Showing 20 of 4101 posts • Page 30 of 206
ಒಂದೆಡೆ ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆ, ಇನ್ನೊಂದೆಡೆ ಅಡುಗೆ ಅನಿಲದ ಕೊರತೆಯಿಂದಾಗಿ ಕರಾವಳಿಯಲ್ಲಿ ಮೀನುಗಾರಿಕೆ ಅರ್ಧಕ್ಕರ್ಧ ನಿಂತು ಹೋಗಿದೆ.
ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಟೋ ಎಲ್ಪಿಜಿ (ಗ್ಯಾಸ್) ಸಮಸ್ಯೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಸರಕಾರ ಈ ಬಗ್ಗೆ ಗಮನ ಹರಿಸಿ ಕ್ರಮ ವಹಿಸಬೇಕೆಂದು ಸೋಶಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್ (ಎಸ್ಬಿಟಿಯು) ಸರಕಾರವನ್ನು ಒತ್ತಾಯಿಸಿದೆ.
ಮದುವೆಯಾದ ಒಂದೇ ತಿಂಗಳಿಗೆ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಸಾವನ್ನಪ್ಪಿದ ಪ್ರಕರಣದಲ್ಲಿ ಈತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಮೃತನ ಪೋಷಕರು ಗಂಭೀರ ಆರೋಪ ಮಾಡುತ್ತಿರುವ ಬೆನ್ನಲ್ಲೇ ತಾನೂ ಕೂಡ ಅದೇ ಯುವತಿಯಿಂದಾಗಿ ಮೋಸ ಹೋಗಿದ್ದಾಗಿ ಯುವಕನೋರ್ವ ಮುಂದೆ ಬಂದಿದ್ದಾನೆ.
ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಮಟಪಾಡಿ ಬ್ರಹ್ಮಾವರ ಇವರ ವತಿಯಿಂದ ಮಟಪಾಡಿ ಪ್ರೀಮಿಯರ್ ಲೀಗ್ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಜರುಗಿತು.
ಕಲಾಕೃತಿ ಗಳಿಂದ ಅಲಂಕೃತವಾದ ಏರ್ ಇಂಡಿಯಾ ಎಕ್ಸ್ಪ್ರೆಸ್ ಬೋಯಿಂಗ್ ವಿಮಾನ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡು ಮೂಲದ ಅಂತರ್ ರಾಜ್ಯ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ.
2026 ರ ಜನಗಣತಿ ಪ್ರಕ್ರಿಯೆಯಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸುವಂತೆ, ನಿಖರ ಮತ್ತು ಸಮಗ್ರ ದತ್ತಾಂಶ ಸಂಗ್ರಹಣೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾಹಿತಿ ನೀಡಿದ್ದಾರೆ.
: ‘ನಮ್ಮ ಮಗನ ಸಾವಿಗೆ ಆತನ ಪತ್ನಿ ನೀಡಿರುವ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಆಹಾರದಲ್ಲಿ ವಿಷ ನೀಡಿರುವುದು ಕಾರಣವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದು ಇತ್ತೀಚೆಗೆ ಸಾವಿಗೀಡಾಗಿರುವ ಸುದೀಪ್ ರೈ ಅವರ ಪೋಷಕರು ಆಗ್ರಹಿಸಿದ್ದಾರೆ.
ಜಿಎಸ್ಬಿ ಸಮಾಜ ಹಿತ ರಕ್ಷಣಾ ವೇದಿಕೆ ಸಮಾಜದ ಹಿರಿಯರಿಗಾಗಿ ನಿರ್ಮಿಸುತ್ತಿರುವ ವಯೋವಂದನ ಆತಿಥ್ಯ ಗೃಹ ಮಕ್ಕಳಿಲ್ಲದ ಹಿರಿಯರಿಗೆ ಜೀವನದ ಸಂಧ್ಯಾಕಾಲದಲ್ಲಿ ಆಸರೆಯಾಗಿ ಚೈತನ್ಯದಾಯಿಯಾಗಲಿದೆ.
