Showing 20 of 4113 posts • Page 44 of 206
ಪಂಜಿನಮೊಗರು ರಾಯಿಕಟ್ಟೆಯಿಂದ ಪ್ರಾರಂಭವಾಗಿ ಕುಂಜತ್ತಬೈಲಿನವರೆಗಿನ ನಾಲ್ಕು ಕಿಲೋಮೀಟರ್ ಉದ್ದದ ಉಪನದಿಯಿದ್ದು, ಸ್ಥಳೀಯ ಕಾರ್ಖಾನೆಗಳಿಂದ ಬಿಡುವ ಕೆಮಿಕಲ್ಸ್ ನಿಂದ ನದಿಯ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದೆ.
ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಪಂಪ್ವೆಲ್ನಿಂದ ನಂತೂರ್ ರಸ್ತೆ ಬದಿಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ತನ್ನ ಬ್ಯಾಂಕಿಂಗ್ ಶ್ರೇಷ್ಠತೆಯ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) ನ ಮಂಗಳೂರು ಪ್ರಾದೇಶಿಕ ಕಚೇರಿಯು ಆರೋಗ್ಯ ಜಾಗೃತಿಗಾಗಿ ವಾಕಥಾನ್ ಎಂಬ ಸಮುದಾಯ ಕೇಂದ್ರಿತ ಉಪಕ್ರಮಗಳ ಸರಣಿಯೊಂದಿಗೆ ತನ್ನ 90 ನೇ ಸಂಸ್ಥಾಪನಾ ದಿನವನ್ನು ಆಚರಿಸಿತು.
ಕೂಳೂರು ಬಳಿಯ ರಾಯಿಕಟ್ಟೆ ಪ್ರದೇಶದಲ್ಲಿ ಹರಿಯುವ ಪಲ್ಗುಣಿ ನದಿಗೆ ಸೇರುವ ಹಳ್ಳದಲ್ಲಿ ನೀರು ಕೊಳೆತು ನಾರುತ್ತಿದೆ. ಮೀನುಗಳು ಸತ್ತಿವೆ. ಕಳೆದ ಒಂದು ವಾರದಿಂದ ಈ ಸ್ಥಿತಿ ಇದ್ದರೂ ಜಿಲ್ಲಾಡಳಿತ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.
ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಸಿಹಿ ಸುದ್ದಿ ನೀಡಬೇಕಿದ್ದ ರೈಲ್ವೆ ಇಲಾಖೆ ಕರಾವಳಿಗರಿಗೆ ಡಬಲ್ ಆಘಾತವನ್ನು ನೀಡಿದೆ. ಹೆಚ್ಚಿನ ಸೌಕರ್ಯ ಕೊಡುವ ಬದಲು ಇದ್ದ ಸೌಕರ್ಯವನ್ನೂ ಕಿತ್ತುಕೊಳ್ಳುವ ಸೂಚನೆಯ ನಿರ್ಧಾರಕ್ಕೆ ಮಂಗಳೂರಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮಹಾನಗರ ಪಾಲಿಕೆಯು ಆಸ್ತಿ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದ್ದು, ಇದು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ.
ಮುಕ್ಕ ಶ್ರೀನಿವಾಸ್ ಕಾಲೇಜಿನಲ್ಲಿ ಕ್ರಿಮಿನಾಲಜಿ ಬಿಎಸ್ಸಿ ಕಲಿಯುತ್ತಿದ್ದ ಕಾಸರಗೋಡು ಮೂಲದ ಹಿಂದು ಯುವತಿ, ಕೇರಳದ ವಯನಾಡು ಮೂಲದ ಮುಸ್ಲಿಂ ಯುವಕನೊಂದಿಗೆ ಎಸ್ಕೇಪ್ ಆಗಿದ್ದು, ವಯನಾಡಿನಲ್ಲಿ ರಿಜಿಸ್ಟರ್ ಮದುವೆಯಾಗಲು ಮುಂದಾಗಿರುವ ಘಟನೆ ನಡೆದಿದೆ.
