Showing 20 of 4469 posts • Page 31 of 224
ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಮತ್ತು ವಿಳಂಬ ನೀತಿಗಳಿಂದ ಮಹಿಳೆಯರು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ,
ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರವಿವಾರ 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದರು.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಎಂಎಸ್ಇಜೆಡ್ (MSEZ) ತೋಡಿನಲ್ಲಿ ಜೂನ್ 10ರಂದು ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಕೇವಲ 72 ಗಂಟೆಗಳಲ್ಲಿ ಭೇದಿಸಿದ್ದಾರೆ.
ನಗರ ಹೊರವಲಯದ ಗುರುಪುರ ಸಮೀಪದ ಬಂಡಸಾಲೆ ಎನ್ನುವಲ್ಲಿ V2 Guys ಗುರುಪುರ ಯುವ ಬಳಗವೂ ಹೊಸ ರೀತಿಯಲ್ಲಿ ನಿರ್ಮಿಸಿದ ಬಸ್ ತಂಗುದಾಣ ಜನ ಮನ ಸೆಳೆಯುತ್ತಿದೆ.
ತಾಲೂಕಿನ ಗಡಾಯಿಕಲ್ಲು ಚಾರಣಕ್ಕೆ ಜೂ. 14 ರಿಂದ ಪ್ರವೇಶ ನಿರ್ಬಂಧಿಸಲಾಗಿದೆ.
ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ) ಇದರ 7ನೇ ವರ್ಷದ ಶಾಲಾ ಮಕ್ಕಳ ಉಚಿತ ಪುಸ್ತಕ ವಿತರಣಾ ಸಮಾರಂಭ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಕುಳಾಯಿ ಶನಿವಾರ ನಡೆಯಿತು.
ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಮಂಗಳೂರು-3ನೇ ಘಟಕದಿಂದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ (ಪಡೀಲ್)ನಿಂದ ಕಟೀಲು/ಬೊಕ್ಕಪಟ್ಣ/ ಸ್ಟೇಟ್ಬ್ಯಾಂಕ್/ಕೋಡಿಕಲ್ ಮಾರ್ಗವಾಗಿ ನಗರ ಸಾರಿಗೆಯನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಪ್ರಕಾಶ್ ರಾಜ್ ನನ್ನೊಂದಿಗೆ ಮಾತನಾಡಿದ್ದರು; ಹೇಳಿದಂತೆ ಕೇಳಿದರೆ ನಿನ್ನನ್ನು ಬಂದು ತಬ್ಬಿಕೊಳ್ಳುತ್ತೇನೆ ಎಂದಿದ್ದರು ಎಂದು ಹೈಕೋರ್ಟ್ ಮುಂದೆ ಸಿ ಎನ್ ಚಿನ್ನಯ್ಯ ಎಳೆಎಳೆಯಾಗಿ ಬಿಚ್ಚಿಟ್ಟರು.
ನಗರದ ಆಶ್ರಯ ಆಂಗನ್ ಚಾರಿಟೇಬಲ್ ಟ್ರಸ್ಟ್ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವೈವಿದ್ಯಮ್ 2026 ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಿದೆ.
ಪುತ್ತೂರಿನ ಕೃಷ್ಣ ಜೆ. ರಾವ್ ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಸಂಧಾನಕ್ಕೆ ಆರೋಪಿ ಪರ ವಕೀಲರು ಹೈಕೋಟ್ನಲ್ಲಿ ಪ್ರಸ್ತಾಪಿಸಿದ್ದು, ಜೂನ್ 19ರಂದು ರಾಜಿ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯಗೊಳ್ಳುವ ವಿಶ್ವಾಸವಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ತಿಳಿಸಿದರು.
ವಿಶ್ವವಿದ್ಯಾಲಯಯದಲ್ಲಿ ವಿದ್ಯಾರ್ಥಿಗಳ ಮೂಲಭೂತ ಸಮಸ್ಯೆಗಳನ್ನ ಬಗೆಹರಿಸಲು ಆಗ್ರಹಿಸಿ ಮತ್ತು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಕೋಣಾಜೆ ಆಡಳಿತ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಮಂಗಳೂರಿಗೆ ತಮಿಳುನಾಡು ಸಿ ಎಂ ವಿಜಯ್ ಆಗಮಿಸಿದರು.
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 26 ವರ್ಷಗಳ ಹಿಂದೆ ಮನೆಬಿಟ್ಟು ಹೋಗಿದ್ದ ವ್ಯಕ್ತಿಯೊಬ್ಬ ಪವಾಡವೆಂಬಂತೆ ಮನೆಗೆ ವಾಪಸ್ ಬಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರದಲ್ಲಿ ನಡೆದಿದೆ.
ಸಂಡೆ ಬಜಾರ್ ಬೀದಿಬದಿ ವ್ಯಾಪಾರವನ್ನು ತೆರವುಗೊಳಿಸುವ ಹುನ್ನಾರವನ್ನು ಖಂಡಿಸಿ, ಪರ್ಯಾಯ ವ್ಯವಸ್ಥೆ ಆಗುವವರೆಗೆ ಪುರಭವನದ ಬಳಿಯೇ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ಮುಂದುವರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.