Showing 20 of 4117 posts • Page 42 of 206
ನಗರದ ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ನಡೆದಿದೆ.
ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ದಿನಾಂಕ 19.02.2026ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು.
ಭಾರತದ ಕಾರ್ಬನ್ ನ್ಯೂಟ್ರಲ್ ಭವಿಷ್ಯದ ನಗರಗಳ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯಾಗಿ MIR ನೆಟ್ ಝೀರೋ ಶೃಂಗಸಭೆ ಉದ್ಘಾಟನೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ರೋಬೋಟಿಕ್ ಟೆಲಿಸರ್ಜರಿಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸುಧಾರಿತ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ.
ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ ಎಮ್ ಡಿಎಂಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಫೆ.18 ರಂದು ತಡೆದು ಪರಿಶೀಲಿಸಿ ಆರೋಪಿಗಳಾದ ಮುಹಮ್ಮದ್ ಅಜ್ಮಲ್ ಸಿ @ ಅಜ್ಜು (30) ಕೋಝಿಕೋಡ್, ಕೇರಳ, ಇಸ್ಮಾಯಿಲ್ (28) ವಯನಾಡ್ ಜಿಲ್ಲೆ, ಕೇರಳ , ಸಂಶೀರ್ (27)ಕೊಝಿಕೋಡ್, ಕೇರಳ. ಎಂಬವರುಗಳು ವಾಹನದಲ್ಲಿ ಮಾರಾಕಾಯುಧವಾದ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವುದು ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 29,397 ಮಂದಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 37,337 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಪ್ರೌಢ ಮತ್ತು ಪ.ಪೂ. ಶಿಕ್ಷಣ ಇಲಾಖೆಗಳು ಸಿದ್ಧತೆ ನಡೆಸಿವೆ.
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದ್ದು ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ತೀವ್ರ ಹಾನಿಯಾಗಿದೆ.
ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಕೈಗೆ ಸಿಕ್ಕ ಪ್ಲಾಸ್ಟಿಕ್ ಚೆಂಡಿನಂಥ ವಸ್ತು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟೆಂಟ್ ಒಂದರಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಗಳೂರಿನ ಖ್ಯಾತ ಉದ್ಯಮಿ ಹಾಗೂ ಶ್ರೀನಿವಾಸ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ.ಎ. ಎ. ರಾಘವೇಂದ್ರ ರಾವ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುಡುವ ಬಿಸಿಲಿನ ನಡುವೆ ಅಲ್ಲಲ್ಲಿ ಭಾರಿ ಮಳೆಯಾಗಿರುವ ಘಟನೆ ಫೆ.18ರ ಮಧ್ಯಾಹ್ನ ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ನಡೆದಿದೆ.
ಪಂಪ್ ವೆಲ್ ನಿಂದ ಹಳೆಯ ಪೋಸ್ಟ್ ಆಫೀಸ್ ವರೆಗಿನ ರಸ್ತೆ ಅಗಲೀಕರಣದ ಕುರಿತಂತೆ ಶಾಸಕ ವೇದವ್ಯಾಸ ಕಾಮತ್ ರವರು ಕಂಕನಾಡಿಯ ಫಾದರ್ ಮುಲ್ಲರ್ ಆಡಳಿತ ಮಂಡಳಿಯ ಪ್ರಮುಖರೊಂದಿಗೆ ನಡೆಸಿದ ಸಭೆಯು ಫಲಪ್ರದವಾಯಿತು.
ನಗರದ ಮಧ್ಯೆ ಇರುವ ಸರಕಾರಿ ಮಹಿಳಾ ಪದವಿ ಕಾಲೇಜಿಗೆ ಆಸ್ಪತ್ರೆ ಕಾಮಗಾರಿ ಹಿನ್ನೆಲೆ ತರಗತಿಗಳಲ್ಲಿ ಧೂಳು ತುಂಬಿಕೊಂಡಿದ್ದು, ಈ ಹಿನ್ನೆಲೆ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಿಸುವಂತಾಗಿದೆ.
ಆರೆಸ್ಸೆಸ್, ಬಿಜೆಪಿ ದ.ಕ. ಜಿಲ್ಲೆಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಕೀಳು ಹೇಳಿಕೆ ನೀಡಿರುವುದು ಖಂಡನೀಯ. ಆರೆಸ್ಸೆಸ್, ಬಿಜೆಪಿ ಬಗ್ಗೆ ಮಾತನಾಡಲು ಕಾಂಗ್ರೆಸ್ನವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಅಸ್ತಿತ್ವ (ರಿ.) ಮಂಗಳೂರು ತನ್ನ ದಶಮಾನೋತ್ಸವ ಸಂದರ್ಭದಲ್ಲಿ, ರಂಗ ಅಧ್ಯಯನ ಕೇಂದ್ರ, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ಇದರ ಸಹಯೋಗದಲ್ಲಿ ಎರಡು ದಿನಗಳ ಕಾಲ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಮುಳ್ಳೂರು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದ ಕಾಮಗಾರಿಯಿಂದ ಸರ್ವಿಸ್ ರಸ್ತೆಯಲ್ಲಿ ಬಿರುಕು ಕಾಣಿಸಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆ ಕುಸಿತ ಭೀತಿ ಹಿನ್ನೆಲೆಯಲ್ಲಿ ಫೆ.12ರಿಂದ ಮಾ.13ರವರೆಗೆ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮಂಗಳೂರು : ಚಿಕ್ಕಮಗಳೂರಿನಲ್ಲಿ ಹಿಂದೂ ಮನೆ ಮೇಲೆ ಕಲ್ಲು ತೂರಾಟ ಘಟನೆ ವಿಚಾರವಾಗಿ ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿಕ್ಕಮಗಳೂರು ಘಟನೆ ಸಂಬಂಧ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನು ಪ್ರಕಾರ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತಾರೆ. ಹೆಣ್ಣು ಮಗಳು ದಲಿತ ಸಮುದಾಯಕ್ಕೆ ಸೇರಿದವರು ಅಂತಾ ಗೊತ್ತಾಗಿದೆ. ಆ ಪ್ರಕಾರ ಪೊಲೀಸರು ಪಿಸಿಆರ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸುತ್ತಾರೆ ಎಂದರು. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಪ್ರತಿಕ್ರಿಯೆ ಅವರು ಯಾಕೆ ಹೋಗ್ತಿದ್ದಾರೆ […]
ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಮತ್ತು ಎಸಿಎನ್ಎ ರಾಜ್ಯ ಪ್ರಧಾನ ಕಾರ್ಯದರ್ಶಿ, ಉಜಿರೆ ನಿವಾಸಿ ತನುಷ್ ಶೆಟ್ಟಿ ನಡುವಿನ ‘ರೋಡ್ ರೇಜ್ ವಿವಾದ ಹೊಸ ತಿರುವು ಪಡೆದಿದೆ. ಒಂದೂವರೆ ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿರುವುದು ಸಂತನ ತಂದಿದ್ದು, ಇದು ನಿಜಕ್ಕೂ ನ್ಯಾಯಕ್ಕೆ ಸಿಕ್ಕ ಜಯ ಎಂದು ತನುಷ್ ಶೆಟ್ಟಿ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಬಕೆಟ್ ಹಿಡಿಯುವ ಮೂಲಕ ಒಳ್ಳೆಯ ಸ್ಥಾನಮಾನ ಪಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಇಂಥ ಕೀಳು ಹೇಳಿಕೆ ನೀಡುತ್ತಿದ್ದಾರೆ. ಆರೆಸ್ಸೆಸ್, ಬಿಜೆಪಿ ಕುರಿತಾದ ತಮ್ಮ ಬೇಜವಾಬ್ದಾರಿ ಹೇಳಿಕೆ ಬಗ್ಗೆ ಕೂಡಲೆ ಅವರು ಕ್ಷಮೆ ಕೇಳಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಆಗ್ರಹಿಸಿದ್ದಾರೆ.
ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದ್ದು, ಬಾಲಕ ಆತ್ಮಹತ್ಯೆಗೆ ಮುನ್ನ ತಂದೆಗೆ ಶೂಟ್ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ.