Showing 20 of 4469 posts • Page 46 of 224
ಓವರ್ ಟೇಕ್ ಮಾಡುವ ಭರದಲ್ಲಿ ತನ್ನ ಪಾಡಿಗೆ ಹೋಗುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೈನ್ಸ್ ಒಯ್ಯುತ್ತಿದ್ದ ಭಾರೀ ಗಾತ್ರದ ಟಿಪ್ಪರ್ ಗೆ ಬಡಿದು ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ನಂತೂರು ತಾರಾಯಿತೋಟ ಎಂಬಲ್ಲಿ ನಡೆದಿದೆ.
ಮಂಗಳೂರಿನ ಮೂಡುಬಿದಿರೆ ಸಮೀಪದ ತೋಡಾರ್ ಪಡೋಡ್ಡಿ ಎಂಬಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ತನ್ನ ದಿನಪೂರ್ತಿ ನಡೆದ ಸಾಂಸ್ಕೃತಿಕ ಉತ್ಸವ “ಮಿಲಾನ್ 2026” ಅನ್ನು ಏಪ್ರಿಲ್ 10, 2026ರಂದು ಭವ್ಯ ಸಂಜೆ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಮಾಪ್ತಿಗೊಳಿಸಿತು. ಈ ಕಾರ್ಯಕ್ರಮವು ಸೃಜನಶೀಲತೆ ಮತ್ತು ವೈವಿಧ್ಯದ ಸಂಭ್ರಮವನ್ನು ಪ್ರತಿಬಿಂಬಿಸಿತು.
ಪ್ರೀತಿ ಅನ್ನೋದು ಬದುಕಿಗೆ ದಾರಿಯಾಗಬೇಕಿತ್ತು, ಆದರೆ ಇಲ್ಲೊಬ್ಬ ಯುವಕನ ಪಾಲಿಗೆ ಅದೇ ಪ್ರೀತಿ ಮರಣಶಾಸನವಾಗಿದೆ. ಪ್ರೀತಿಸಿದ ಹುಡುಗಿಯ ಮಾನಸಿಕ ಕಿರುಕುಳ ತಾಳಲಾರದೆ 22 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಂತೆ ರಿಕ್ಷಾವೊಂದು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ನಡೆದಿದೆ.
ಯುವ ನಿರೂಪಕನೋರ್ವ ಮದರಂಗಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಬೆಂಕಿ ನಂದಿಸಲು ಹೋದಾಗ ಬೆಂಕಿಯಲ್ಲಿ ಸಿಲುಕಿ ತೀವ್ರ ಸುಟ್ಟ ಗಾಯಗಳಾಗಿದ್ದ ವೃದ್ಧರೊಬ್ಬರು ಗುರುವಾರ ನಿಟ್ಟೆ ಗ್ರಾಮದ ಬಜೆಕಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಹಿಂದೂ ಸಮಾಜದ ಐಕ್ಯತೆಗೆ ಮತ್ತು ಲೋಕಕಲ್ಯಾಣಾರ್ಥವಾಗಿ ಏ 12 ರಂದು ಆದಿತ್ಯವಾರ ಬೆಳಗ್ಗೆ 6 ಗಂಟೆಗೆ 6ನೇ ವರ್ಷದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ನಡೆಯಲಿದೆ.
ಹುಬ್ಬಳ್ಳಿ ,ಧಾರವಾಡ ಜಿಮ್ನಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್ ಪಿ ಭಜರಂಗದಳ ಮಂಗಳೂರು ಈ ಪ್ರಕರಣವನ್ನ ಖಂಡಿಸಿದೆ.
ಎಎಸ್ಸೆ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಗುರುಪುರ ಶಾಂಭವಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಪ್ರಕರಣ ನಡೆದಿದ್ದು, ಶೋಧಕಾರ್ಯದ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ.
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪುಣ್ಯವಸರದಲ್ಲಿ, ಪೂರ್ವ ಸಂಪ್ರದಾಯದಂತೆ ಅರ್ಕುಳ ಬೀಡಿನಿಂದ ಶ್ರೀ ದೈವಗಳ ಭಂಡಾರವನ್ನು ಸಕಲ ಬಿರುದಾವಳಿಗಳೊಂದಿಗೆ ಶ್ರೀ ಕ್ಷೇತ್ರ ಪೊಳಲಿಗೆ ಆರಾಡದ ದಿನ ತರಲಾಗುತ್ತದೆ. ಅದೇ ದಿನ ರಾತ್ರಿ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳಿಗೆ ನೇಮ ಸೇವೆಯು ಭಕ್ತಿಭಾವಪೂರ್ಣವಾಗಿ ನೆರವೇರಲಿದೆ.
NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ NSUI ನ 56ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ “ಧ್ವಜಾರೋಹಣ” ಕಾರ್ಯಕ್ರಮ ಮಲ್ಲಿಕಟ್ಟೆಯ ಇಂದಿರಾ ಭವನದಲ್ಲಿ ನಡೆಯಿತು.
ಗುರುಪುರ ಶಂಭಾವಿ ನದಿಗೆ ಹಾರಿ ಯುವಕ ಆತ್ಮಹತ್ಯೆ!
ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಮಾದಕ ವಸ್ತು ಜಾಲದ ವಿರುದ್ಧ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು ಹೊರವಲಯದ ಗುರುಪುರ ಕೈಕಂಬ ಸಮೀಪ ಇಂದು ರೌದ್ರಾವತಾರ ನಡೆದಿದೆ. ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಪ್ರಯಾಣಿಕರ ಬಸ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬಸ್ ಚಾಲಕನ ಕಾಲು ಮುರಿದು ಹೋಗಿದ್ದು, ಸ್ಥಿತಿ ಗಂಭೀರವಾಗಿದೆ.
ಮೀನುಗಾರಿಕಾ ಬಂದರ್ ಬಳಿ ನದಿಯಲ್ಲಿ ಶವ ಪತ್ತೆಯಾಗಿದೆ. ಕೊಲೆ ಮಾಡಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಸೀರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿ ಎಂಬ ಮಾಹಿತಿ ತಿಳಿದು ಬಂದಿದೆ.
ಗ್ಯಾಸ್ ವಿತರಣೆ ವಿಳಂಬ ಮಾಡಿ ಗ್ಯಾಸ್ ಏಜನ್ಸಿಗಳು ಅಕ್ರಮ ದಂಧೆಗಿಳಿದಿದೆ ಅಮೇರಿಕಾ-ಇರಾನ್ ಯುದ್ಧದ ಲಾಭ ಪಡೆಯಲು ಗ್ಯಾಸ್ ಮಾಫಿಯಾಗಳು ಸಕ್ರಿಯವಾಗಿದ್ದು ಅಕ್ರಮ ದಂಧೆ ತಡೆಯಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಹೇಳಿದರು.
ಗೌಡ ಸಾರಸ್ವತ ಬ್ರಾಹ್ಮಣ ಸಮಾಜವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ 2017 ರಲ್ಲಿ ಆರಂಭವಾದ ಜಿಪಿಎಲ್ ಉತ್ಸವ್ ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ಅಮ್ಗಿಲೆ ದಿ ಒರಿಜಿನಲ್ ಆಭರಣ್ ಜಿಪಿಎಲ್ ಉತ್ಸವ್ 2026 ಈ ಬಾರಿ ದಶಮಾನೋತ್ಸವದ ಸಂಭ್ರಮ.
ಇಲ್ಲಿಯ ಸುಜೀರ್ ಸಿ. ವಿ. ನಾಯಕ್ ಹಾಲ್ನಲ್ಲಿ ಕಳೆದ ಒಂದು ವರ್ಷದಿಂದ ಕೊಂಕಣಿ ವಾಚನ ಸಂಘ ಕಾರ್ಯಾಚರಿಸುತಿದ್ದು ಪ್ರತಿ ಬುಧವಾರ ಆಸಕ್ತ ಕೊಂಕಣಿ ಭಾಷಾ ಪ್ರೇಮಿಗಳು ಕೊಂಕಣಿ ಸಾಹಿತ್ಯದ ವಾಚನ ಮಾಡುತಿದ್ದಾರೆ. ಈ ಬುಧವಾರದಂದು ಈ ವಾಚನ ಸತ್ರದ ವಿಶೇಷಾಂಕ ನೆರವೇರಿತು.