Showing 20 of 4460 posts • Page 43 of 223
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ನಾರಿಶಕ್ತಿ ವಂದನ್ ಅಧಿನಿಯಮ’ವು ಕೇವಲ ರಾಜಕೀಯ ಮೀಸಲಾತಿಯಲ್ಲ, ದೇಶದ ಮಾತೃಶಕ್ತಿಗೆ ಸಲ್ಲಿಸಿದ ಗೌರವವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಮಹಿಳಾ ಮೀಸಲಾತಿ ಮಸೂದೆ ಸಿಂಗಲ್ ಆಗಿ ಜಾರಿಗೆ ತನ್ನಿ, ನಿಮಗೇನ್ರಿ ತೊಂದ್ರೆ? ಬಿಜೆಪಿಗೆ ನಿಜವಾಗಿಯೂ ಮಹಿಳೆಯರ ಮೇಲೆ ಕಾಳಜಿ ಇದ್ದರೆ, ಕ್ಷೇತ್ರ ವಿಂಗಡಣೆಯ ನೆಪ ಬಿಟ್ಟು ತಕ್ಷಣವೇ ‘ಸಿಂಗಲ್ ಬಿಲ್ ಮೂಲಕ ಮೀಸಲಾತಿಯನ್ನು ಜಾರಿಗೆ ತರಲಿ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಸವಾಲು ಹಾಕಿದ್ದಾರೆ.
ಶಾಸಕ ವಿನಯ ಕುಲಕರ್ಣಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರೂ, ಅಧಿಕೃತ ಸೂಚನೆ ಬಂದ ಬಳಿ ಅವರ ವಿಧಾನಸಭಾ ಅಧಿಕಾರದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ನಾಲೆಯ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ಶನಿವಾರ ನಡೆದಿದೆ. ಅಂಬ್ಲಮೊಗರು ಜರಿ ಹೌಸ್ ನಿವಾಸಿ, ರಿಕ್ಷಾ ಚಾಲಕ ಶಿವರಾಮ್ ಅವರ ಪುತ್ರ ಸೃಜನ್ (17) ಮೃತಪಟ್ಟ ದುರ್ದೈವಿ.
ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಬಿಜೆಪಿಗರು, ಈ ದೇಶಕ್ಕೆ ಮೊದಲ ಮಹಿಳಾ ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿಯನ್ನು ನೀಡಿದ ಪಕ್ಷ ಯಾವುದು ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ನಾರಿ ಶಕ್ತಿ ವಂದನ ಅಧಿನಿಯಮ ಮಸೂದೆಯು ವಿಫಲಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗರು ರಾಜ್ಯದಾದ್ಯಂತ ಜಾಗೃತಿ ಮೂಡಿಸುತ್ತೇವೆ ಎಂದು ಹೇಳುತ್ತಾರೆ. 2011ರ ಜನಗಣತಿಯನ್ನೇ ಆಧರಿಸಿ ಮೀಸಲಾತಿಯನ್ನು ತರುವುದಾದರೆ 2023 ರವರೆಗೆ ಕಾಯುವಂತ ಅವಶ್ಯಕತೆ ಏನಿತ್ತು? ಎಂದು ಕೆಪಿಸಿಸಿ ವಕ್ತಾರೆ ಯು.ಟಿ.ಫರ್ಝಾನ ಪ್ರಶ್ನಿಸಿದ್ದಾರೆ.
ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22, 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕೇರಳಂ ರಾಜ್ಯದ ಕಾಸರಗೋಡು ಜಿಲ್ಲೆ ನಗರ ಮೂಲದ 46 ವಯಸ್ಸಿನ ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತು ಹೃದ್ರೋಗ ಸಂಬಂಧಿ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳಾ ಹೃದ್ರೋಗಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪರಿಣಿತ ವೈದ್ಯರ ತಂಡವು ವಿನೂತನ ಶೈಲಿಯ ಅಪಾಯಕಾರಿ, ಜೀವರಕ್ಷಕಾ ಹೃದ್ರೋಗ ಚಿಕಿತ್ಸೆಯನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸಿ, ಯಶಸ್ವಿಯಾಗಿ ನಿರ್ವಹಿಸಿ, ರೋಗಿಗೆ ಜೀವದಾನ ನೀಡಿ ಆರೋಗ್ಯ ಕ್ಷೇತ್ರದಲ್ಲಿ ಒಂದು ಸಾಧನೆ ಮಾಡಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ.
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೆಪ್ಪಿನಮೊಗರು ಬಳಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ರವಿವಾರ ಬಂಧಿಸಿದ್ದಾರೆ. ಬಂಧಿತರಿಂದ ₹46,50,000 ಮೌಲ್ಯದ 465.8 ಗ್ರಾಂ MDMA ವಶಪಡಿಸಿಕೊಳ್ಳಲಾಗಿದೆ.
ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ಸಂಭವಿಸಿದೆ. ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ ನಡೆದಿದೆ.
ನಗರದ ಪಡೀಲ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ತೀವ್ರ ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಪ್ರಮುಖ ಮಾಧ್ಯಮ ವೃತ್ತಿಪರ ಮತ್ತು ಪ್ರಾದೇಶಿಕ ಡಿಜಿಟಲ್ ಪತ್ರಿಕೋದ್ಯಮದ ಬೆಳವಣಿಗೆಯ ಹಿಂದಿನ ಪ್ರಮುಖ ವ್ಯಕ್ತಿ ಬ್ರಯನ್ ಫೆರ್ನಾಂಡಿಸ್ ಅವರು ಶನಿವಾರ ಸಂಜೆ 8:30 ರ ಸುಮಾರಿಗೆ ಮಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.
ಸ್ಥಳೀಯಾಡಳಿತ ಚುನಾವಣೆ ನಡೆಸುವ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು.
ದಾವಣಗೆರೆ ದಕ್ಷಿಣ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಭೀತಿ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗೆ ಸೋಲು ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.