Showing 20 of 4469 posts • Page 29 of 224
ಮಂಗಳೂರು: ಇದು ಪೊಲೀಸ್ ಚೌಕಿಯೋ ಅಥವಾ ಚಾ ಕುಡಿಯುವ ಸ್ಟಾಂಡ್ ಎಂಬ ಗೊಂದಲ ಉಂಟಾಗಿದೆ. ಮಂಗಳೂರು ಸ್ಟೇಟ್ ಬ್ಯಾಂಕ್ ಸರ್ಕಲ್ ಬಳಿ ಈ ದೃಶ್ಯ ಕಂಡು ಬಂದಿದೆ. ಹೋಟೆಲ್ ಮಾಲಕರೇ ಚಾ ಕುಡಿಯಲು ನಿಮ್ಮಲ್ಲಿ ಸ್ಥಳ ಇಲ್ಲವೇ, ಟ್ರಾಫಿಕ್ ಪೊಲೀಸ್ ಚೌಕಿ ಚಾ ಕುಡಿಯುವ ತಾಣವಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರು ಇಲ್ಲಿ ಗಮನ ಹರಿಸಬೇಕಾಗಿದೆ. View this post on Instagram A post shared by News Karnataka (@newskarnataka)
ಸ್ವಾತಂತ್ರ್ಯ ನಂತರ ದೇಶದಲ್ಲಿ ಮುಸಲ್ಮಾನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಾ ಬಂದಿದೆ, ಆದರೆ ಮುಸಲ್ಮಾನರಿಗೆ ಸೂಕ್ತ ಸ್ಥಾನ ನೀಡದೆ ತುಳಿಯುತ್ತಾ ಬರಲಾಗಿದ್ದು ಬಾಬರಿ ಮಸೀದಿ ಧ್ವಂಸ ಬಳಿಕ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ ಎಂದು ಹನೀಫ್ ಖಾನ್ ಕೊಡಾಜೆ ಹೇಳಿದರು.
ನಗರದ ಪಡೀಲ್ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಕಳೆದ 12ವರ್ಷಗಳಿಂದ ಬೀದಿಬದಿಯಲ್ಲಿ ಹೂವಿನ ವ್ಯಾಪಾರ ನಡೆಸುತಿದ್ದ ವಿಕಾಲಾಂಗ ಬೀದಿ ವ್ಯಾಪಾರಿಗಳಾದ ಚಂದ್ರಹಾಸ್ ಮತ್ತು ಸುನೀತಾ ಎಂಬವರ ಹೂವಿನ ಸ್ಟಾಲನ್ನು ನಗರಪಾಲಿಕೆಯ ವಲಯ 2ರ ಆಯುಕ್ತೆ ರೇಖಾ ಶೆಟ್ಟಿ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳು ನಿಯಮಬಾಹಿರ ಕಾರ್ಯಾಚರಣೆ ನಡೆಸಿ ಅವರ ಸೊತ್ತುಗಳನ್ನು ಬುಲ್ದೊಜರ್ ಬಳಸಿಕೊಂಡು ಧ್ವಂಸಗೊಳಿಸಿ ನಾಶಪಡಿಸಿರುವ ಪಾಲಿಕೆಯ ಅಮಾನವೀಯ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಎರಡು ಖಾಸಗಿ ಬಸ್ ಗಳ ಚಾಲಕರು ಹಾಗೂ ನಿರ್ವಾಹಕರ ಮಧ್ಯೆ ಒವರ್ ಟೇಕ್ ವಿಚಾರಕ್ಕೆ ಮನಸ್ತಾಪ ಉಂಟಾಗಿ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಬಸ್ ಅನ್ನು ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿ ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯು 2009 ರಿಂದ ಮಾನಸಿಕ ಅಸ್ವಸ್ಥರ ರಕ್ಷಣೆ, ಶೂಶ್ರುಷೆ, ಔಷೋದೊಪಚಾರ ಆರೋಗ್ಯ, ಪುನರ್ವಸತಿ ಒದಗಿಸುವ ನಿರಂತರ ಸೇವೆ ನೀಡುತ್ತಾ 17 ವರುಷಗಳಲ್ಲಿ 1750ಕ್ಕೂ ಮಿಗಿಲಾಗಿ ರಕ್ಷಿಸಲ್ಪಟ್ಟ ನಿವಾಸಿಗಳನ್ನು ಗುಣಪಡಿಸಿ ಅವರಿಗೆ ತಮ್ಮ ಕುಟುಂಬಗಳಲ್ಲಿ ಪುನರ್ಮಿಲನಗೊಳಿಸಿ, ಪುನರ್ವಸತಿ ಕಲ್ಪಿಸಿ, ಜನಮೆಚ್ಚುಗೆ ಪಡೆದ ಮಂಗಳೂರು- ಕಾಸರಕೋಡು ಜಿಲ್ಲೆಗಳ ಪರಿಸರದಲ್ಲಿ ಜನಪ್ರಿಯ ಸಂಸ್ಥೆಯಾಗಿದೆ.
