Showing 20 of 4111 posts • Page 36 of 206
ಶಾಸ್ತ್ರೀಯ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ರೋಮಾಂಚಕ ಆಚರಣೆಯಲ್ಲಿ, ಶ್ರೀ ನಾರಾಯಣಿ ಸಂಗೀತ ಕಲಾ ಕೇಂದ್ರ (ಎಬಿಜಿಎಂವಿ ಮುಂಬೈಗೆ ಸಂಯೋಜಿತ) ಸಹಯೋಗದೊಂದಿಗೆ, ಮಂಗಳೂರಿನ ದಿ ಗೌಡ್ ಸಾರಸ್ವತ ಬ್ರಾಹ್ಮಣ ಸೇವಾ ಸಂಘವು ಅಸಾಧಾರಣ ಯುವ ಕಲಾವಿದರ ಸಭೆಯಾದ ವಸಂತ ಸಂಗೀತೋತ್ಸವವನ್ನು ಆಯೋಜಿಸಲು ಹೆಮ್ಮೆಪಡುತ್ತದೆ.
ವಿಶ್ವ ಕಿಡ್ನಿ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ಮಂಗಳೂರು , ಶೀಘ್ರ ರೋಗ ಪತ್ತೆ, ಚಿಕಿತ್ಸೆ ಮತ್ತು ಕಿಡ್ನಿ ಸಮಸ್ಯೆಯ ದೀರ್ಘ ಕಾಲದ ನಿರ್ವಹಣೆಯನ್ನು ಗುರಿಯಾಗಿಸಿ ತನ್ನ ಸಮಗ್ರ ಮೂತ್ರಪಿಂಡ (ಕಿಡ್ನಿ) ಆರೈಕೆಯ ಸೇವೆಯನ್ನು ಒತ್ತಿ ಹೇಳಿದೆ. ಮೂತ್ರಪಿಂಡದ ಆರೋಗ್ಯ ಮತ್ತು ರೋಗ ತಡೆಗಟ್ಟುವ ಆರೈಕೆಯ ಕುರಿತು ಜಾಗೃತಿ ಹೆಚ್ಚುಸುವ ಈ ನೇತೃತ್ವವನ್ನು ಆಸ್ಪತ್ರೆಯ ನೆಫ್ರೊಲಾಜಿ ವಿಭಾಗವು ಕೈಗೊಂಡಿದೆ.
ಗೂಡ್ಸ್ ಟೆಂಪೋವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ.
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹಾಗೂ ಆರ್ದ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಭಾರತದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಪ್ರದೇಶದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.
ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ 8 ಸೆಲನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ವೃತ್ತ ಪರೀಕ್ಷರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದು ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.
ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತದೇಹ ಪತ್ತೆಯಾಗಿದೆ.
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮುಲ್ಕಿಯ ಮನೆಯೊಂದರಲ್ಲಿ ಬಾವಿಗೆ ಕಸ ಬೀಳದಂತೆ ಬಲೆ ಹಾಕಿದ್ದು ಅದರಲ್ಲಿ ಹೆಬ್ಬಾವು ಒಂದು ಸಿಕಿಕೊಂಡಿದ್ದು, ಬಿಡಿಸಲು ಹರಸಾಹಸ ಪಡುತಿತ್ತು. ಇದನ್ನ ಗಮನಿಸಿದ ಅಲ್ಲೇ ಕೆಲಸದಲ್ಲಿ ನಿರತರಾಗಿದ್ದ ಮೆಸ್ಕಾಂ ಸಿಬ್ಬಂದಿ ಮಂಜುನಾಥ್ ಡಿ ಮತ್ತು ಅವರ ಜೊತೆಯಲ್ಲಿ ಇದ್ದವರು ಹೆಬ್ಬಾವನ್ನ ರಕ್ಷಿಸಲು ಮುಂದಾದರು.
ಕಾವೂರು ಉಲ್ಲಾಸ ನಗರದ ಮನೆಯೊಂದರಿಂದ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವೇಗವಾಗಿ ಬಂದ ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಮರು ಪ್ರಾರಂಭಿಸಬಹುದು ಮತ್ತು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬಹುದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಸರ್ಕಾರದ ನಿರ್ಧಾರಕ್ಕೆ NSUI ವಿದ್ಯಾರ್ಥಿ ಸಂಘಟನೆಯಿಂದ ಮಂಗಳೂರು ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜು ಕ್ಯಾಂಪಸ್ ನಲ್ಲಿ ಸಂಭ್ರಮಾಚರಿಸಿದರು.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ ಸೋಮವಾರವೂ ಹಲವು ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ರದ್ದುಪಡಿಸಿತ್ತು. ಇದರಿಂದ ದುಬೈ ಜೆದ್ದಾ ಮತ್ತು ದಮಾಮ್ಗೆ ಪ್ರಯಾಣಿಸುವ ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗಿದೆ.
ನಕಲಿ ದಾಖಲೆಗಳ ಜೊತೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಅನ್ನು ಚಲಾಯಿಸುತ್ತಿದ್ದ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಉದ್ಯೋಗ ಆಕಾಂಕ್ಷಿಗಳನ್ನು ವಂಚಿಸಿದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ಇಬ್ಬರು ವ್ಯಕ್ತಿಗಳ ವಿರುದ್ಧ FIR ದಾಖಲಿಸಿದ್ದಾರೆ.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಅನಿಶ್ಚಿತತೆಯ ವಾತಾವರಣ ಮುಂದುವರೆದಿರುವ ಹಿನ್ನೆಲೆಯಲ್ಲಿ ಮಂಗಳೂರು – ಜಿದ್ದಾ, ಮಂಗಳೂರು- ದುಬೈ ವಿಮಾನಗಳ ಮಾ.9ರ ಯಾನ ರದ್ದಾಗಿದೆ.
ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ಸಂಭವಿಸಿದೆ.
ಕ್ರೈಸ್ತ ವಂಶಾವಳಿ ತಿಳಿಯಲು ಚರ್ಚ್ ದಾಖಲೆ ನೋಡಿದರೆ ಸಾಕು ಆದರೆ ಅದೊಂದು ಕುತೂಹಲ ತಣಿಸುವ ಕೆಲಸ ಬಿಟ್ಟರೆ ಬೇರೆ ಹೆಚ್ಚಿನ ಉಪಯೋಗ ಕಾಣಿಸುವುದಿಲ್ಲ, ಎಂದು ವಂಶಾವಳಿಗಳು ಹುಡುಕಿ ಹತ್ತುಸಾವಿರ ಪುಟಗಳ ಪುಸ್ತಕ ಬರೆದು ಪ್ರಕಟ ಮಾಡಿದ ಮತ್ತು ಅದಕ್ಕಾಗಿ ವಿದೇಶಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪಡೆದ ವಂಶಾವಳಿ ತಜ್ಞ ಡಾ ಮೈಕಲ್ ಲೋಬೊ ಹೇಳಿದರು.