Showing 20 of 4108 posts • Page 34 of 206
ಬುಧವಾರ ಮುಂಜಾನೆ 4:30ರ ಸುಮಾರಿಗೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಳಿ ಅಕ್ರಮ ಗೋ ಸಾಗಾಟವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಇಲ್ಲಿನ ‘ಗೀತಾ’ ಎಂಬ ಹೆಸರಿನ ಭಾರತೀಯ ತೋಳ (Indian Wolf) ಒಂದೇ ಬಾರಿಗೆ ಏಳು ಮರಿಗಳಿಗೆ ಜನ್ಮ ನೀಡುವ ಮೂಲಕ ಗಮನ ಸೆಳೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ.
ದ.ಕ. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕರಿಗೆ ಆಗುತ್ತಿರುವ ಸಮಸ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ, ಟೂರಿಸ್ಟ್, ಭಾರೀ ವಾಹನ ಚಾಲಕರ ಸಂಘ (ಎಐಸಿಸಿಟಿಯು) ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ರಿಕ್ಷಾ ಚಾಲಕರು ಪ್ರತಿಭಟನೆ ನಡೆಯಿತು.
“ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು 16 ಜಾತಿಗಳವರು ಮಾಡಬೇಕು ಆದರೆ ಮಂಗಳೂರಿನ ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ ಬಂಟ ದೈವಕ್ಕೆ ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ಯುವಕನಿಂದ ನರ್ತನ ಸೇವೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ತಿರುವನಂತಪುಂ ನಾರ್ತ್-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್ಪ್ರೆಸ್ ರೈಲಿನ ಸೇವೆಯನ್ನು ಖಾಯಂಗೊಳಿಸಲಾಗಿದೆ.
ಮನು ಬಹ್ರೇನ್ ಎಂಬ ಕಾವ್ಯನಾಮದಿಂದ ಪೂಜಿಸಲ್ಪಡುತ್ತಿದ್ದ, ಹಿರಿಯ ಕೊಂಕಣಿ ಬರಹಗಾರ ಸ್ಟ್ಯಾನಿ ವಿಲಿಯಂ ಲೋಬೊ (78) ನಿಧನರಾದರು.
ಭೂ ವ್ಯವಹಾರದ ವ್ಯಾಜ್ಯದ ಕೋಪದಿಂದ ಕಾರಿನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊ ತೆದು ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಮಂಗಳವಾರ (ಮಾ.17) ನಡೆದಿದೆ.
ದೈವ ಪಾತ್ರಿ ಸುಶಾಂತ್ ಬಂಗೇರ ಅವರ ಧರ್ಮದ ಕುರಿತು ಸಂಶೋಧಕಿ ರತಿ ಮಾಡಿರುವ ಆರೋಪಕ್ಕೆ ಈಗ ಸುಶಾಂತ್ ಅವರ ತಾಯಿ ಸವಿತಾ ಅವರು ಖಡಕ್ ಉತ್ತರ ನೀಡಿದ್ದಾರೆ.
ಕರಾವಳಿಯ ದೈವಾರಾಧನಾ ಪರಂಪರೆಯಲ್ಲಿ ಜಾತೀಯತೆ ಮತ್ತು ಧರ್ಮದ ಕುರಿತಾದ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ದೈವ ಪಾತ್ರಿ ಸುಶಾಂತ್ ಬಂಗೇರ ಅವರು ಕ್ರೈಸ್ತ ಸಮುದಾಯಕ್ಕೆ ಸೇರಿದವರು ಮತ್ತು ಅವರಿಂದ ದೈವ ನರ್ತನ ಸೇವೆ ನಡೆಸಿರುವುದು ದೈವಾರಾಧನಾ ಪರಂಪರೆಗೆ ಮಾಡಿದ ಘೋರ ಅಪಚಾರ ಎಂದು ಸಂಶೋಧಕಿ ರತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.
ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿವಿಯ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹ್ಯೂಮ್ಯನಿಟಿಸ್, ಸ್ಕೂಲ್ ಆಫ್ ಇಂಜಿನಿಯರಿಂಗ್, ಸ್ಕೂಲ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಹಾಗೂ ಕೇರಳದ ಕುತ್ತಿಕ್ಕಾಣಂನ ಮಾರ್ ಬಸೆಲಿಯೊಸ್ ಕ್ರಿಶ್ಚಿಯನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಸಹಯೋಗದಲ್ಲಿ “ವಲಯಾಕಾರದ ಆರ್ಥಿಕತೆ: ನವೀನತೆ, ನೀತಿ ಮತ್ತು ಕಾರ್ಯಯೋಜಿತ ಬಹುಪ್ರಾಂತ್ಯ ದೃಷ್ಟಿಕೋನಗಳು” ಎಂಬ ವಿಷಯದ ಮೇಲೆ ಎರಡು ದಿನಗಳ ಅಂತರ್ ವಿಭಾಗೀಯ ಅಂತರರಾಷ್ಟ್ರೀಯ ಸಮ್ಮೇಳನ (IDIC 2026) ಎಲ್ಸಿಆರ್ಐ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಇನ್ಸ್ಟಿಟ್ಯೂಟ್ ಫಾರ್ […]
ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಿದ ಎಸಿಪಿ ವರದಿ ಸಲ್ಲಿಸಿದ್ದಾರೆ. ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸೋಮವಾರ ಸಂಭವಿಸಿದೆ.
ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್ಆರ್ಟಿಸಿ ಬಸ್ಸೊಂದು ಗೂಡ್ಸ್ ಮಿನಿ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ವಿಚಾರದಲ್ಲಿ ಆರೋಪ ಮಾಡಿದ್ದ ಸುಮತಿ ನಾಯ್ಕ ವಿರುದ್ಧವೇ ಆರೋಪ ಕೇಳಿಬಂದಿದೆ. ಸುಮತಿ ನಾಯ್ಕ ನಮ್ಮ ಕುಟುಂಬದ ಮಾನ ಮರ್ಯಾದೆ ತೆಗಿದಿದ್ದಾಳೆ.
ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ.
ಇಸ್ರೇಲ್ ಇರಾನ್ ಯುದ್ಧದಿಂದಾಗಿ ಮಂಗಳೂರು ಮತ್ತು ಗಲ್ಫ್ ಬಹುತೇಕ ರಾಷ್ಟ್ರ ಗಳೊಂದಿಗೆ ವಿಮಾನ ಸಂಚಾರ ರದ್ದುಗೊಂಡಿದ್ದರೂ ಮಂಗಳೂರು ಮತ್ತು ಮಸ್ಕತ್ ನಡುವಿನ ವಿಮಾನ ಯಾನ ಮುಂದುವರಿದಿದೆ.
ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ.
ಶ್ರೀಕ್ಷೇತ್ರ ಪೊಳಲಿಯ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್ (78) ನಿಧನರಾಗಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಸುಮಾರು 50 ವರ್ಷಕ್ಕೂ ಮೇಲ್ಪಟ್ಟು ಅರ್ಚಕ ಸೇವೆ ಮಾಡಿದ್ದಾರೆ.