ಸುರತ್ಕಲ್ ಗುಡ್ಡೆಕೊಪ್ಲ ಕಡಲತೀರದಲ್ಲಿ ಕಳೆದ ಕೆಲವು ವರ್ಷಗಳಿಂದ ನಿಂತಿದ್ದ “ಭಗವತಿ ಪ್ರೇಮ್’ ಎಂಬ ಬೃಹತ್ ಗಾತ್ರದ ಡ್ರೆಡ್ಡರ್ ಹಡಗನ್ನು ಒಡೆಯುವ ಕಾರ್ಯ ಪ್ರಗತಿಯಲ್ಲಿದ್ದು, ಈ ಭಾಗದಲ್ಲಿ ಜನರ ಗಮನ ಸೆಳೆಯುತ್ತಿದ್ದ ಸೆಲ್ಸಿ ಪಾಯಿಂಟ್ ಮಾಯವಾಗುತ್ತಿದೆ.
ಅಂಪಾರು ಗ್ರಾಮದ ಗುಡಿಬೆಟ್ಟು ಎಂಬಲ್ಲಿ ಜೂ.18ರಂದು ಕೋಳಿ ಅಂಕಕ್ಕೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ನಂಬಿಸಿ 3.51 ಲಕ್ಷ ರೂ. ಖಾತೆಗೆ ಹಾಕಿಸಿ ಕೊಂಡು ಬಳಿಕ ಕೆಲಸ ನೀಡದೆ ವಂಚಿಸಿರುವ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಪಯಣದ ಮತ್ತೊಂದು ಮಹತ್ವದ ಮೈಲಿಗಲ್ಲಾಗಿ ಅಮೆರಿಕದಿಂದ ತರಿಸಲಾದ 14 ಆಸನಗಳ ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನವನ್ನು ಎಂಆರ್ಜಿ ಕುಟುಂಬಕ್ಕೆ ಸೇರ್ಪಡೆಗೊಳಿಸಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ ’ಯೋಗ ವಿದ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.
ಶೈಕ್ಷಣಿಕ ವರ್ಷ ಆರಂಭವಾಗಿ 18 ದಿನಗಳು ಕಳೆದಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ 20 ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ವಿದ್ಯಾರ್ಥಿಯೂ ದಾಖಲಾತಿಯಾಗದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ.
ಸಂಗಮ ತಾಣವೆಂದು ಪ್ರಸಿದ್ದಿ ಪಡೆದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹರಿಯುತ್ತಿರುವ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿತ ಕಂಡಿದ್ದು, ಮರಳು ಕಾಣುತ್ತಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಸಾಮಾನ್ಯವಾಗಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗುತ್ತದಾದರೂ, ಈ ಬಾರಿ ಜಾಗತಿಕ ಪರಿಸ್ಥಿತಿ ಹಾಗೂ ಉತ್ಪಾದನಾ ವೆಚ್ಚ ಏರಿಕೆಯೂ ದರ ಹೆಚ್ಚಳಕ್ಕೆ ಕಾರಣವಾಗಿದೆ.
ಕಂದುಕ ಫ್ರೆಂಡ್ಸ್ ಸರ್ಕಲ್ ಮಂಗಳೂರು ಇವರು ಹಿಂದೂ ಮುಖಂಡ ಶರಣ್ ಪಂಪವೆಲ್ಲ್ ಹುಟ್ಟುಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಿರಶಲ್ಯ ಕಂದುಕ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ,ಕೊಡೆ ,ಬ್ಯಾಗ್ ವಿತರಿಸಲಾಯಿತ್ತು.
ಕರ್ನಾಟಕದ ಕರಾವಳಿ ಪ್ರದೇಶ ಮತ್ತು ರಾಜ್ಯ ರಾಜಧಾನಿ ಬೆಂಗಳೂರು ನಡುವಿನ ಹೈಸ್ಪೀಡ್ ರೈಲು ಸಂಪರ್ಕದ ಕನಸನ್ನು ನನಸಾಗಿಸುವತ್ತ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ.
ಜೂನ್ 21 ರಿಂದ ಪ್ರಾರಂಭವಾಗಿ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷ ಆರ್ಥಿಕ ವಲಯ ನಿಯಮಿತ (MSEZL) ಕರ್ನಾಟಕ ರಾಜ್ಯ ಮಾಲಿನ್ಯನಿಯಂತ್ರಣ ಮಂಡಳಿ, ಮಂಗಳೂರು, ಅರಣ್ಯ ಇಲಾಖೆ, ಮಂಗಳೂರು ವಲಯ ಇವರ ಸಂಯುಕ್ತ ಅಶ್ರಯದಲ್ಲಿ ವಿಶ್ವ ಪರಿಸರ ದಿನ ಪ್ರಯುಕ್ತ ಸಾಮೂಹಿಕ ಗಿಡ ನಾಟಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 10.06.2026 ರಂದು MSEZ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಮಗ್ರ ಆರೋಗ್ಯದ ಬಗ್ಗೆ ಸ್ಥಳೀಯ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ 17 ಜೂನ್ 2026ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ಉಳ್ಳಾಲ ಆಯುಷ್ ಘಟಕದಲ್ಲಿ ಯೆನೆಪೋಯ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಸ್ಪತ್ರೆ, ನರಿಂಗಾಣ ಹಾಗೂ ಆಯುಷ್ ಘಟಕ, ಉಳ್ಳಾಲ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಯಿತು.
ಟಿಪ್ಪರ್ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಅಪಘಾತ ಸಂಭವಿಸಿದೆ.
ಎರಡು ಕಾರುಗಳು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.