭಟ್) ಮೃತಪಟ್ಟಿದ್ದಾರೆ.
ನಿನ್ನೆ (ಜುಲೈ 22) ಕೌಟುಂಬಿಕ ಕಿರುಕುಳದಿಂದ ಸಾವನ್ನಪ್ಪಿದ್ದಾಳೆ ಎನ್ನಲಾದ ಸುಳ್ಯದ ಸಂಪಾಜೆಯ ಮಹಿಳೆಯ ಅಸಹಜ ಸಾವಿನ ಪ್ರಕರಣದಲ್ಲಿ ಸುಳ್ಯ ಪೊಲೀಸರು ಆಕೆಯ ಮಾವ, ಅತ್ತೆ ಮತ್ತು ನಾದಿನಿಯನ್ನು ಬಂಧನ ಮಾಡಿದ್ದಾರೆ.
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬ್ಯಾಟರಿ ಕಳವು ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
: ಬರಿಮಾರು ಸಮೀಪದ ಕಲ್ಲೆಟ್ಟಿ ಶ್ರೀ ಕನಲ್ತಾಯ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಯುಕೆಜಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಆರೋಗ್ಯ ಸಚಿವ ಯು.ಟಿ.ಖಾದರ್ ಸುದ್ದಿಗೋಷ್ಟಿ ನಡೆಸಿದರು.
ಮನೆಯ ಕಾಮಗಾರಿ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ 6.37 ಲಕ್ಷ ರೂ. ಮೌಲ್ಯದ 49 ಗ್ರಾಂ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ ಹಿನ್ನಲೆ ಕಾಂಗ್ರೆಸ್ ನಿಂದ ಮಂಗಳೂರು ಎಂಜಿ ರಸ್ತೆ ಲಾಲ್ಬಾಗ್ ಗಾಂಧಿ ಪ್ರತಿಮೆ ಎದುರು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ರವರ ಸೂಚನೆಯ ಮೇರೆಗೆ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು : ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐ(ಎಂ) ಮಾನವ ಸರಪಳಿ
ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜುಲೈ 21) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ) ರವಿಶೆಟ್ಟಿ (43) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಓಡಿಲ್ನಾಳ ನಿವಾಸಿ ಚೇತನ್. ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿ, ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಸ್ವಂತ ಅಣ್ಣನೇ ಮಲಗಿದ್ದ ಸೋದರನ ತಲೆಗೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದಿರುವ ಘಟನೆ ಸುರತ್ಕಲ್ನ ಚೊಕ್ಕಬೆಟ್ಟು ಮಠದ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಣ್ಣೂರಿನ ಚಿರಕ್ಕುಣಿಯಲ್ಲಿ ನಡೆದಿದೆ. ಇಸ್ಮಾಯಿಲ್ ಎಂಬುವವರಿಗೆ ಶ್ರೀಕುಮಾರ್ ಎಂಬಾತನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಭಾರೀ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆಯೇ ಮರವೊಂದು ಉರುಳಿಬಿದ್ದು ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಗರದ ಬಾವುಟಗುಡ್ಡೆ ಅಲೋಶಿಯಸ್ ಕಾಲೇಜು ಬಳಿಯ ಒಳ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.