ನಗರದ ಕಾವೂರು ಮೂಲದ ಯುವಕನೊಬ್ಬ ಮ್ಯಾಟ್ರಿಮೋನಿ ಸೈಟ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುತ್ತೇನೆಂದು ನಂಬಿಸಿ ಮುಂಬೈ, ಉಡುಪಿ ಹೀಗೆ ಹಲವೆಡೆ ಯುವತಿಯರನ್ನು ಮದುವೆಯಾಗಿ ಅವರಿಂದ ಹಣ ಪಡೆದು ವಂಚಿಸಿದ್ದಲ್ಲದೆ, ಇನ್ನೂ ಹಲವು ಯುವತಿಯರನ್ನು ಮದುವೆಯಾಗುವ ಭರವಸೆ ನೀಡಿ ಹಣ ಪಡೆದು ಮೋಸಗೈದು ಕಂತ್ರಿ ಬುದ್ಧಿ ತೋರಿಸಿ ಕಾವೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಳ್ತಂಗಡಿ ವಿದ್ಯಾರ್ಥಿನಿ ಅಪಹರಣ ಕೇಸ್ ಟ್ವಿಸ್ಟ್ ಸಿಕ್ಕಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಪಿ ಅರುಣ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಿಗೆ 1991 ಮತ್ತು 1993ರರ ಅಧಿಸೂಚನೆಯಿಂದ ವಿನಾಯತಿ ನೀಡಿ ಮಾನ್ಯ ಜಿಲ್ಲಾಧಿಕಾರಿಗಳು ಹೊರಡಿಸಿದ ಆದೇಶವನ್ನು ಭಾರತ ಕಮ್ಯುನಿಸ್ಟ್ ಪಕ್ಷದ ಮಂಗಳೂರು ತಾಲೂಕು ಸಮಿತಿ ಸ್ವಾಗತಿಸುತ್ತದೆ ಹಾಗೂ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತದೆ. ಈ ಆದೇಶದಿಂದ ಎಲ್ಲಾ ಕೆಎಸ್ಆರ್ಟಿಸಿ ಬಸ್ಸುಗಳು
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.
ಭಾರೀ ಕುತೂಹಲ ಮೂಡಿಸಿದ್ದ ಕಾಲೇಜು ಓದುತ್ತಿದ್ದ ಅಪ್ರಾಪ್ತ ಯುವತಿಯ ಅಪಹರಣ ಯತ್ನ ಪ್ರಕರಣ ಪೊಲೀಸರ ತನಿಖೆಯಲ್ಲಿ ಠುಸ್ ಆಗಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ ನಲ್ಲಿ ಗೀಚಿಕೊಂಡು ಅಪಹರಣ ಪ್ರಹಸನದ ಕತೆ ಕಟ್ಟಿದ್ದಾಳೆಂದು ಪೊಲೀಸರು ಪತ್ತೆ ಮಾಡಿದ್ದಾರೆ.
ಕದಿಕೆ ಹಳೆಯಂಗಡಿಯಲ್ಲಿ ಇರುವ ಹಝತ್ ಸೈಯದ್ ಮೌಲಾನವಲಿಯುಲ್ಲಾಹಿ (ಖ.ಸಿ) ದರ್ಗಾ ಶರೀಫ್ ಇದರ ವಾರ್ಷಿಕ ಉರೂಸ್ ಸಮಾರಂಭವು ಫೆಬ್ರವರಿ 11ರಿಂದ 14ರವರೆಗೆ ಭಕ್ತಿಭಾವದಿಂದ ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಕುಡುಂಬೂರು ತಿಳಿಸಿದ್ದಾರೆ.
ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಸ್ವಾಯತ್ತ) ತನ್ನ ಬೆಳ್ಳಿ ಮಹೋತ್ಸವ ಆಚರಣೆಗಳನ್ನು ಫೆಬ್ರವರಿ 25ರ ಬುಧವಾರ ಅಧಿಕೃತವಾಗಿ ಉದ್ಘಾಟಿಸಲು ಸಜ್ಜಾಗಿದೆ.
ಕೊಟ್ಟಾರ ಚೌಕಿ, ಮಾಲೆಮಾರ್ ಹಾಗೂ ಮಾಲಾಡಿ ಕೋರ್ಟ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕಾಡುತ್ತಿರುವ ರಸ್ತೆ ಸಂಚಾರ ಸುರಕ್ಷತೆ ಹಾಗೂ ಒಳಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹಿಸಿ ಜನಹಿತ ರಕ್ಷಣಾ ಸಮಿತಿ ನೆಕ್ಕಿಲ ಮಾಲೆಮಾರ್ ಕೊಟ್ಟಾರ ಚೌಕಿ ನೇತೃತ್ವದಲ್ಲಿ ಸ್ಥಳೀಯ ನಾಗರಿಕರು ಧರಣಿ ಪ್ರತಿಭಟನೆ ನಡೆಸಿದರು.
ವಾಮಂಜೂರಿನ ಉಳೈಬೆಟ್ಟು ಟೈಲ್ ಫ್ಯಾಕ್ಟರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಅಮಾನುಷ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ದೃಢೀಕರಿಸಿದೆ.
ಶ್ರೀ ಕ್ಷೇತ್ರ ಅರ್ಕುಳ ಧರ್ಮದೇವತೆಗಳ ಅನುಗ್ರಹ ಹಾಗೂ ಭಕ್ತಾದಿಗಳ ನಿರಂತರ ಸಹಕಾರದಿಂದ ಕ್ಷೇತ್ರದಲ್ಲಿ ಅನೇಕ ಧಾರ್ಮಿಕ ಹಾಗೂ ಕ್ಷೇತ್ರಾಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರುತ್ತಿರುವುದು ನಮಗೆಲ್ಲರಿಗೂ ಅಪಾರ ಸಂತೋಷದ ವಿಷಯವಾಗಿದೆ.
: ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ನಡೆದಿದೆ.