ಇರಾನ್-ಇಸ್ರೇಲ್- ಅಮೆರಿಕಾದ ನಡುವಿನ ಯುದ್ಧದ ಹೊಡೆತ ಮಂಗಳೂರಿನ ರಿಕ್ಷಾ ಚಾಲಕರಿಗೂ ತಟ್ಟಿದೆ. ಮಂಗಳೂರು ನಗರದ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ಅಟೋ ಎಲ್ಪಿಜಿ ಖಾಲಿಯಾಗಿರುವುದರಿಂದ ಆಟೋ ರಿಕ್ಷಾ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಪ್ರಮುಖ ಬಂಕ್ಗಳಲ್ಲಿ ಇಂಧನ ಲಭ್ಯವಿಲ್ಲದ ಕಾರಣ, ಅನಿಲ ಇರುವ ಬೆರಳೆಣಿಕೆಯ ಬಂಕ್ಗಳ ಮುಂದೆ ಆಟೋಗಳ ಸುದೀರ್ಘ ಸಾಲು ಕಂಡುಬರುತ್ತಿದೆ.
ಉರ್ವಾ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿದ್ದ, ಸುಹಾನ್ @ ಸೋನು (33) ತಂದೆ: ದಿ ಸೋಮಯ್ಯ ವಾಸ: ಬಿರಾ ಪೂಜಾರಿ ಕಂಪೌಂಡ್, ಅಶೋಕ ನಗರ ಮಂಗಳೂರು ಈತನು ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದು, ಆತನ ವಿರುದ್ದ ಉರ್ವಾ ಪೊಲೀಸ್ ಠಾಣಾ ಪ್ರಕರಣದಲ್ಲಿ ಘನ ನ್ಯಾಯಾಲವವು LPC ವಾರಂಟ್ ಹೊರಡಿಸಿರುತ್ತದೆ.
ಚಲಿಸುತ್ತಿದ್ದ KSRTC ಬಸ್ನಿಂದ ಇಬ್ಬರು ವಿದ್ಯಾರ್ಥಿನಿಯರು ಕೆಳಗೆ ಎಸೆಯಲ್ಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳು ನೀಡುತ್ತಿರುವ ಸೇವೆಗಳ ಮಹತ್ವದ ವಿಸ್ತರಣೆಯಾಗಿ, ಹೊಸ ವಾಣಿಜ್ಯ ಗುರುತಾದ “ಫಾದರ್ ಮುಲ್ಲರ್ ಕಾಂಪ್ಲೆಕ್ಸ್” ಇಂದು ದೇರಳಕಟ್ಟೆಯಲ್ಲಿ ಭವ್ಯವಾಗಿ ಉದ್ಘಾಟಿಸಲಾಯಿತು.
12ನೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆಗೈದ ಘಟನೆ ನಗರದ ಅತ್ತಾವರ ಕಾಸ ಗ್ರ್ಯಾಂಡ್ ದಲ್ಲಿ ನಡೆದಿದೆ.
ಅಸೈಗೋಳಿ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಕಾರು ಅಪಘಾತ ಸಂಭವಿಸಿದೆ.
ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಹಜ್ ಭವನಕ್ಕೆ ಜಾಗವಿದೆ, ಅನುದಾನವೂ ಇದೆ; ಆದರೂ ವಿಳಂಬ ಯಾಕೆ? ಮಂಗಳೂರಿನಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಜ್ ಭವನವನ್ನು ಕೂಡಲೇ ನಿರ್ಮಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಕಲ್ಪಿಸಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಒತ್ತಾಯಿಸಿದ್ದಾರೆ.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರಗಳಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 2025 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ ಈ ಕೆಳಗಿನ ಮಹನೀಯರನ್ನು ಆಯ್ಕೆ ಮಾಡಲಾಗಿದೆ.
ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ.