Showing 20 of 4108 posts • Page 26 of 206
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ಸಂಭವಿಸಿದೆ. ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ ನಡೆದಿದೆ.
ನಗರದ ಪಡೀಲ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ತೀವ್ರ ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಪ್ರಮುಖ ಮಾಧ್ಯಮ ವೃತ್ತಿಪರ ಮತ್ತು ಪ್ರಾದೇಶಿಕ ಡಿಜಿಟಲ್ ಪತ್ರಿಕೋದ್ಯಮದ ಬೆಳವಣಿಗೆಯ ಹಿಂದಿನ ಪ್ರಮುಖ ವ್ಯಕ್ತಿ ಬ್ರಯನ್ ಫೆರ್ನಾಂಡಿಸ್ ಅವರು ಶನಿವಾರ ಸಂಜೆ 8:30 ರ ಸುಮಾರಿಗೆ ಮಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.
ಸ್ಥಳೀಯಾಡಳಿತ ಚುನಾವಣೆ ನಡೆಸುವ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು.
ದಾವಣಗೆರೆ ದಕ್ಷಿಣ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಭೀತಿ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗೆ ಸೋಲು ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ವಾಮಂಜೂರು ಬಳಿಯ ಕೇತಿಕಲ್ ನಲ್ಲಿ ಏಪ್ರಿಲ್ 17 ರಂದು ನಡೆದಿದೆ.
ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ – ಬಜರಂಗದಳ ಸಂಯೋಜಕರ ಸಮಾವೇಶ ಮಂಗಳೂರು ಸಂಘನಿಕೇತನದಲ್ಲಿ2 ದಿನಗಳ ಕಾಲ ನಡೆಯಲಿದ್ದು ಇದ್ರ ಉದ್ಘಾಟನೆ ಶನಿವಾರ ನಡೆಯಿತು.
ಕೆಎಸ್ಆರ್ಟಿಸಿಯಿಂದ ನಾಲ್ಕು ನಾನ್ ಎಸಿ ಸ್ಲೀಪರ್ ಬಸ್ ಮಂತ್ರಾಲಯದೆಡೆಗೆ ಸಂಚಾರ ಆರಂಬಿಸಿದ್ದು, ಈ ಬಸ್ ಕೇವಲ 12ಗಂಟೆಗಳಲ್ಲಿ ಮಂತ್ರಾಲಯ ತಲುಪಲಿದೆ. ಈ ಮೂಲಕ ಮಂತ್ರಾಲಯ ಮಂಗಳೂರಿಗರಿಗಿನ್ನು ಬಹಳ ಹತ್ತಿರವಾಗಲಿದೆ.
ಬಿಜೆಪಿ ಮುಖಂಡ, ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ನಿನ್ನೆ ನಿಧನರಾದರು. ಅವರು ಪತ್ನಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗು ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.
ಪಜೀರು ಗ್ರಾಮದ ಅಡ್ಕ ಎಂಬಲ್ಲಿಯ ತನ್ನ ಮನೆಯಿಂದ ಗೆಳೆಯರೊಂದಿಗೆ ಜಾತ್ರೆಗೆಂದು ತೆರಳಿದ್ದ ಬಾಲಕಿಯೊರ್ವಳು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
“ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಭಾಷಣ ಮಾಡುವ ಕಾಂಗ್ರೆಸ್ ನಾಯಕರು, ಮೊದಲು ತಾವೇ ಅದನ್ನು ಪಾಲಿಸುತ್ತಿದ್ದಾರೆಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ.” ಹೀಗೆಂದು ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಗುಡುಗಿದರು.
ವಿಶ್ವ ಕಲಾ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ಮಣಿಪಾಲದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ & ಗ್ಯಾಲರಿಯ ವಿದ್ಯಾರ್ಥಿನಿಯರು ಅತ್ಯಂತ ವಿಭಿನ್ನವಾಗಿ ಸಂಭ್ರಮಿಸಿದ್ದಾರೆ.
ಜ್ಯೋತಿ ಸರ್ಕಲ್ನಲ್ಲಿ ಅಂಬೇಡ್ಕರ್ ಸರ್ಕಲ್ ನಿರ್ಮಿಸಲು ಯೋಗ್ಯತೆ ಇಲ್ಲಾ ಕಾಂಗ್ರೆಸ್ನವರಿಗೆ, ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರಿಗೆ ಗೌರಾರ್ಪಣೆ ಪುಷ್ಪಾರ್ಪಣೆ ಮಾಡಿ ಫೋಟೋ ತೆಗಿತಾರೆ. ಜ್ಯೋತಿ ಸರ್ಕಲ್ನಲ್ಲಿ ಅಂಬೇಡ್ಕರ್ ಸರ್ಕಲ್ ತೆಗೆದಿರುವುದು ಕಾಂಗ್ರೆಸ್ನವರು ಎಂದು ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಕರಾವಳಿ ಪ್ರದೇಶದ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಮಹತ್ವದ ಮೈಲುಗಲ್ಲಾಗಿ, ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದಯ ಶಸ್ತ್ರಚಿಕಿತ್ಸಾ ತಂಡವು ಯಶಸ್ವಿಯಾಗಿ ಸಣ್ಣ ರಂಧ್ರದ ಹೃದಯ ಶಸ್ತ್ರಚಿಕಿತ್ಸೆ ಮೂಲಕ ಮೈಟ್ರಲ್ ಕವಾಟದ ದುರಸ್ತಿ ನಡೆಸಿದೆ.
ಕೇಬಲ್ ವಾಹಿನಿಯೊಂದರಲ್ಲಿ ಪ್ರಸಾರವಾದ ‘ಬುರುಡೆ ಗ್ಯಾಂಗ್’ ಹಾಸ್ಯ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ತಮಗೆ ಮತ್ತು ತಮ್ಮ ಕುಟುಂಬಸ್ಥರಿಗೆ ದೂರವಾಣಿ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಖ್ಯಾತ ಕಲಾವಿದ ಸುಂದರ ರೈ ಮಂದಾರ ಮತ್ತು ತಂಡದವರು ಆರೋಪಿಸಿದ್ದಾರೆ.
ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಲಾಗಿದೆ.