Showing 20 of 4469 posts • Page 28 of 224
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಿಶೇಷವಾಗಿ S.C.S ಆಸ್ಪತ್ರೆಯ ಸಿಬ್ಬಂದಿಗಳಿಗೆ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರಿಂದ ಯೋಗ ತರಬೇತಿಯನ್ನು ನೀಡಲಾಯಿತು.
ಬಸ್ಸು ಚಲಿಸುತ್ತಿದ್ದಾಗಲೇ ಚಾಲಕನಿಗೆ ಬಿಪಿ ಲೋ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಡಿವೈಡರ್ ಏರಿ ನಿಂತಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಮುಂಭಾಗ ನಡೆದಿದೆ.
ಮಾಂಡ್ ಸೊಭಾಣ್ ಮತ್ತು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಆಯೋಜಿಸಿದ ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಶಕ್ತಿನಗರ ಕಲಾಂಗಣದಲ್ಲಿ ಜೂನ್ 26 ರಂದು 4.30 ಗಂಟೆಗೆ ನಡೆಯಲಿದೆ.
ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಂಗಸಂಸ್ಥೆಯಾದ ‘ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್’ (NABH), ಆಸ್ಪತ್ರೆಗಳಿಗಾಗಿ ನಿಗದಿಪಡಿಸಿರುವ 6ನೇ ಆವೃತ್ತಿಯ ಎನ್ಎಬಿಎಚ್ ಮಾನ್ಯತಾ ಮಾನದಂಡಗಳ ಅಡಿಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆ, ಅತ್ತಾವರಕ್ಕೆ ಅಧಿಕೃತ ಮಾನ್ಯತೆ ನೀಡಿದೆ.
ಮಂಗಳೂರಿನ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಗೌರವಾನ್ವಿತ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದ ಸುದ್ದಿ ತಿಳಿದು ಕರ್ನಾಟಕ ರಾಜ್ಯ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಲಿಸುತ್ತಿದ್ದ ಮಾರುತಿ ಸಿಯಾಜ್ ಕಾರಿಗೆ ಬೆಂಕಿ ಕಾಣಿಸಿಕೊಂಡು ವಾಹನ ಭಾಗಶಃ ಸುಟ್ಟ ಘಟನೆ ಸೋಮವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ನಡೆದಿದೆ.
ಐಎ ಎಸ್, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ “ಮಾರ್ಗದರ್ಶಿ – Cracking the UPSC Examination” ಎಂಬ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮವನ್ನು 2026ರ ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಸ್ ಐ ಆರ್ ಜನಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಪ್ರಸಾದ್ ಭಾಷಣ ಮಾಡಿ, ಎಸ್ ಐ ಆರ್ ಮೂಲಕ ಬಿಜೆಪಿ ಮತ್ತು ಆರ್ ಎಸ್ ಎಸ್ ನೈಜ ಮತದಾರರನ್ನು ಕೈ ಬಿಡಲು ಪ್ರಯತ್ನಿಸುತ್ತಿದೆ. ಪ್ರತೀ ವರ್ಷ ಜನವರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಾಗುತ್ತಿತ್ತು.
ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯರು ಅಪರೂಪದ ‘ಥೊರಾಸೊಸ್ಕೋಪಿಕ್ ಶ್ವಾಸಕೋಶದ ಹರ್ನಿಯಾ’ (lung herniation) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ.
ದ.ಕ. ಜಿಲ್ಲಾ ಖಾಝಿ ಅಲ್ಲಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇಂದಿನ ವಿದ್ಯಮಾನಗಳಲ್ಲಿ ರಾಜಕಾರಣದಲ್ಲಿ ದೇವರ ಹೆಸರನ್ನು ತರುವುದು, ಆಣೆ ಪ್ರಮಾಣ ಮಾಡುವುದು ಅಷ್ಟೊಂದು ಸಮಂಜಸವಲ್ಲ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಆರ್ಎಸ್ಎಸ್ ನೋಂದಣಿ ಬಗ್ಗೆ ಮಾತನಾಡುವ ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಶಕ್ತಿಯಿದ್ದರೆ ವಿಧಾನಸಭೆಯ ಒಳಗಡೆಯೇ ಆರ್ಎಸ್ಎಸ್ ಪ್ರಾರ್ಥನೆ ಹಾಡಿರುವ ಈಗಿನ ಸಿಎಂ ಬಗ್ಗೆ ಪ್ರಶ್ನೆ ಮಾಡಲಿ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸವಾಲೆಸೆದರು.
ವಾಹನವೊಂದು ಟೋಲ್ ಗೇಟ್ ಹೊಡೆದುಕೊಂಡು ಹೋಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಬಳಿ ಇರೋ NHAI ನಡೆದಿದೆ.
ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್ (ರಿ), ಕ. ರಾ. ರ. ಸಾ. ನಿಗಮ, ಮಂಗಳೂರು ವಿಭಾಗದ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಗಿದೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಉಬರ್ ತನ್ನ ಸೇವೆಯನ್ನು ಮತ್ತಷ್ಟು ಬಲಪಡಿಸಿದ್ದು, ಪ್ರಯಾಣಿಕರಿಗೆ ಸುಲಭ ಹಾಗೂ ವೇಗವಾದ ಸಾರಿಗೆ ಅನುಭವವನ್ನು ಒದಗಿಸುತ್ತಿದೆ.
ಮನೆಯ ಸಮೀಪದ ಕೆರೆಯ ಬಳಿ ಆಟವಾಡುತ್ತಿದ್ದ ಅವಳಿ ಮಕ್ಕಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದು, 2 ವರ್ಷದ ಮಗು ಅನಾಥವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಸಮೀಪದ ಕಜೆಯಲ್ಲಿ ನಡೆದಿದೆ.
ಕರಾವಳಿ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ನೂತನ ಮುಖ್ಯಮಂತ್ರಿ ಡಿಕೆಶಿಯವರು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಕರೆಯುವುದಾಗಿ ಹೇಳಿದ್ದು, ಈ ಮೂಲಕ ಕರಾವಳಿ ಪ್ರವಾಸೋದ್ಯಮ ಹೊಸ ರೂಪು ಪಡೆಯುವ ನಿರೀಕ್ಷೆ ಇದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.