Showing 20 of 4108 posts • Page 24 of 206
ಬಹುಬೇಡಿಕೆಯ ಬೆಂಗಳೂರು- ಮಂಗಳೂರು – ಮಡಗಾಂವ್ ವಂದೇ ಭಾರತ್ ರೈಲು ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ ಇದೆ.
ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಭಾನುವಾರ ರಾತ್ರಿ ವೇಳೆ ನಡೆದಿದೆ.
ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.
ವಾಮಂಜೂರು ನಿವಾಸಿ ನವೀನ್ ಎಂಬಾತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ನವೀನ್ಗೆ ಕುಟುಂಬ ಸಮಸ್ಯೆಗಳಿದ್ದು, ಪತ್ನಿಯಿಂದ ವಿಚ್ಛೇದನವಾಗಿದ್ದು, ಕಳೆದ ಕೆಲವು ತಿಂಗಳಿನಿಂದ ಆಕೆ ಜೋಕಟ್ಟೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಳೆ ಎಂದು ತಿಳಿದುಬಂದಿದೆ.
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.
ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ವಿಭಾಗಕ್ಕೆ ನೂತನ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ (PRO) ವಂದನೀಯ ರೂಪೇಶ್ ಅಶೋಕ್ ಮಾಡ್ತ ಅವರನ್ನು ನೇಮಕ ಮಾಡಲಾಗಿದೆ.
ಹೋಮಿಯೋಪತಿಯ ಸಂಸ್ಥಾಪಕ ಡಾ. ಸ್ಯಾಮ್ಯುಯೆಲ್ ಹಾನೆಮನ್ ಅವರ 271 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥವಾಗಿ, ವಿಶ್ವ ಹೋಮಿಯೋಪತಿ ದಿನ 2026 ಅನ್ನು 25.04.2026 ರಂದು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಚರಿಸಲಾಯಿತು.
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು ತನ್ನ ಮೊದಲ ಸೆಂಟ್ರಿಪ್ಯೂಗೇಶನ್ ಆಧಾರಿತ ಥೆರಪ್ಯೂಟಿಕ್ ಪ್ಲಾಸ್ಮಾ ಎಕ್ಸ್ಚೇಂಜ್ ಕ್ರಿಯೆಯನ್ನು ಯಶಸ್ವಿಯಾಗಿ ನೆರವೇರಿಸಿ ಮಹತ್ವದ ವೈದ್ಯಕೀಯ ಮೈಲಿಗಲ್ಲು ದಾಖಲಿಸಿದೆ.
ಮಂಗಳೂರಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (YIT) ತನ್ನ 18ನೇ ವಾರ್ಷಿಕೋತ್ಸವವನ್ನು ಸಾಂಸ್ಕೃತಿಕ ವೈಭವ ಮತ್ತು ಶೈಕ್ಷಣಿಕ ಹೆಮ್ಮೆಯೊಂದಿಗೆ ಅದ್ಧೂರಿಯಾಗಿ ಆಚರಿಸಿತು.
ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ವಂಚಿಸಿದ ಆರೋಪ ಎದುರಿಸುತ್ತಿರುವ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. “ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಆಕೆಯನ್ನು ಮದುವೆಯಾಗುವುದೇ ಸೂಕ್ತ” ಎಂದು ನ್ಯಾಯಾಲಯ ಹೇಳಿದೆ.
ತೊಕ್ಕೊಟ್ಟು ಫ್ಲೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ.
ಬಂದರು ಮಂಡಳಿ(NMPA) ಆಡಳಿತಕ್ಕೆ ಒಳಪಟ್ಟಿರುವ ಮತ್ತು ಕಳೆದ 40 ವರ್ಷಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ ಮಾಧ್ಯಮ ಶಾಲೆಯನ್ನು ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸುವ ಅಥವಾ ಮುಚ್ಚುವ ಪ್ರಯತ್ನಕ್ಕೆ ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರೋ ಸಾಧ್ಯತೆಯಿದೆ. IMD ಯಿಂದ ಎಲ್ಲೋಅಲರ್ಟ್ ನೀಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಲು ಕೋರಿದೆ.
ನಾರಿ ಶಕ್ತಿ ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಸೂಚಿಸಿ ಹಾಗೂ ಮಹಿಳೆಯರಿಗೆ ಮತ್ತೆ ಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಮಂಗಳೂರಿನ ಪುರಭವನದ ಎದುರುಗಡೆಯ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಕ್ಷೇತ್ರವು ಪವಿತ್ರ ಸ್ಥಳವಾಗಿ ಪ್ರಸಿದ್ಧಿಯಾಗಿದ್ದು, ಶ್ರೀ ದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ‘ತೂಟೆದಾರ’ ಅಗ್ನಿ ಕೇಳಿ ಸಾವಿರಾರು ಭಕ್ತರನ್ನು ಸೆಳೆಯಿತು.
ಮೂಡಬಿದ್ರೆಯ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (YIT), ತನ್ನ ಪ್ರತಿಷ್ಠಿತ ಕಾಲೇಜು ದಿನಾಚರಣೆ 2026 ಅನ್ನು ಏಪ್ರಿಲ್ 24, 2026 ರಂದು ಆಯೋಜಿಸಲು ಸಜ್ಜಾಗಿದೆ.
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆ, ರಾಷ್ಟ್ರೀಯ ಸೇವಾ ಯೋಜನೆ (NSS), , ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಮಂಗಳೂರು ವಿಶ್ವವಿದ್ಯಾಲಯದ ಕ್ರೈಸ್ತ ಅಧ್ಯಯನ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಪುದು ಇವರ ಸಂಯುಕ್ತ ಸಹಯೋಗದಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ ಕಾರ್ಯಕ್ರಮವನ್ನು 22 ಏಪ್ರಿಲ್ 2026 ರಂದು ಬೆಳಿಗ್ಗೆ 10:00 ಗಂಟೆಗೆ DKZP ಸರ್ಕಾರಿ ಪ್ರೌಢಶಾಲೆ, ಸುಜೀರ್, ಪುದು ಇಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.