Showing 20 of 4469 posts • Page 33 of 224
ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿಯಿಂದ ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ರಸ್ತೆಯು ಮಳೆಗೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ ಎದುರಾಗಿದೆ.
ಮೆಲ್ಕಾರ್ ಪ್ರೈಓವರ್ ಸಮೀಪ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮದ್ದಡ್ಕ-ವರಕದೆ ಸಮೀಪ ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಸಮೀಪದ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ.
ನಗರದ ಹೃದಯಭಾಗದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಹೆಸರಿನಲ್ಲಿ ಅಕ್ರಮ ಹಣ ವಸೂಲಿ ನಡೆಯುತ್ತಿದ್ದು, ರಾತ್ರಿ ವೇಳೆ ನಿಯಮ ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಹೋಟೆಲ್ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಆಗ್ರಹಿಸಿದ್ದಾರೆ.
ಸಚಿವ ರಾಮಲಿಂಗ ರೆಡ್ಡಿ ರಾಜೀನಾಮೆ ವಿಚಾರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿ ಹೇಳಿಕೆ ನೀಡಿದರು.
ನಗರದಲ್ಲಿ ಹೋಟೆಲ್ಗಳು ರಾತ್ರಿ 11.30 ಗಂಟೆಯವರೆಗೆ ಹಾಗೂ ಪ್ರವಾಸೋದ್ಯಮ ಪರವಾನಗಿ ಹೊಂದಿರುವ ಸಂಸ್ಥೆಗಳು ಮಧ್ಯರಾತ್ರಿ 12 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ಇದ್ದರೂ, ಹಲವು ಹೋಟೆಲ್ಗಳು ರಾತ್ರಿ 3 ಗಂಟೆಯವರೆಗೆ ವ್ಯಾಪಾರ ನಡೆಸುತ್ತಿವೆ ಎಂದು ಪ್ರಸನ್ನ ರವಿ ಆರೋಪಿಸಿದರು.
ಖತರ್ ದೇಶದಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ಹೃದಯಾಘತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದಂತ್ಯ ಬೆಳಗಿನಿಂದ ಭಾರೀ ಮಳೆಯಾಗಿದ್ದು, ಕುಳೂರು ಬಸ್ ನಿಲ್ದಾಣದಲ್ಲಿ ಜಲಮಯವಾಗಿದೆ.
ಮಳೆಗಾಲ ಬಂತೆಂದರೆ ಮಂಗಳೂರು ನಗರದ ಜನರನ್ನು ಹೆಚ್ಚು ಕಾಡುವ ಸಮಸ್ಯೆಗಳಲ್ಲಿ ಕೃತಕ ಪ್ರವಾಹವೂ ಒಂದು. ಅದರಲ್ಲೂ ಪಂಪ್ವೆಲ್ ಜಂಕ್ಷನ್ ಮತ್ತು ಪಡೀಲ್ ರೈಲ್ವೆ ಅಂಡರ್ಪಾಸ್ ಪ್ರದೇಶಗಳು ಪ್ರತಿವರ್ಷ ಮಳೆ ನೀರಿನಿಂದ ಜಲಾವೃತಗೊಂಡು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತವೆ. ಈ ಬಾರಿ ಮುಂಗಾರು ಆರಂಭಕ್ಕೂ ಮುನ್ನವೇ ಈ ಎರಡು ಪ್ರದೇಶಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ.
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ ದರ್ಶನ್ ರವರು ತಿಳಿಸಿದ್ದಾರೆ.
ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.
ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವ್ಯಾಪಾರ ವಲಯಗಳನ್ನು (Vending Zones) ಗುರುತಿಸಲು ವಿಫಲವಾಗಿರುವ ಪಾಲಿಕೆಯ ಕ್ರಮವನ್ನು ಖಂಡಿಸಿ, ಆಮ್ ಆದ್ಮ ಪಾರ್ಟಿ (AAP) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಯಕ್ಷಗಾನದ ಪಾರಂಪರಿಕ ಚಿಕ್ಕಮೇಳಗಳ ಸಂಪ್ರದಾಯವನ್ನು ಸಂರಕ್ಷಿಸುವ ಹಾಗೂ ಶಿಸ್ತುಬದ್ಧವಾಗಿ ನಡೆಸುವ ಉದ್ದೇಶದಿಂದ ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ (ರಿ.), ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಮಿತಿ ನೂತನ ನಿಯಮಾವಳಿಗಳನ್ನು ಪ್ರಕಟಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಮುಂದಿನ ಆರು ತಿಂಗಳಲ್ಲಿ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸೇರಿದಂತೆ ಎರಡೂ ಸದನಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆ ಜಾರಿಯಾಗಲಿದೆ ಎಂದು ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೊಬೈಲ್ ಚಟ ಬಿಡುವಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ 16 ವರ್ಷದ ಬಾಲಕ ಮನೆಯನ್ನೇ ಬಿಟ್ಟು ನಿಗೂಢ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ.
ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಯಲ್ಲಿರುವ ಪಿ.ಎಂ ಸ್ವನಿಧಿ ಸಾಲ ಯೋಜನೆಯನ್ನು ಜಾರಿಗೊಳಿಸಬೇಕಾದ ರಾಷ್ಟ್ರೀಕೃತ ಬ್ಯಾಂಕುಗಳು ಬೀದಿಬದಿ ವ್ಯಾಪಾರಿಗಳಿಗೆ ಸಮರ್ಪಕವಾಗಿ ಸಾಲ ಮಂಜೂರು ಮಾಡದೆ, ಅನಗತ್ಯ ದಾಖಲೆಗಳನ್ನು ಕೇಳಿ ಸಾಲ ನಿರಾಕರಣೆ ಮಾಡುತ್ತಿದೆ. ಕೆಲವು ಬ್ಯಾಂಕುಗಳು ಸಿಬಿಲ್ ಸ್ಕೋರ್ ನೋಡಿ ಸಾಲ ನೀಡದೆ ವಂಚಿಸುತ್ತಿದೆ.
ನೂತನ ಸಂಪುಟ ಪುನರ್ ರಚನೆಗೆ ಭಾರಿ ಪೈಪೋಟಿ ಹಿನ್ನೆಲೆ ಯು ಟಿ ಖಾದರ್ ಗೆ ಡಿಸಿಎಂ ಸ್ಥಾನದ ಚರ್ಚೆ ನಡಯುತ್ತಿದ್ದು, ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.